ಕಲಬುರಗಿ : ಹೋಳಿ ನಿಮಿತ್ಯ ಜಿಲ್ಲೆಯಾದ್ಯಂತ ಎರಡು ದಿನ ಮದ್ಯ ಮಾರಾಟ ನಿಷೇಧ
ಕಲಬುರಗಿ : ಜಿಲ್ಲೆಯಾದ್ಯಂತ 28.3.2021 ಮತ್ತು 29.3.2021ರ ವರೆಗೆ ಎರಡು ದಿನಗಳ ಕಾಲ ಹೋಲಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ 28.3.2021ರ ಬೆಳಿಗ್ಗೆ 6.00 ಗಂಟೆಯಿAದ 30.3.2021ರ ಬೆಳಿಗ್ಗೆ 6.00 ಗಂಟೆಯ ವರೆಗೆ ಎಲ್ಲ ತರಹದ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಜಾರಿ ಮಾಡಿದ್ದಾರೆ.
ಈ ಸಮಯದಲ್ಲಿ ಯಾವುದೇ ತರಹದ ಮದ್ಯದ ಅಂಗಡಿಗಳು ನಿಷೇಧಿಸಿ ಆದೇಶಿಸಿರುವ ಜಿಲ್ಲಾಧಿಕಾರಿಗಳು ಜಿಲ್ಲೆಯಾದ್ಯಂತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಹೋಲಿ ಸಮಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಗಟ್ಟಲು ಈ ಆದೇಶವನ್ನು ಜಾರಿ ಮಾಡಲಾಗಿದೆ