ಕನ್ನಡ ಸಾಹಿತ್ಯ ಪರಿಷತ್ ಚುನಾವಣೆ ಬಿರುಸು
ಬೆಂಗಳೂರು : ಮುಂದಿನ ತಿಂಗಳು ೯ ರಂದು ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಚುನಾವಣೆ ಬಿರುಸುಗೊಂಡಿದೆ.
ನಿನ್ನೆ ದೂರದರ್ಶನದ ನಿವೃತ್ತ ಮಹಾನಿರ್ದೇಶಕ ಮಹೇಶ್ ಜೋಷಿ, ಕನ್ನಡಪರ ಹೋರಾಟಗಾರ ವ.ಚ. ಚನ್ನೇಗೌಡ ಅವರು ಕಸಾಪ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದು, ಇಂದು ಮತ್ತೊಬ್ಬ ಕನ್ನಡ ಪರ ಹೋರಾಟಗಾರ ಸಿ.ಕೆ. ರಾಮೇಗೌಡ ಅವರು ತಮ್ಮ ನಾಮ ಪತ್ರವನ್ನು ಸಲ್ಲಿಸಿದರು.
ಇದರ ಜೊತೆಗೆ ಕೊಪ್ಪಳದ ಶೇಖರ್ ಗೌಡ, ಪಾಟೀಲ್, ಸಂಗಮೇಶ್ ಬಾದವಾಡಗಿ, ಮಾಯಣ್ಣ, ಪ್ರೊ ಶಿವರಾಜ ಪಾಟೀಲ್, ಲೇಖಕಿ ಡಾ. ಸರಸ್ವತಿ ಚಿಮ್ಮಲಗಿ ಸೇರಿದಂತೆ ಹಲವರು ಸ್ಪರ್ಧಿಸುವ ಸಂಭವವಿದೆ.
ಕಳೆದ ವರ್ಷ ಕಸಾಪ ಅಧ್ಯಕ್ಷ ಸ್ಥಾನಕ್ಕೆ ೧೩ ಮಂದಿ ಸ್ಪರ್ಧಿಸಿದ್ದರು. ಪರಿಷತ್ತಿನ ಬೈಲಾ ಪ್ರಕಾರ ೧೦ ವರ್ಷಗಳ ಹಿಂದಿನಿಂದ ಸದಸ್ಯರಾಗಿರುವವರು ಅಧ್ಯಕ್ಷ ಸ್ಥಾನಕ್ಕೆ, ೫ ವರ್ಷಗಳಿಂದ ಸದಸ್ಯರಾಗಿರುವವರು ಜಿಲ್ಲಾ ಮತ್ತು ಗಡಿನಾಡು ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ಅರ್ಹರಾಗಿರುತ್ತಾರೆ.
ಬೆಂಗಳೂರು ನಗರ ಜೆಲ್ಲೆಗೆ ಸಂಬಂಧಿಸಿದಂತೆ ೨೮ ವಿಧಾನ ಸಭಾ ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ. ಮತದಾರರ ವಿಳಾಸ ಮತ್ತು ವಿವರಗಳನ್ನು ಸುಲಭವಾಗಿ ಪಡೆದುಕೊಳ್ಳಲು ಇಟeಛಿಣioಟಿ ಏಚಿsಚಿಠಿಚಿ ಮೊಬೈಲ್ ಆಪ್ ಅಭಿವೃದ್ಧಿ ಪಡಿಸಲಾಗಿದೆ.
ಏ.೭ರವರೆಗೆ ನಾಮ ಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಕಛೇರಿಯಲ್ಲಿ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತಿದೆ.
ಜಿಲ್ಲಾ ಘಟಕಗಳ ಅಧ್ಯಕ್ಷರ ಸ್ಥಾನಕ್ಕೆ ಸಂಬಂಧಿಸಿದಂತೆ ಆಯಾ ಜಿಲ್ಲಾ ಕೇಂದ್ರದ ತಾಲ್ಲೂಕು ತಹಿಶೀಲ್ದಾರ್( ಜಿಲ್ಲಾ ಕಸಾಪ ಚುನಾವಣಾಧಿಕಾರಿಗಳು) ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆಯುತ್ತಿದೆ.
ಏ.೮ ರಂದು ಎಲ್ಲಾ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏ.೧೨ ರ ಮಧ್ಯಾಹ್ನ ೩ ಗಂಟೆಯವರೆಗೆ ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಅವಕಾಶ ಇರಲಿದೆ. ಏ.೧೨ ರಂದು ಅಂತಿಮವಾಗಿ ಸ್ಪರ್ಧೆಯಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಆಯಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗುತ್ತದೆ.