30 ಟನ್‌ ಸಾಮರ್ಥ್ಯದ ಆರು ಆಕ್ಸಿಜನ್‌ ಟ್ಯಾಂಕರ್‌ಗಳನ್ನು ಕೇಂದ್ರ ಸರಕಾರ ನೀಡಿದೆ; ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಕೇಂದ್ರ ಸರಕಾರ ಆಕ್ಸಿಜನ್‌ ಪ್ರಮಾಣವನ್ನು ಹೆಚ್ಚು ಮಾಡಿ ರಾಜ್ಯ ಸರಕಾರಕ್ಕೆ ಪತ್ರ ಬರೆದಿದೆ. 30 ಟನ್‌ ಸಾಮರ್ಥ್ಯದ ಆರು ಟ್ಯಾಂಕರ್‌ಗಳನ್ನು ಕೇಂದ್ರ ಸರಕಾರ ನೀಡಿದೆ. ಆಕ್ಸಿಜನ್‌ ಟ್ಯಾಂಕರ್‌ಗಳು ಮಂಗಳವಾರ ರಾಜ್ಯಕ್ಕೆ ಬರಲಿವೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.

 

ಸೋಮವಾರ ಹುಬ್ಬಳ್ಳಿಯ ಸಕ್ರ್ಯೂಟ್‌ ಹೌಸ್‌ನಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ಆರು ಟ್ಯಾಂಕರ್‌ಗಳಿಂದ ರಾಜ್ಯದಲ್ಲಿನ ಆಕ್ಸಿಜನ್‌ ಕೊರತೆ ನೀಗಲಿದೆ ಎಂದರು. ಕೇಂದ್ರ ಸರಕಾರ 150 ಆಕ್ಸಿಜನ್‌ ಘಟಕಗಳನ್ನು ಕರ್ನಾಟಕಕ್ಕೆ ಮಂಜೂರು ಮಾಡಿದೆ. 1500 ಆಕ್ಸಿಜನ್‌ ಸಾಂದ್ರಕಗಳನ್ನು ನೀಡಲಾಗಿದೆ. ಸರ್ವರಿಗೂ ಬಡವ ಬಲ್ಲಿದ ಎಂಬ ಬೇಧವಿಲ್ಲದೆ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್‌ ಭಾರತ ಸ್ಕೀಂನಲ್ಲಿ ಕೋವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.

ಈ ಬಾರಿಯ ಕೋವಿಡ್‌ ಅಲೆ ಅನಿರೀಕ್ಷಿತವಾದದ್ದು, ಯಾರೂ ಊಹಿಸದ ರೀತಿಯಲ್ಲಿ ಇದರ ಪರಿಣಾಮವಾಗುತ್ತಿದೆ. ಇದರ ಸರಪಳಿ ಮುರಿಯಬೇಕಾಗಿದೆ. ಕೋವಿಡ್‌ ಸಂದರ್ಭದಲ್ಲಿ ಪೊಲೀಸರು ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರು ಸಹ ನಮ್ಮ ನಿಮ್ಮಂತೆ ಮನುಷ್ಯರು. ಅನಗತ್ಯವಾಗಿ ಪೊಲೀಸರ ಕಣ್ಣು ತಪ್ಪಿಸಿ ಓಡಾವುದು ಮಾಡಬೇಡಿ ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಧಾರವಾಡ ಜಿಲ್ಲೆಯಿಂದ ಬೆಳಗಾವಿ ಹಾಗೂ ಬಿಜಾಪುರ ಜಿಲ್ಲೆಗಳಿಗೆ ಆಕ್ಸಿಜನ್‌ ಸರಬರಾಜು ಆಗುವುದರಿಂದ 2 ಟ್ಯಾಂಕರ್‌ಗಳನ್ನು ಜಿಲ್ಲೆಗೆ ನೀಡಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್‌ ಹಾಗೂ ಬೆಡ್‌ ಕೊರತೆ ಆಗದಂತೆ ಪ್ರತಿ ದಿನ ಮೇಲುಸ್ತುವಾರಿ ನೋಡಿಕೊಳ್ಳಲಾಗುತ್ತಿದೆ. ಸಾರ್ವಜನಿಕರ ರಕ್ಷಣೆಗೆ ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತ ಸದಾ ಸಿದ್ಧವಿದೆ ಎಂದು ಜೋಶಿ ಭರವಸೆ ನೀಡಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *