ನ್ಯಾಯಾಧೀಶರ ಮುಂದೆ ಹೇಳಿಕೆ ಸಿಡಿ ಯುವತಿ 5ನೇ ವೀಡಿಯೋ ಬಿಡುಗಡೆ
ಬೆಂಗಳೂರು : ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷಣಕ್ಕೊಂದು ತಿರುವು ಸಿಗುತ್ತಿದ್ದು, ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಹೇಳಿಕೆ ನೀಡಿದ್ದ ಬೆನ್ನಲ್ಲೇ ಸಿಡಿ ಯುವತಿ 5ನೇ ವೀಡಿಯೋ ಹೇಳಿಕೆಯನ್ನು ಬಿಡುಗಡೆ ಮಾಡಿ ಪ್ರಭಾವ ಬೀರಿ ನಮ್ಮ ತಂದೆ, ತಾಯಿಯಿಂದ ಹೇಳಿಕೆ ಕೊಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮ ತಂದೆ, ತಾಯಿ ಬಾಯಿಂದ ಏನೇನೋ ಹೇಳಿಸಿ, ಪ್ರಕರಣವನ್ನೇ ಬೇರೆ ರೀತಿ ತಿರುಗಿಸುತ್ತಿದ್ದಾರೆ. ಇಲ್ಲಿ ನ್ಯಾಯ ಸಿಗಬೇಕಿರುವುದು ನನಗೆ, ಮೊದಲು ನನ್ನ ಬಗ್ಗೆ ಮಾತನಾಡಬೇಕು. ಅದನ್ನು ಬಿಟ್ಟು ಬೇರೆಯವರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ನನಗೆ ಬೇಕಿಲ್ಲ ಅವೆಲ್ಲ ಅವರ ವೈಯಕ್ತಿಕ ವಿಚಾರ. ಈಗ ನಾನು ಬಂದು ಹೇಳಿಕೆ ನೀಡಬೇಕೆಂದರೂ ನನಗೆ ಭಯವಾಗುತ್ತಿದೆ ಎಂದು ಹೇಳಿದ್ದಾರೆ.
ನಾನು ನ್ಯಾಯಾಧೀಶರ ಮುಂದೆಯೇ ಬಂದು ಹೇಳಿಕೆ ನೀಡುತ್ತೇನೆ. ದಯವಿಟ್ಟು ನನಗೆ ಎಲ್ಲರೂ ಸಹಾಯ ಮಾಡಿ, ಎಲ್ಲ ಮುಖಂಡರಲ್ಲೂ ನಾನು ಕೇಳಿಕೊಳ್ಳುವುದು ಇಷ್ಟೇ ಎಂದು ಸಿಡಿ ಯುವತಿ ತಮ್ಮ 5ನೇ ವೀಡಿಯೋ ಹೇಳಿಕೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.