ವಿದ್ಯಾರ್ಥಿಗಳೊಂದಿಗೆ ಸಂಜೆ ಪ್ರಧಾನಿ ‘ಪರೀಕ್ಷಾ ಪೆ ಚರ್ಚೆ’
ಪರೀಕ್ಷೆಗಳನ್ನು ಒತ್ತಡ ಮುಕ್ತವಾಗಿ ವಿದ್ಯಾರ್ಥಿಗಳು ಎದುರಿಸುವ ಸಂಬಂಧ ಅವರಿಗೆ ಸಲಹೆ ಸೂಚನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು “ಪರೀಕ್ಷಾ ಪೆ ಚರ್ಚೆ ನಡೆಸಲು ಉದ್ದೇಶಿಸಿದ್ದಾರೆ.
ಇಂದು ಸಂಜೆ ೭ ಗಂಟೆಗೆ ವರ್ಚುವಲ್ ಮೂಲಕ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರೊಂದಿ?ಗೆಗೆ ಪರೀಕ್ಷೆ ಪೇ ಚರ್ಚಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಕೊರೋನಾ ಸೋಂಕಿನ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷೆಯನ್ನು ಯಾವ ರೀತಿ ಎದುರಿಸಬೇಕು ಮತ್ತು ಅದಕ್ಕೆ ಯಾವೆಲ್ಲಾ ರೀತಿ ತಯಾರಾಗಬೇಕು ಎನ್ನುವ ಕುರಿತು ಸಲಹೆ ಸೂಚನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು “ಎಕ್ಸಾಮ್ ವಾರಿಯರ್ಸ್” ಪುಸ್ತಕವನ್ನು ರಚಿಸಿದ್ದು ಅದರ ಬಗ್ಗೆಯೂ “ಪರೀಕ್ಷಾ ಪೆ ಚರ್ಚೆ ಕಾರ್ಯಕ್ರಮದಲ್ಲಿ ನಡೆಸುವ ಸಾಧ್ಯತೆಗಳಿವೆ.
ಪರೀಕ್ಷಾ ಒತ್ತಡವನ್ನು ಯಾವ ರೀತಿ ನಿವಾರಣೆ ಮಾಡಿಕೊಳ್ಳಬೇಕು ಮತ್ತು ಅದಕ್ಕೆ ಯಾವೆಲ್ಲಾ ಮಾರ್ಗಗಳನ್ನು ಅನುಸರಿಸಬೇಕು ಎನ್ನುವ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಲ್ ನಿಶಂಕ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿದ್ಯಾರ್ಥಿಗಳು ನೇರವಾಗಿ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡು ಪ್ರಶ್ನೆಗಳು ಹಾಗೂ ಅದಕ್ಕೆ ಉತ್ತರಗಳನ್ನು ಪಡೆಯಬಹುದು ಎಂದು ಅವರು ತಿಳಿಸಿದ್ದಾರೆ.
ಪರೀಕ್ಷಾ ಪೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸರಿಸುಮಾರು ಹದಿನಾಲ್ಕು ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ ೨.೬ ಲಕ್ಷ ಶಿಕ್ಷಕರು ಮತ್ತು ೯೨೦೦೦ ಪೋಷಕರು ಇದ್ದಾರೆ ಎಂದು ಅವರು ಹೇಳಿದ್ದಾರೆ.
ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳ ಪೈಕಿ ಶೇಕಡ ೬೦ ರಷ್ಟು ವಿದ್ಯಾರ್ಥಿಗಳು ೯ಮತ್ತು ೧೦ನೇ ತರಗತಿಯ ವಿದ್ಯಾರ್ಥಿಗಳು ಆಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪರೀಕ್ಷಾ ಪೆ ಚರ್ಚೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಇದೇ ಮೊದಲ ಬಾರಿಗೆ ೮೧ ವಿದೇಶಿ ವಿದ್ಯಾರ್ಥಿಗಳು ಕೂಡ ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ