ನಾಳೆಯಿಂದ ಬಿಗ್ ಬಾಸ್ ರಿಯಾಲಿಟಿ ಶೋ ಸ್ಥಗಿತ
ಬೆಂಗಳೂರು, ಮೇ.8- ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಜಾರಿ ಮಾಡಿರುವ ಲಾಕ್ಡೌನ್ ಹಿನ್ನೆಲೆಯಲ್ಲಿ ನಾಳೆಯಿಂದಲೇ ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಥಗಿತವಾಗಲಿದೆ.
ನಾಳೆಯೇ ಎಲ್ಲಾ ಸ್ಪರ್ಧಿಗಳನ್ನು ಹೊರಗೆ ಕರೆದು ಸುರಕ್ಷಿತವಾಗಿ ಅವರ ಮನೆಗಳಿಗೆ ಸುರಕ್ಷಿತವಾಗಿ ಕಳುಹಿಸಲಾಗುವುದು ಎಂದು ಬಿಗ್ ಬಾಸ್ ರಿಯಾಲಿಟಿ ಶೋನ ನಿರ್ದೇಶಕ ಪರಮೇಶ್ವರ್ ಗುಂಡಕಲ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ ರಿಯಾಲಿಟಿ ಶೋ ಶುರುವಾಗಿ ಇಂದಿಗೆ 71ನೇ ದಿನ. ಮನೆಯಲ್ಲಿರುವ 11 ಜನ ಓಡಾಡುತ್ತಿರುವುದನ್ನು ನೋಡಿದಾಗ ಒಂದಕ್ಕಿಂತ ಹೆಚ್ಚು ಭಾವನೆಗಳು ಒಂದೇ ಸಲಕ್ಕೆ ಬಂದು ಮನಸ್ಸಿಗೆ ವಿಚಿತ್ರವಾದ ತಳಮಳ ಮಾಡಲಿದೆ ಎಂದು ಹೇಳಿದ್ದಾರೆ.
ಹೊರಗಡೆ ಎದುರಾಗಿರುವ ಕಷ್ಟದ ಸವಾಲು ಗೊತ್ತಿಲ್ಲದೆ ಒಳಗಡೆ ಇರುವವರೆಲ್ಲ ಖುಷಿಯಾಗಿದ್ದಾರೆ. ಐಸೋಲೇಷನ್ ನಲ್ಲಿ ಇರುವುದರಿಂದ ಸುರಕ್ಷಿತವಾಗಿ ಯೂ ಇದ್ದಾರೆ ಎಲ್ಲರಿಗೂ ಹೊರಗಡೆ ಆಗಿರುವ ಬೆಳವಣಿಗೆ ತಿಳಿಸಿ ನಾಳೆ ಹೊರಗಡೆ ಕರೆಯುತ್ತೇವೆ ಅನಂತರ ಅವರನ್ನು ಸುರಕ್ಷಿತವಾಗಿ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನೂರಾರು ದಿನಗಳ ಕಾಲ ನೂರಾರು ಜನರ ಕೆಲಸ ಎಲ್ಲವನ್ನೂ ಪಕ್ಕಕ್ಕಿಟ್ಟು ಶ್ರದ್ಧೆಯಿಂದ ಕೆಲಸ ಮಾಡಿದ ಒಂದು ತಂಡದ ಕನಸು ಅರ್ಧಕ್ಕೆ ನಿಂತಿದೆ ಕಷ್ಟದ ತೀರ್ಮಾನವಾದರೆ ಸಮಾಧಾನ ಕೊಟ್ಟ ತೀರ್ಮಾನವಾಗಿದೆ ಎಂದು ಹೇಳಿದ್ದಾರೆ.
ಮನಸು ಭಾರವಾಗಿದೆ. ರಿಯಾಲಿಟಿ ಶೋ ನಿಲ್ಲುತ್ತದೆ ಅಂತಲ್ಲ ಹೊರಗಡೆ ಗಾಳಿಯಲ್ಲಿ ಓಡಾಡುತ್ತಿರುವ ಕಣ್ಣಿಗೆ ಕಾಣದ ಅನಿಶ್ಚಿತತೆಯಿಂದ ಇಲ್ಲದ ಕಳವಳ. ಎಲ್ಲರಿಗೂ ಈ ಕಳವಳ ಕೊಂದು ಉತ್ತರ ಬೇಗ ಸಿಗಲಿ ಸುರಕ್ಷಿತವಾಗಿರಲಿ ಎಂದು ಅವರು ಹೇಳಿದ್ದಾರೆ
ಕಲರ್ಸ್ ಕನ್ನಡ ವಾಹಿನಿಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಮೂಡಿ ಬರುತ್ತಿದ್ದು ಅದು ಅರ್ಧಕ್ಕೆ ನಿಲ್ಲುವಂತಾಗಿದೆ
3 ವಾರದಿಂದ ಸುದೀಪ್ ಗೈರು
ಕಳೆದ ಎಂಟು ಆವೃತ್ತಿ ಗಳಿಂದ ಬಿಗ್ ಬಾಸ್ ರಿಯಾಲಿಟಿ ಶೋ ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ನಿರೂಪಕ ಸುದೀಪ್ ಕಳೆದ ಮೂರು ವಾರಗಳಿಂದ ಅನಾರೋಗ್ಯದಿಂದ ಕಾಣಿಸಿಕೊಂಡಿಲ್ಲ.
ಸದ್ಯದ ಮಟ್ಟಿಗೆ ಅವರು ಶೋನಲ್ಲಿ ಭಾಗವಹಿಸಲು ಸಾಧ್ಯವಿಲ್ಲದ ಕಾರಣ ನಾಳೆಯಿಂದ ಬಿಗ್ ಬಾಸ್ ರಿಯಾಲಿಟಿ ಬಂದ್ ಆಗಲಿದೆ
ಚಿತ್ರೀಕರಣ ಸ್ಥಗಿತ
ಹತ್ತರಿಂದ 24ರವರೆಗೆ ಧಾರವಾಹಿ ಮತ್ತು ರಿಯಾಲಿಟಿ ಶೋಗಳ ಚಿತ್ರೀಕರಣ ನಡೆಸಿದಂತೆ ಕರ್ನಾಟಕ ಟೆಲಿವಿಷನ್ ಒಮ್ಮತದ ನಿರ್ಧಾರ ಕೈಗೊಂಡಿರುವ ಹಿನ್ನೆಲೆಯಲ್ಲಿ ಬಿಗ್ ಬಾಸ್ ರಿಯಾಲಿಟಿ ಶೋ ಚಿತ್ರೀಕರಣವನ್ನು ಸ್ಥಗಿತಗೊಳಿಸಲಾಗುತ್ತಿದೆ.