ಆಫ್ ಲೈನ್ ತರಗತಿ, ಪರೀಕ್ಷೆಗಳ ಬಗ್ಗೆ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ…?
ರಾಜ್ಯದಲ್ಲಿ ಕೊರೋನಾ ಎರಡನೇ ಅಲೆಯ ಅಬ್ಬರ ಶುರುವಾಗಿದೆ. ಇಂತಹ ಸಂದರ್ಭದಲ್ಲಿ ಪದವಿ ವಿದ್ಯಾರ್ಥಿಗಳ ಆಫ್ ಲೈನ್ ತರಗತಿ, ಪರೀಕ್ಷಾ ಕ್ರಮದಲ್ಲಿ ಬದಲಾವಣೆ ಆಗಲಿದೆ ಎನ್ನಲಾಗುತ್ತಿತ್ತು. ಆದ್ರೇ. ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರು ಹೇಳಿದ್ದೇನು ಅಂತ ಮುಂದೆ ಓದಿ.
ಕೋರೋನಾ ಕಾರಣದಿಂದಾಗಿ ಪದವಿ ತರಗತಿಗಳ ಆಫ್ ಲೈನ್ ತರಗತಿಗಳನ್ನು ನಿಲ್ಲಿಸೋದಿಲ್ಲ. ಪರೀಕ್ಷೆಗಳಲ್ಲಿಯೂ ಯಾವುದೇ ವ್ಯತ್ಯಾಸ ಆಗೋದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಪದವಿ ಕೋರ್ಸ್ ನ ತರಗತಿಗಳು ನಡೆಯಲಿವೆ ಎಂಬುದಾಗಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಇಂದು ಕೋವಿಡ್ 2ನೇ ಅಲೆಯ ಹಿನ್ನಲೆಯಲ್ಲಿ ಉನ್ನತ ಶಿಕ್ಷಣ ವಿಭಾಗದ ಪರಿಸ್ಥಿತಿ ಕುರಿತು ಅವಲೋಕನ ನಡೆಸಿದಂತ ಅವರು, ಕಾಲೇಜು ಶಿಕ್ಷಣದ ಮೇಲೆ ಕೊರೋನಾ ಎರಡನೇ ಅಲೆಯ ಎಫೆಕ್ಟ್ ಬೀರಲಿದೆ ಎನ್ನಲಾಗುತ್ತಿದೆ. ಆದ್ರೇ ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ, ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ.
ವಿವಿಧ ವಿಶ್ವವಿದ್ಯಾಲಯಗಳಲ್ಲಿ, ಕಾಲೇಜುಗಳಲ್ಲಿ ಈ ಹಿಂದೆ ನಿಗದಿಯಾಗಿರುವಂತೆಯೇ ಪರೀಕ್ಷೆಗಳು ನಡೆಯಲಿವೆ. ಸರ್ಕಾರ ಹೊರಡಿಸಿರುವ ವೇಳಾಪಟ್ಟಿಯಂತೆ ಪರೀಕ್ಷೆಗಳು ನಡೆಯಲಿವೆ. ವಿದ್ಯಾರ್ಥಿಗಳಿಗೆ ಅನುಕೂಲಕರವಾದಂತ ರೀತಿಯಲ್ಲಿ ಆಫ್ ಲೈನ್ ತರಗತಿಗಳನ್ನು ಮುಂದುವರೆಸಲಾಗುವುದಾಗಿ ಹೇಳಿದರು.