ಏಪ್ರಿಲ್ 1ರಿಂದ 45 ವರ್ಷ ಮೇಲ್ಪಟ್ಟವರಿಗೂ ಲಸಿಕೆ
ದಿನೇ ದಿನೇ ಅಧಿಕವಾಗುತ್ತೀರುವ ಕೊರೋನಾ ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಈಗ 45 ವಯಸ್ಸಿನ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡಲು ಕೇಂದ್ರ ನಿರ್ಧರಿಸಿದ್ದು, ಈ ಮೂಲಕ ಹಂತ ಹಂತವಾಗಿ ದೇಶದಲ್ಲಿ ಲಸಿಕೆ ಅಭಿಯಾನವನ್ನು ಕೇಂದ್ರ ವಿಸ್ತರಿಸುತ್ತಿದೆ.
ಅರ್ಹರು ತಕ್ಷವೇ ರಿಜಿಸ್ಟ್ರೇಶನ್ ಮಾಡಿಸಿ ಲಸಿಕೆ ಪಡೆಯಬೇಕು ಎಂದು ಕೇಂದ್ರ ಸಚಿವ ಪ್ರಕಾಶ್ ಜಾವೇಡಕರ್ ಹೇಳಿದ್ದಾರೆ.
ಇದೇ ತಿಂಗಳ 1 ರಿಂದ ಕೇಂದ್ರ ಸರ್ಕಾರ 60 ವರ್ಷ ಮೇಲ್ಪಟ್ಟ ಹಾಗೂ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ 45 ವರ್ಷ ಮೇಲ್ಪಟ್ಟವರಿಗೆ ಕೊರೋನಾ ಲಸಿಕೆ ನೀಡುತ್ತಿದೆ.
ಜನವರಿ 16 ರಿಂದ ಭಾರತದಲ್ಲಿ ಲಸಿಕೆ ನೀಡುವಿಕೆ ಅಭಿಯಾನ ಆರಂಭಗೊಂಡಿದೆ. ಆರಂಭಿಕ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಕೊರೋನಾ ವಾರಿಯರ್ಸ್ಗೆ ಲಸಿಕೆ ನೀಡಲಾಗಿತ್ತು.
ಈಗ 45 ವಯಸ್ಸಿನ ಮೇಲ್ಪಟ್ಟವರೂ ಸಹ ಕೊರೋನಾ ಲಸಿಕೆಯನ್ನು ಪಡೆಯಬಹುದಾಗಿದೆ. ಈಗಾಗಲೇ ಕೆಲವು ಆರೋಗ್ಯ ಸಮಸ್ಯೆ ಇಲ್ಲದವರೂ ಸಹ ಕೋವಿಡ್-19 ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಜಾವೇಡಕರ್ ಮಾಹಿತಿ ನೀಡಿದ್ದಾರೆ.