ಕಲಬುರಗಿಯಲ್ಲಿ ರೈಲ್ವೆ ವಿಭಾಗ ರಚನೆಯಿಲ್ಲ : ಗೋಯಲ್ ಸ್ಪಷ್ಟನೆ
ಕಲಬುರಗಿ ಕಲಬುರ್ಗಿ ಸೇರಿದಂತೆ ಮೂರು ಕಡೆಗಳಲ್ಲಿ ರೈಲ್ವೆ ವಿಭಾಗ ಆರಂಭಿಸುವ ಪ್ರಸ್ತಾವವನ್ನು ಹಿಂದಕ್ಕೆ ಪಡೆಯಲಾಗಿದೆ ಎಂದು ರೈಲ್ವೆ ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಇಂದು ತಿಳಿಸಿದ್ದಾರೆ.
2014ರ ಮುಂಗಡ ಪತ್ರದಲ್ಲಿ ಕಲಬುರಗಿಯಲ್ಲಿ ರೈಲ್ವೆ ವಿಭಾಗ ರಚನೆ ಮಾಡುವುದಾಗಿ ಘೋಷಿಸಿತ್ತು.
ಪ್ರಶ್ನೋತ್ತರ ಕಲಾಪದಲ್ಲಿ ಸಂಸದ ಡಾ.ಉಮೇಶ ಜಾಧವ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಗೋಯಲ್, ಹಿರಿಯ ರೈಲ್ವೆ ಅಧಿಕಾರಿಗಳ ತಂಡವು ರೈಲ್ವೆ ವಿಭಾಗವನ್ನು ಆರಂಭಿಸುವ ಬಗ್ಗೆ ಪರಿಶೀಲನೆ ನಡೆಸಿತು. ಕಾರ್ಯಾಚರಣೆ, ಹಣಕಾಸು, ಆಡಳಿತಾತ್ಮಕ ಸೇರಿದಂತೆ ಇತರೆ ಅಂಶಗಳನ್ನು ಗಮನಿಸಿದ ಬಳಿಕ ಈ ಪ್ರಸ್ತಾವ ಕೈಬಿಡಬೇಕು ಎಂದು ವರದಿ ಸಲ್ಲಿಸಿದೆ. ಈ ವರದಿಯನ್ನು ಸಕ್ಷಮ ಪ್ರಾಧಿಕಾರವು ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.
ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ಅವರನ್ನುರೈಲ್ವೆ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರ್ಗಿ ರೈಲ್ವೆ ವಿಭಾಗ ಆರಂಭಿಸುವ ನಿರ್ಧಾರವನ್ನು ಬಜೆಟ್ನಲ್ಲಿ ಪ್ರಕಟಿಸಿದ್ದರು.ಇದಕ್ಕಾಗಿ . ರಾಜ್ಯ ಸರ್ಕಾರ ಜಮೀನನ್ನೂ ನೀಡಿತ್ತು.
ಈಗ ಪ್ರಸ್ತಾಪವನ್ನು ಕೈಬಿಟ್ಟಿರುವುದಕ್ಕೆ ಈ ಭಾಗದ ಜನರ ಆಕ್ರೋಶಕ್ಕೆ ಕಾರಣವಾಗಿದೆ.