ಸಿದ್ದರಾಮಯ್ಯ ಯಾರ ಕಾಲು ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ; ನಳಿನ್ ಕುಮಾರ್ ಕಟೀಲ್
ಬೆಳಗಾವಿ: ಸಿದ್ದರಾಮಯ್ಯ ಅವರು ಯಾರ ಗುಲಾಮರು ಎಂದು ದೇಶಕ್ಕೆ ಗೊತ್ತಿದೆ. ಅವರು ಯಾರು ಕಾಲು ಹಿಡಿದು ಸಿಎಂ ಆಗಿದ್ದಾರೆ ಅನ್ನೋದು ಗೊತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹರಿಹಾಯ್ದರು.
ಮಂಗಳವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಸಂಸದರು ಕೇಂದ್ರ ಸರಕಾರ ಗುಲಾಮರು ಎಂಬ ಸಿದ್ದರಾಮಯ್ಯ ಹೇಳಿಕೆಯ ವಿಚಾರವಾಗಿ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ರಾಮಣ್ಣ ಯಾರ ಕಾಲು ಹಿಡಿದು ಸಿಎಂ ಆಗಿದ್ದಾರೆ. ಅವರಿಗೆ 65 ವರ್ಷ. ಅವರು ಹಿರಿಯರು. ರಾಹುಲ್ ಗಾಂಧಿ ಕಿರಿಯರು. ಅವರ ಕಾಲು ಹಿಡಿದು ಸಿಎಂ ಆಗಿದ್ದಾರೆ ಎಂದು ಟಾಂಗ್ ಕೊಟ್ಟರು.
ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ವಿಚಾರ ತನಿಖೆ ಹಂತದಲ್ಲಿದೆ, ಸಿದ್ದರಾಮಯ್ಯ ಅವರು ಸಿಎಂ ಇದ್ದಾಗ ಸಿಡಿ ಗಳು ಯಾವ ರೀತಿ ತನಿಖೆ ಆಗಿದೆ ಎಂಬುದು ಗೊತ್ತಿದೆ. ಸಿದ್ದರಾಮಯ್ಯ ಅವರಿಗೆ ಸಿಬಿಐ, ಐಟಿ, ಎಸ್ ಐ ಟಿ, ಮೆಲೆ ನಂಬಿಕೆ ಇಲ್ಲ, ಅಷ್ಟಕ್ಕೂ ಅವರಿಗೇ ಅವರ ಮೆಲೆ ನಂಬಿಕೆನೆ ಇಲ್ಲ ಎಂದು ವ್ಯಂಗ್ಯವಾಡಿದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಸಚಿವ ಉಮೇಶ ಕತ್ತಿ, ಶಾಸಕರಾದ ಅನಿಲ್ ಬೆನಕೆ, ಅಭಯ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.