‘ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಕೊಡಲು 90 ಜೊತೆ ಬಟ್ಟೆ ಖರೀದಿಸಿದ್ದೇನೆ’
ಬೆಂಗಳೂರು: ಬಿಜೆಪಿ ಗೆಲ್ಲುವ ಪಕ್ಷವಾಗಿದೆ. ಕಾಂಗ್ರೆಸ್ ಸೋಲಿನ ಪಕ್ಷವಾಗಿದೆ. ಕಾಂಗ್ರೆಸ್ನಲ್ಲಿ ತನ್ನ ಅಸ್ವಿತ್ವ ಕಳೆದುಕೊಳ್ಳುತ್ತಿರುವ ಸಿದ್ದರಾಮಯ್ಯ ಅವರು, ಇನ್ನೊಂದು ತಿಂಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಿಡಲಿದ್ದಾರೆ ಎಂದಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಎಲ್ಲೆಲ್ಲೋ ಹೋಗಿ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ. ಬೇಕಿದ್ದರೆ ನಳಿನ್ ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡ್ತೀನಿ. ಇನ್ನೂ 19 ಸಿಡಿ ಇದೆಯಂತೆ, ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡಾ ಎಂದು ಕಿಡಿಕಾರಿದ್ದಾರೆ.
ಒಬ್ಬ ಮಜಾವಾದಿ ನಾಯಕನ ರಾತ್ರಿ ಬದುಕು ಹಾಗೂ ಬಟ್ಟೆ ಖರೀದಿ ಬಗ್ಗೆ ಮೈಸೂರಿನ ಪ್ರಖ್ಯಾತ ಜಲದರ್ಷಿನಿಯಲ್ಲಿ ಸಾಕಷ್ಟು ರೋಚಕ ಕತೆಗಳಿವೆ ಅಂತೆ. ಬೇಕಿದ್ದರೆ ನಿಮ್ಮ ಸಮಕಾಲೀನ ಗೆಳೆಯರನ್ನು ಕೇಳಿ ನೋಡಿ. ಆಗ ಯಾರಿಗೆ, ಯಾರು, ಎಷ್ಟು ಜೊತೆ ಬಟ್ಟೆ ಖರೀದಿಸಿ ಕೊಟ್ಟಿದ್ದರು ಎಂಬುದರ ಸ್ಪಷ್ಟ ಚಿತ್ರಣ ಸಿಗಬಹುದು ಎಂದು ರಾಜ್ಯ ಬಿಜೆಪಿ ಘಟಕ ಸಿದ್ದರಾಮಯ್ಯ ಅವರ ವಿರುದ್ಧ ಟ್ವೀಟ್ ಮಾಡಿತ್ತು.