ಸದಾಶಿವನಗರದಲ್ಲಿ ಭಾರೀ ಹೈಡ್ರಾಮಾ…! ಯುವ ಕಾಂಗ್ರೆಸ್, ಬಿಜೆಪಿಯಿಂದ ಪ್ರೊಟೆಸ್ಟ್..!
ಮಾಜಿ ಸಚಿವ ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ಸಿ.ಡಿ ಬಿಡುಗಡೆಯಾದ ಮೇಲೆ ರಾಜ್ಯದಲ್ಲಿ ರಾಜಕೀಯ ಚಟುವಟಿಗೆ ಜೋರಾಗಿದೆ. ಸಿ.ಡಿ ಪ್ರಕರಣವನ್ನು ಸರ್ಕಾರ SIT ತನಿಖೆಗೆ ವಹಿಸಿದ ಬೆನ್ನಲ್ಲೇ ,ಸಿ.ಡಿ ಲೇಡಿ ವಕೀಲ ಜಗದೀಶ್ ಅವರ ಮೂಲಕ ಕಂಪ್ಲೆಂಟ್ ದಾಖಲಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಗೆಗಳ ನಡುವೆ ಇಂದು ಸಿ.ಡಿ ಲೇಡಿ ಕುಟುಂಬದವರು SIT ಮುಂದೆ ಹಾಜರಾಗಿ ತಮ್ಮ ಹೇಳಿಕೆ ನೀಡಿದ್ದಾರೆ. ಈ ಘಟನೆಗಳ ಹಿಂದೆ ಯಾರಿದ್ದಾರೆ ಎಂದು ಹೇಳಿದ್ದಾರೆ.
ಯುವತಿ ಪೋಷಕರ ಪ್ರೆಸ್ಮೀಟ್ ಬಳಿಕ ಮಾತನಾಡಿದ ರಮೇಶ್ ಜಾರಕಿಹೊಳಿ , ಡಿ.ಕೆ ಶಿವಕುಮಾರ್ಗೆ ನೇರ ಸವಾಲ್ ಹಾಕಿದ್ದಾರೆ. ಮಹಾನಾಯಕನ ಹೆಸ್ರು ಯುವತಿ ಪೋಷಕರೇ ಹೇಳಿದ್ದಾರೆ. ಅವ ಎಂತ ದೊಡ್ಡ ಗಂಡಸು.. ಆತ ಗಾಂ…. ಎಂದು ಡಿ.ಕೆ ಶಿವಕುಮಾರ್ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು.
ರಮೇಶ್ ಜಾರಕಿಹೊಳಿ ನಮ್ಮ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ಹೇಳಿಕೆಯನ್ನು ಈ ಕೂಡಲೇ ಹಿಂಪಡೆಯಬೇಕು ಎಂದು ಯುವ ಕಾಂಗ್ರೆಸ್ ನಾಯಕ ನಲಪಾಡ್ ಹ್ಯಾರಿಸ್ ಎಚ್ಚರಿಕೆ ನೀಡಿದ್ರು. ಇನ್ನೊಬ್ಬ ಕಯುವ ಕಾಂಗ್ರೆಸ್ ಮುಖಂಡ ರಕ್ಷಾ ರಾಮಯ್ಯ ಕೂಡಾ ರಮೇಶ್ ಜಾರಕಿಹೊಳಿ ವಿರುದ್ಧ ಕಿಡಿ ಕಾರಿದ್ರು.
ಸದಾಶಿವನಗರದ ರಮೇಶ್ ಜಾರಕಿಹೊಳಿ ನಿವಾಸದ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ರಮೇಶ್ ಜಾರಕಿಹೊಳಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ನಿವಾಸಕ್ಕೆ ಮುತ್ತಿಗೆ ಹಾಕಲೂ ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ.
ಇನ್ನು ಈ ಪ್ರಕರಣದ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರು ಡಿಕೆಶಿ ಮನೆಗೆ ಮುತ್ತಿಗೆ ಹಾಕಿದ್ದಾರೆ. ಯುವತಿಯ ಪೋಷಕರೂ ಕೂಡಾ ಡಿ.ಕೆ ಶಿವಕುಮಾರ್ ವಿರುದ್ಧ ಆರೋಪ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಸಿ.ಡಿ ಪ್ರಕರಣದ ಮೂಲ ರೂವಾರಿ ಎಂದು ಆರೋಪಿಸಿದ್ದಾರೆ.
ಒಟ್ಟಿನಲ್ಲಿ ಸದಾಶಿವನಗರದಲ್ಲಿ ಇಂದು ಭಾರೀ ಬೆಳವಣಿಗೆಗಳು ನಡೆದಿದೆ. ಸದಾ ಸೈಲೆಂಟಾಗಿರುವ ಸದಾಶಿವನಗರದಲ್ಲಿ ಇಂದು ಪ್ರತಿಭಟನೆಗಳ ಕಾವು ಜೋರಾಗಿದೆ.