ಕಲಬುರಗಿ : ಶ್ರೀ ಬಸವೇಶ್ವರರ ಜಯಂತಿ ಸರಳಾಚರಣೆ
ಕಲಬುರಗಿ,ಮೇ.14(ಕ.ವಾ) ವಚನ ಭಂಡಾರಿ, ಸಮಾಜ ಸುಧಾರಕ ಹಾಗೂ ಜಗಜ್ಯೋತಿ ಶ್ರೀ ಬಸವೇಶ್ವರರ ಜಯಂತ್ಯೋತ್ಸವದ ಅಂಗವಾಗಿ ಶುಕ್ರವಾರ ನಗರದ ಜಗತ್ ವೃತ್ತದ ಬಳಿಯ ಶ್ರೀ ಬಸವೇಶ್ವರರ ಪುತ್ಥಳಿಗೆ ಜಿಲ್ಲಾಧಿಕಾರಿ ವಿ.ವಿ.ಜ್ಯೋತ್ಸ್ನಾ ಸೇರಿದಂತೆ ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳು ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡಿ ಮಹಾ ಮಾನವತಾವಾದಿಗೆ ಗೌರವ ನಮನ ಸಲ್ಲಿಸಿದರು.
ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಜಿಲ್ಲಾಧಿಕಾರಿಗಳು, ಕೋವಿಡ್ ಎರಡನೇ ಅಲೆ ಪ್ರಬಲವಾಗಿದ್ದು, ಜಿಲ್ಲಾಡಳಿತದಿಂದ ಸರಳವಾಗಿ ಜಯಂತ್ಯೋತ್ಸವ ಆಚರಿಸಲಾಗಿದೆ. ಅದರಂತೆ ಸಾರ್ವಜನಿಕರು ತಮ್ಮ ಮನೆಯಲ್ಲಿ ಬಸವೇಶ್ವರರನ್ನು ಪೂಜಿಸಿ ಜಯಂತಿ ಆಚರಿಸುವಂತೆ ಕರೆ ನೀಡಿದರು.
ಕೋವಿಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಜಗತ್ ವೃತ್ತದ ಬಳಿ ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯಿಂದ ಕೋವಿಡ್ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಪೊಲೀಸ್ ಆಯುಕ್ತ ಎನ್.ಸತೀಶ ಕುಮಾರ್, ಡಿಸಿಪಿ ಕಿಶೋರ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ ಸುಧಾಕರ ಲೋಖಂಡೆ, ಮಾಜಿ ಮಹಾಪೌರ ಹಾಗೂ ವೀರಶೈವ ಮಹಾಸಭೆಯ ಜಿಲ್ಲಾಧ್ಯಕ್ಷ ಶರಣು ಮೋದಿ, ಜಿಲ್ಲಾ ಆರೋಗ್ಯ ಇಲಾಖೆಯ ಮೇಲ್ವಿಚಾರಕ ಮಂಜುನಾಥ ಕಂಬಳಿಮಠ ಸೇರಿದಂತೆ
ಮತ್ತಿತರ ಗಣ್ಯರಿದ್ದರು