ಕಲಬುರಗಿ : ಎ.1 ರಿಂದ 45 ವರ್ಷ ಮೇಲ್ಪಟ್ಟ ನಾಗರಿಕರಿಗೆ ಲಸಿಕೆ:ಅಷ್ಠಗಿ ಸ್ವಾಗತ
ಕಲಬುರಗಿ : ಎ. 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರಿಗೂ ಕೋವಿಡ್ ಲಸಿಕೆ ನೀಡಲು ಕೇಂದ್ರ ಸಚಿವ ಸಂಪುಟ ತೀರ್ಮಾನಿಸಿದ್ದು, 45 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರು ಲಸಿಕೆ ಪಡೆಯಲು ನೋಂದಣಿ ಮಾಡಿಸಿಕೊಳ್ಳಿ ಎಂದು ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ಜೀ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿರುವುದು ಸ್ವಾಗತಾರ್ಹ ವಾಗಿದೆ ಹಾಗೂ ಈ ಲಸಿಕೆ ಅಭಿಯಾನ ಪ್ರಧಾನಿ ನರೇಂದ್ರ ಮೋದಿ ಯವರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡರಾದ ಅಂಬಾರಾಯ ಶ್ರೀ ಅಂಬಾರಾಯ ಅಷ್ಠಗಿ ಹೇಳಿದ್ದಾರೆ.
ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ