Coronavirus | ಇಂದಿನಿಂದ ಮಹಾರಾಷ್ಟ್ರದಲ್ಲಿ ರಾತ್ರಿ 8ರಿಂದ ಬೆಳಗ್ಗೆ 7ರವರೆಗೆ ನೈಟ್ ಕರ್ಫ್ಯೂ ಜಾರಿ; ನಿಯಮ ಮೀರಿದರೆ ದಂಡ!

ಮುಂಬೈ: ಮಹಾರಾಷ್ಟ್ರದಲ್ಲಿ ದಿನದಿಂದ ದಿನಕ್ಕೆ ಮಾರಕ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಸರ್ಕಾರ ಇಂದಿನಿಂದ (ಮಾರ್ಚ್ 28) ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ವಿಧಿಸಿದೆ. ಮುಂದಿನ ಆದೇಶದವರೆಗೆ ರಾತ್ರಿ ಕರ್ಫ್ಯೂ ಜಾರಿಯಲ್ಲಿ ಇರುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ. ಕೋವಿಡ್-19 ಹರಡುವಿಕೆ ತಡೆಯುವ ಸಲುವಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರು ಎಲ್ಲ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಈ ಸಂಬಂಧ ಮಹಾರಾಷ್ಟ್ರ ಸರ್ಕಾರ ಶನಿವಾರ ಕೊರೋನಾ ತಡೆ ಅಭಿಯಾನವನ್ನು ಮತ್ತೆ ಪ್ರಾರಂಭಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು ಏಪ್ರಿಲ್ 15ರ ಮಧ್ಯರಾತ್ರಿಯಿಂದಲೇ ಜಾರಿಯಲ್ಲಿರಲಿವೆ. ಒಂದು ವೇಳೆ ಸರ್ಕಾರದ ಈ ನಿಯಮಗಳನ್ನು ಯಾರಾದರೂ ಮೀರಿದರೆ ಸಾರ್ವಜನಿಕರಿಗೆ ದಂಡ ವಿಧಿಸಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

 ಸಾರ್ವಜನಿಕರಿಗೆ ಅನುಸರಿಸಬೇಕಾದ ಪ್ರಮುಖ ಅಂಶಗಳು ಮಹಾರಾಷ್ಟ್ರ ಸರ್ಕಾರ ಶನಿವಾರ ಕೊರೋನಾ ತಡೆ ಅಭಿಯಾನವನ್ನು ಮತ್ತೆ ಪ್ರಾರಂಭಿಸಿ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಮಾರ್ಗಸೂಚಿಗಳು ಏಪ್ರಿಲ್ 15ರ ಮಧ್ಯರಾತ್ರಿಯಿಂದಲೇ ಜಾರಿಯಲ್ಲಿರಲಿವೆ. 

  • ಮುಖದ ಹೊದಿಕೆಗಳು: ಮುಖಕ್ಕೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ, ಕೆಲಸದ ಸ್ಥಳದಲ್ಲಿ ಮತ್ತು ಪ್ರಯಾಣದ ಸಮಯದಲ್ಲಿ ಮಾಸ್ಕ್​ಗಳನ್ನು ಕಡ್ಡಾಯವಾಗಿ ಬಳಸಲೇಬೇಕು.
  • ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ದೂರ: ಜನರು ಸಾರ್ವಜನಿಕವಾಗಿ ಕನಿಷ್ಠ 6 ಅಡಿ ಅಂತರವನ್ನು ಕಾಯ್ದುಕೊಳ್ಳಬೇಕು.
  • ಸಿನೆನಿಮಾ ಹಾಲ್‌ಗಳು, ಮಾಲ್‌ಗಳು, ಸಭಾಂಗಣಗಳು, ರೆಸ್ಟೋರೆಂಟ್‌ಗಳು ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 7 ಗಂಟೆಯವರೆಗೆ ಮುಚ್ಚಲಿವೆ. ಆದಾಗ್ಯೂ, ಹೋಂ ಡೆಲಿವರಿಗೆ ಅವಕಾಶ ನೀಡಲಾಗಿದೆ. ಮತ್ತು ರಾತ್ರಿ ಕರ್ಫ್ಯೂ ಅವಧಿಯಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗುವುದು ಹಾಗೂ ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸಲಾಗುತ್ತದೆ.
  • ದಂಡ: ರಾತ್ರಿ ಕರ್ಫ್ಯೂ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 1,000 ರೂಪಾಯಿ ದಂಡ ವಿಧಿಸಲಾಗುತ್ತದೆ ಹಾಗೂ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ ವಿಧಿಸಲಾಗುತ್ತದೆ.
  • ಕೊರೋನಾ ನಿಯಮಗಳ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಉಗುಳಿದರೂ ದಂಡ ವಿಧಿಸಬಹುದಾಗಿದೆ.
  • ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ, ಪಾನ್, ಗುಟ್ಕಾ, ತಂಬಾಕು ಸೇವನೆಯನ್ನು ನಿಷೇಧಿಸಲಾಗಿದೆ.
  • ವರ್ಕ್ ಫ್ರಂ ಹೋಂ: ಕಂಪೆನಿಗಳಿಗೆ ಹೋಗಿ ಕೆಲಸ ಮಾಡುವ ಬದಲು ಮನೆಯಿಂದ ಕೆಲಸ ಮಾಡುವ ಕ್ರಮವನ್ನು ಸರ್ಕಾರ ಪ್ರೋತ್ಸಾಹಿಸಿದೆ.
  • ಸ್ಕ್ರೀನಿಂಗ್ ಮತ್ತು ಸ್ವಚ್ಛತೆ: ಥರ್ಮಲ್ ಸ್ಕ್ರೀನಿಂಗ್, ಹ್ಯಾಂಡ್ ವಾಶ್ ಮತ್ತು ಸ್ಯಾನಿಟೈಸರ್ ಅನ್ನು ಎಲ್ಲ ಪ್ರದೇಶಗಳ ಪ್ರವೇಶ, ಹಾಗೂ ನಿರ್ಗಮನ ಸ್ಥಳಗಳಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳುವುದು.
  • ಕೆಲಸ ನಿರ್ವಹಿಸುವ ಸ್ಥಳಗಳಲ್ಲಿ ಶಿಫ್ಟ್​ ಮುಗಿದ ಬಳಿಕ ನಿರಂತರವಾಗಿ ಸ್ಥಳವನ್ನು ಸ್ವಚ್ಛಗೊಳಿಸಬೇಕು.
  • ಸಾಮಾಜಿಕ ಅಂತರ: ನೌಕರರು ಕೆಲಸದ ಸಮಯದಲ್ಲಿ ಮತ್ತು ಊಟದ ವೇಳೆಯಲ್ಲಿಯೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು.
  • ಎಲ್ಲಾ ಖಾಸಗಿ ಕಚೇರಿಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದಲ್ಲಿ ನೌಕರರಿಂದ ಕಾರ್ಯನಿರ್ವಹಿಸಬೇಕು. ಉಳಿದಂತೆ ವರ್ಕ ಫ್ರಂ ಹೋಂ ಗೆ ಆದ್ಯತೆ ನೀಡಬೇಕು. ಆರೋಗ್ಯ ಮತ್ತು ಇತರ ಅಗತ್ಯ ಸೇವೆಗಳನ್ನು ಈ ನಿಯಮದಿಂದ ಹೊರಗಿಡಲಾಗಿದೆ.
  • ರಾಜ್ಯದಲ್ಲಿ ಯಾವುದೇ ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಧಾರ್ಮಿಕ ಸಮಾರಂಭಗಳಿಗೆ ಅವಕಾಶ ಇಲ್ಲ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *