ಸಂದರ್ಭದ ದುರ್ಲಾಭ ಪಡೆಯುವ ಪಾಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು: ಬೆಡ್ ಬ್ಲಾಕ್ ದಂಧೆ ಬಗ್ಗೆ ಸಿ.ಟಿ. ರವಿ ಆಕ್ರೋಶ

ಚಿಕ್ಕಮಗಳೂರು: ಸಂದರ್ಭದ ದುರ್ಲಾಭ ಪಡೆಯುವ ಪಾಪಿಗಳು, ಯಾವುದರಲ್ಲೂ ಪ್ರಾಯಶ್ಚಿತ ಮಾಡಿಕೊಳ್ಳಲು ಆಗಲ್ಲ, ಅವರಿಗೆ ಕಠಿಣ ಶಿಕ್ಷೆ ಆಗಬೇಕೆಂದು ಸಿ. ಟಿ. ರವಿ ಕಿಡಿಕಾರಿದ್ದಾರೆ. ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಬೆಡ್ ಬ್ಲಾಕ್ ದಂಧೆಗೆ ಪ್ರತಿಕ್ರಿಯೆ ನೀಡಿದ ಅವರು, ಇದೊಂದು ಹೇಯ ಕೃತ್ಯ. ಇದರಲ್ಲಿ ಭಾಗಿಯಾದವರ ವಿರುದ್ಧ ಕಠಿಣ ಕ್ರಮವಾಗಬೇಕೆಂದು ಆಗ್ರಹಿಸಿದ್ದಾರೆ. ಮೊದಲು ಮೆಡಿಕಲ್ ಸೀಟ್ ಬ್ಲಾಕ್ ಕೇಳಿದ್ದೆ. ಆದರೆ, ಇಂತಹ ವಿಷಮ ಸಂದರ್ಭದಲ್ಲಿ ಕೋವಿಡ್ ಬೆಡ್ ಬ್ಲಾಕ್ ಮಾಡಿ ಬ್ಲಾಕ್ ಮಾರ್ಕೇಟ್ ಮಾಡುವ ಪಾಪಿಗಳನ್ನು ಈಗಲೇ ಕೇಳಿದ್ದು, ಅವರು ಯಾವುದರಲ್ಲೂ ಪ್ರಾಯಶ್ಚಿತ ಮಾಡಿಕೊಳ್ಳಲು ಆಗಲ್ಲ, ಅವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಾವಿರಾರು ಜನರ ಸಾವಿಗೆ ಕಾರಣರಾದವರ ಪಾಪ ಕೃತ್ಯಕ್ಕೆ ಕ್ಷಮೆ ಇಲ್ಲ. ಅವರ ಬಗ್ಗೆ ಯಾರೂ ಸಮರ್ಥನೆ ಮಾಡಲು ಆಗಲ್ಲ. ಅವರಿಗೆ ಕಠಿಣ ಶಿಕ್ಷೆ ಆಗಬೇಕು. ಸಂಸದ ತೇಜಸ್ವಿ ಸೂರ್ಯ ಒಳ್ಳೆ ಕೆಲಸ ಮಾಡಿದ್ದಾರೆ. ಸಾವಿರಾರು ಜನ ಸಾವನ್ನಪ್ಪಿದ್ದಾರೆ. ಕೊರೋನಾ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಿಕ್ಕಿಲ್ಲ ಎಂದರೆ ಅದಕ್ಕೆ ಇಂತಹ ಪಾಪಿಗಳೇ ಕಾರಣ. ಯಾವ ಆಸ್ಪತ್ರೆ, ಇದರಲ್ಲಿ ಯಾರು-ಯಾರು ಶಾಮೀಲಾಗಿದ್ದಾರೆ ಎಲ್ಲಾ ಹೊರಬರಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಮಮತಾ ದೀದಿ ಅವರೆ, ರಕ್ತಸಿಕ್ತ ಕೈಗಳನ್ನು ಯಾವ ಪುಣ್ಯ ಕಾರ್ಯದಿಂದಲೂ ತೊಳೆದುಕೊಳ್ಳಲು ಆಗುವುದಿಲ್ಲ, ನಿಮ್ಮ ಕೈಗಳು ರಕ್ತಸಿಕ್ತವಾಗಿದ್ದು, ಇಂಥ ರಕ್ತಸಿಕ್ತ ಕೈಗಳಿಂದ ಅಧಿಕಾರ ನಡೆಸಿದರು ಪಾಪವೇ ಹೆಚ್ಚಾಗುತ್ತೋ ವಿನಃ, ಪುಣ್ಯ ಬರುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮಮತಾ ದೀದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಚುನಾವಣೆ ಪೂರ್ವದಲ್ಲೂ ದೌರ್ಜನ್ಯದ ಮೂಲಕ ಚುನಾವಣೆ ನಡೆಸಲು ಮುಂದಾದರು. ಅದಕ್ಕೆ ಅವಕಾಶ ಸಿಗಲಿಲ್ಲ. ಈಗ ದೌರ್ಜನ್ಯದ ಮೂಲಕ ಬಿಜೆಪಿ ಬೆಳವಣಿಗೆ ಹತ್ತಿಕ್ಕಲು ಪ್ರಯತ್ನಿಸುತ್ತಿದ್ದೀರಿ. ಇದನ್ನ ನಾವು ಖಂಡಿಸುತ್ತೇವೆ.  ಪಶ್ಚಿಮ ಬಂಗಾಳದಲ್ಲಿ ಕಳೆದ 72 ಗಂಟೆಗಳಲ್ಲಿ ಬಿಜೆಪಿ ಕಚೇರಿ ಸುಟ್ಟು, ಮನೆಗಳಿಗೆ ಬೆಂಕಿ ಹಾಕಿ, ಕಾರ್ಯಕರ್ತರ ಅಂಗಡಿ ಲೂಟಿ ಮಾಡಿ 12ಕ್ಕೂ ಹೆಚ್ಚು ಕಾರ್ಯಕರ್ತರನ್ನು ಹತ್ಯೆ ಮಾಡಿದ್ದಾರೆ. 281 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡಬೇಕಾದಂತಹ ಪಶ್ಚಿಮ ಬಂಗಾಳ ಸರಕಾರವೇ ಗೂಂಡಾಗಳಿಗೆ ಬೆಂಬಲವಾಗಿ ನಿಂತಿದೆ. ಪ್ರಜಾಪ್ರಭುತ್ವದ ಹಾಗೂ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ವರ್ತನೆ ಮಾಡುತ್ತಿದ್ದಾರೆ. ಇದನ್ನ ಖಂಡಿಸಿ ಬಿಜೆಪಿ ದೇಶಾದ್ಯಂತ ಸಾಂಕೇತಿಕ ಪ್ರತಿಭಟನೆಗೆ ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಪಶ್ಚಿಮ ಬಂಗಾಳಕ್ಕೆ ಹೋಗಿದ್ದಾರೆ. ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ ನೈತಿಕ ಧೈರ್ಯ ತುಂಬುವ ಕೆಲಸ ಮಾಡುತ್ತಾರೆ ಎಂದು ಹೇಳಿದರು.

ನಾವು ಪ್ರಜಾಪ್ರಭುತ್ವದ ತೀರ್ಪನ್ನು ಗೌರವಿಸಿ, ಅಭಿವೃದ್ಧಿಗೆ ಸಹಕಾರ ಕೊಡುತ್ತೇವೆ ಎಂದಿದ್ದೇವೆ. ಬಿಜೆಪಿ ಯಾವತ್ತೂ ಪ್ರಜಾಪ್ರಭುತ್ವದ ಆಶಯಕ್ಕೆ ವಿರೋಧವಾಗಿ ವರ್ತಿಸಿಲ್ಲ. ಆದರೆ, ಹತ್ಯೆಯ ಮೂಲಕ ಒಂದು ರಾಜಕೀಯ ಪಕ್ಷದ ಧ್ವನಿಯನ್ನು ಹತ್ತಿಕ್ಕಬಹುದು ಎಂಬ ದುಷ್ಟ ಆಲೋಚನೆ ಸರಿಯಲ್ಲ. ಶ್ಯಾಂ ಪ್ರಸಾದ್ ಮುಖರ್ಜಿ, ದೀನದಯಾಳ್ ಅವರನ್ನ ಹತ್ಯೆ ಮಾಡಿದರು. ಬಿಜೆಪಿ ಬೆಳವಣಿಗೆ ತಡೆಯಲು ಆಗಲಿಲ್ಲ, ಹತ್ಯೆ ಮೂಲಕ ಪಕ್ಷದ ಬೆಳವಣಿಗೆ ತಡೆಯಲು ಸಾಧ್ಯವಿಲ್ಲ. ಪಕ್ಷ ಮತ್ತೆ ಹತ್ತು ಪಟ್ಟು ಸಾಮರ್ಥ್ಯದಿಂದ ಮೇಲೆದ್ದು ನಿಲ್ಲುತ್ತೆ, ಹತ್ಯಾ ರಾಜಕಾರಣ ಕೊನೆಯಾಗಬೇಕು ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *