ವಿಸ್ತಾ ಯೋಜನೆಗೆ ಟೀಕೆಗಳ ಸುರಿಮಳೆ
ನವದೆಹಲಿ, ಮೇ.೭-ದೇಶದಲ್ಲಿ ಕೋವಿಡ್ ಸೋಂಕು ಸಂಖ್ಯೆ ಗಣನೀಯವಾಗಿ ಏರಿಕೆಯಗಾಗುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಆಮ್ಲಜನಕ ,ಹಾಸಿಗೆ ಸಿಗದೆ ಪರದಾಡುವ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ೨೦ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಸಂಸತ್ ಭವನ ಹಾಗೂ ಪ್ರಧಾನಿ ನಿವಾಸ ನಿರ್ಮಾಣ ಮಾಡಲು ಮುಂದಾಗಿರುವ ಕಾರ್ಯಕ್ಕೆ ಟೀಕೆಗಳ ಮಹಾಪೂರವೇ ಹರಿದುಬಂದಿದೆ.
ಅಗತ್ಯವಿರುವ ಕೆಲಸಗಳಿಗೆ ಹಣಕಾಸಿನ ನೆರವು ನೀಡುವುದನ್ನು ಬಿಟ್ಟು ಪ್ರಧಾನಿ ನರೇಂದ್ರ ಮೋದಿ ಅನಗತ್ಯ ದುಂದು ವೆಚ್ಚ ಮಾಡುತ್ತಿದ್ದಾರೆ ಎಂಬ ಟೀಕೆಗಳು ವಿರೋಧಪಕ್ಷಗಳಿಂದ ಕೇಳಿಬಂದಿರುವ ನಡುವೆ ಜಾಗತಿಕ ಮಟ್ಟದಲ್ಲಿಯೂ ವಿರೋಧ ವ್ಯಕ್ತವಾಗಿದೆ.
ಸೆಂಟ್ರಲ್ ವಿಸ್ತಾ ಯೋಜನೆಯಡಿ ಸರಿಸುಮಾರು ೧.೮ ಶತಕೋಟಿ ಡಾಲರ್ ವೆಚ್ಚದಲ್ಲಿ ಸಂಸತ್ ಭವನ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ನಿವಾಸ ವಿವಿಧ ಸಚಿವಾಲಯಗಳ ಕಚೇರಿ ನಿರ್ಮಾಣ ಮಾಡಲು ಪ್ರಧಾನಿ ನರೇಂದ್ರ ಮೋದಿ ಮುಂದಾಗಿದ್ದಾರೆ
ದಕೊರೋನಾದ ಸಂಕಷ್ಟ ಸಮಯವನ್ನು ಭಾರತ ಎದುರಿಸುತ್ತಿದೆ.ಇದರ ಅಗತ್ಯವೇನಿತ್ತು ಎನ್ನುವ ಮಾತುಗಳು ಜಾಗತಿಕ ಮಟ್ಟದಲ್ಲಿ ಕೇಳಿಬಂದಿದೆ.
ದೇಶದಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಅದರ ಕಡೆ ಗಮನ ಹರಿಸದೆ ೨೦ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಯೋಜನೆಗೆ ತಡೆ ನೀಡಬೇಕು ಎಂದು ಕೋರಿ ಇಬ್ಬರು ನಾಗರಿಕರು ಹೈಕೋರ್ಟ್ ಮೊರೆ ಹೋಗಿದ್ದಾರೆ.
ರೇಷ್ಮಾ ಸಂಕಷ್ಟದಲ್ಲಿರುವ ಸಮಯದಲ್ಲಿ ಹೊಸ ಸಂಸ್ಕೃತವನ್ನು ನಿರ್ಮಾಣದ ಅಗತ್ಯವಿಲ್ಲ ಮೊದಲು ಯಾವುದಕ್ಕೆ ಹಣಕಾಸಿನ ನೆರವು ಅಗತ್ಯವಿದೆ ಅದಕ್ಕೆ ಹಣವನ್ನು ಖರ್ಚು ಮಾಡಲಿ ಎಂದು ಅರ್ಜಿದಾರರ ಪರ ವಕೀಲ ನಿತಿನ್ ಸುಲಜಾ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದಾರೆ.
ದೆಹಲಿ ಹೈಕೋರ್ಟ್ ನಲ್ಲಿ ನೂತನ ಸಂಸತ್ ಭವನ ನಿರ್ಮಾಣಕ್ಕೆ ಹಸಿರುನಿಶಾನೆ ನೀಡುತ್ತಿದ್ದಂತೆ ಅರ್ಜಿದಾರರು ಸುಪ್ರೀಂಕೋರ್ಟ್ ಗೆ ಮೊರೆಯಾಗಿ ಯೋಜನೆಗೆ ನೀಡುವಂತೆ ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಅನಗತ್ಯವಾಗಿ ೨೦ ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ಸೆಂಟ್ರಲ್ ವಿಸ್ತ ಯೋಜನೆಗೆ ಭಾರತ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿ ವ್ಯಾಪಕ ಟೀಕೆ ಮತ್ತು ವಿರೋಧ ವ್ಯಕ್ತವಾಗಿದೆ.
ಆದರೂ ಇದರ ಕಡೆ ಗಮನ ಹರಿಸದೆ ಹೊಸ ಸಂಸತ್ ಭವನ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದಾರೆ.