ಕಲಬುರಗಿ : 51 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ನಿಧನ:129 ಪಾಸಿಟಿವ್
ಕಲಬುರಗಿ : ಕಲಬುರಗಿ ನಗರದ ಹಳೇ ಜೇವರ್ಗಿ ರಸ್ತೆಯ ರೆಹಮತ್ ನಗರದ 51 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ನಿಧನರಾಗಿದ್ದಾರೆ ಎಂದು ಮಂಗಳವಾರದ ಅರೋಗ್ಯ ಬುಲೆಟಿನ್ ಖಚಿತಪಡಿಸಿದೆ.
ಸಾರಿ ಹಿನ್ನೆಲೆಯೊಂದಿಗೆ ಇವರು ಮಾ.14 ರಂದು ಖಾಸಗಿ ಅಸ್ಪತ್ರೆಗೆ ದಾಖಲಾಗಿದ್ದು, ಮಾ.22 ರಂದು ನಿಧನ ಹೊಂದಿರುತ್ತಾರೆ.
ಇದರಿಂದ ಜಿಲ್ಲೆಯಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದ 334 ಜನ ನಿಧನರಾಗಿದ್ದಾರೆ.
ಇಂದು ಪ್ರಕಟವಾದ ಆರೋಗ್ಯ ಬುಲೆಟಿನ್ ನಲ್ಲಿ 129 ಪಾಸಿಟಿವ್ ಪ್ರಕರಣ ವರದಿಯಾಗಿದ್ದು , ಒಟ್ಟು ಕಲಬುರಗಿಯಲ್ಲಿ ಇದರೊಂದಿಗೆ 22925 ಪಾಸಿಟಿವ್ ಕೇಸ್ ಗ ಲಾದಂತಾಗಿದೆ. 30 ಜನ ಆಸ್ಪತ್ರೆ ಯಿಂದ ಇಂದು ಬಿಡುಗಡೆಯಾಗಿದ್ದಾರೆ. ಈ ವರೆಗೆ 22046 ಜನ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ.545 ಜನ ಸಕ್ರಿಯ ರೋ ಗಿಗಳು ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.