ಕೊರೊನಾ ಪರಿಸ್ಥಿತಿ ಚರ್ಚೆಗೆ ವಿಶೇಷ ಸಂಸತ್ ಅಧಿವೇಶನಕ್ಕೆ ಕಾಂಗ್ರೆಸ್ ಆಗ್ರಹ

ದೇಶದಲ್ಲಿ ಕೊರೊನಾ ಗಂಭೀರವಾಗಿದ್ದು ,ಪರಿಸ್ಥಿತಿ ಎದುರಿಸಲು ರಾಷ್ಟ್ರೀಯ ನೀತಿಯನ್ನು ರೂಪಿಸುವ ಬಗ್ಗೆ ಚರ್ಚಿಸಲು ಸಂಸತ್ತಿನ ಎರಡು ದಿನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದು ಕಾಂಗ್ರೆಸ್‌ ಮುಖಂಡ ಮನೀಶ್‌ ತಿವಾರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,ದೇಶವನ್ನು ದುರಂತ ಆವರಿಸುತ್ತಿದೆ. ಇಂತಹ ಸಂದರ್ಭದಲ್ಲಿ ವಿಶೇಷ ಅಧಿವೇಶನ ಕರೆಯಲು ರಾಷ್ಟ್ರಪತಿ ಅವರು ತಮ್ಮ ವಿಶೇಷ ಅಧಿಕಾರ ಬಳಸಬೇಕು ಎಂದು ಒತ್ತಾಯಿಸಿದ್ದಾರೆ.

ಸದ್ಯ, ದೇಶದಲ್ಲಿ ಲಸಿಕೆ ಅಭಿಯಾನ ಸಮರ್ಪಕವಾಗಿ ನಡೆಯುತ್ತಿಲ್ಲ. ಹಾಸಿಗೆಗಳು, ಆಮ್ಲಜನಕ, ಜೀವರಕ್ಷಕ ಪರಿಕರಗಳ ಕೊರತೆಯೂ ಇದೆ ಎಂದು ಅವರು ಆರೋಪಿಸಿದ್ದಾರೆ.

ದೇಶದಾದ್ಯಂತ ಪರಿಸ್ಥಿತಿ ಗಂಭೀರವಾಗುತ್ತಿದೆ. ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಲಸಿಕೆ ಕೊರತೆ ಇದೆ. ಆದರೆ, ದೇಶ ಹೊತ್ತಿ ಉರಿಯುತ್ತಿರುವ ಸಂದಿಗ್ಧ ಪರಿಸ್ಥಿತಿಯಲ್ಲಿ ಬಿಜೆಪಿವಪಶ್ಚಿಮ ಬಂಗಾಳದಲ್ಲಿ ರಾಜಕಾರಣ ಮಾಡುತ್ತಿದೆ ಎಂದು ತರಾಟೆಗೆ ತೆಗೆಕೊಂಡಿದ್ದಾರೆ.

ಕೋವಿಡ್‌ ಸಾವುಗಳನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ

ವಿವಿಧ ಚಿತಾಗಾರ, ರುದ್ರಭೂಮಿಗಳ ಪರಿಸ್ಥಿತಿ ನಿರ್ವಹಿಸಲು ರಾಷ್ಟ್ರೀಯ ನೀತಿ ಅಗತ್ಯವಿದ್ದು, ಸಂಸತ್ತಿನ ಅಧಿವೇಶನ ಅಗತ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *