ಪಡಿತರ ಚೀಟಿದಾರರಿಗೆ ಸಿಹಿ ಸುದ್ದಿ : BPL ಕಾರ್ಡ್ದಾರರಿಗೆ ಅಕ್ಕಿ ಹೆಚ್ಚಳ!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಡೆಯಲು ಲಾಕ್ಡೌನ್ ಘೋಷಿಸಲಾಗಿದೆ. ವಿವಿಧ ವರ್ಗದ ಜನರಿಗೆ ಈ ಸಂದರ್ಭದಲ್ಲಿ ತೊಂದರೆಯಾಗುತ್ತಿದೆ. ಪ್ಯಾಕೇಜ್ ಘೋಷಣೆ ಮಾಡಬೇಕು ಎಂಬ ಒತ್ತಾಯವೂ ಕೇಳಿ ಬಂದಿದೆ.
ಆಹಾರ, ನಾಗರಿಕ ಸರಬರಾಜು ಇಲಾಖೆ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ಧಾವಿಸಿದೆ. ಬಿಪಿಎಲ್ ಕಾರ್ಡ್(BPL Card) ಹೊಂದಿರುವ ಅಕ್ಕಿ ಪ್ರಮಾಣವನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.
ಕೋವಿಡ್(Covid-19) ಸಂಕಷ್ಟದ ಸಮಯದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರಾಜ್ಯದ ಬಡವರಿಗೆ ಹಂಚುವ ಪಡಿತರ ವಿತರಣೆಯಲ್ಲಿ ಕೈಗೊಂಡ ಕ್ರಮಗಳ ಬಗ್ಗೆ ಸಚಿವ ಉಮೇಶ್ ಕತ್ತಿ ಸುದ್ದಿ ಪ್ರಕಟಣೆ ಹೊರಡಿಸಿದ್ದಾರೆ.
ರಾಜ್ಯದಲ್ಲಿ ಪಡಿತರ ಕಾರ್ಡ್(Ration Card)ಗಾಗಿ ಅರ್ಜಿ ಸಲ್ಲಿಸಿದ್ದು, ಇಲಾಖೆಯಿಂದ ಪಡಿತರ ಚೀಟಿಯನ್ನು ವಿತರಿಸಲು ಪರಿಶೀಲನೆ ಹಂತದಲ್ಲಿ ಇದ್ದಲ್ಲಿ ಅವರಿಗೆ ಸಹ ಈ ಪ್ರಯೋಜನ ಸಿಗಲಿದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.
ಮೇ ಮತ್ತು ಜೂನ್ ತಿಂಗಳಿಗೆ ಪ್ರತಿ ಮಾಹೆಗೆ ಉಚಿತವಾಗಿ 10 ಕೆಜಿ ಬಿಪಿಎಲ್ ಅರ್ಜಿ(BPL Application)ದಾರರಿಗೆ ಮತ್ತು 10 ಕೆಜಿ ಎಪಿಎಲ್ ಅರ್ಜಿದಾರರಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ.
ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ(Pradhan Mantri Garib Kalyan Yojana) ಅಡಿ ಮೇ ಮತ್ತು ಜೂನ್ ತಿಂಗಳಿಗೆ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳಿಗೆ ರಾಜ್ಯದಿಂದ ನೀಡಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದ ಜೊತೆಗೆ 5 ಕೆಜಿ ಅಕ್ಕಿ ಸೇರಿಸಿ ಒಟ್ಟು 10 ಕೆಜಿ ಆಹಾರ ಧಾನ್ಯ ನೀಡಲಾಗುತ್ತದೆ.