“ಹುಲಿಯಾ ಸಿದ್ದರಾಮಯ್ಯ-ಬಂಡೆ ಡಿಕೆಶಿ ಝೂನಲ್ಲಿ ಇರಲು ಯೋಗ್ಯರು” : ಕಟೀಲ್ ವ್ಯಂಗ್ಯ
ಹಾಸನ: ಹುಲಿಯಾ ಮತ್ತು ಬಂಡೆ ಝೂನಲ್ಲಿ ಇರಲಷ್ಟೆ ಯೋಗ್ಯರು;ಮಾನವ ಸಮಾಜದಲ್ಲಿ ಇರಲು ಅರ್ಹತೆ ಅವರಿಗೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದ್ದಾರೆ.
ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಗೆ ಭಾಗವಹಿಸುವ ಮುನ್ನಾ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್‍ನ ಆರೋಪಕ್ಕೆ ತಿರುಗೇಟು ನೀಡಿದ ಅವರು, ಆಡಳಿತದಲ್ಲಿ ತಪ್ಪಿದ್ದರೆ ವಿಧಾನಸೌಧದಲ್ಲಿ ಬಂದು ಪ್ರಸ್ತಾಪ ಮಾಡಿ.
ನಿಮಗೆ ಹಕ್ಕಿದೆ. ಬಹಳ ಪುರಾತನ ಇತಿಹಾಸ ಇರುವ ರಾಜಕೀಯ ಪಕ್ಷವಾಗಿ ಇಲ್ಲಸಲ್ಲದ ಹೇಳಿಕೆ ನೀಡುವ ಮೂಲಕ ಚಿಲ್ಲರೆ ರಾಜಕಾರಣ ಮಾಡುತ್ತಿದ್ದಾರೆ. ಕೋವಿಡ್ ಸಮಯದಲ್ಲಿ ಜನರಿಗೆ ಭಯ ಮೂಡಿಸುತ್ತಿದ್ದಾರೆ ಎಂದು ಕಿಡಿಕಾರಿದರು.
ರಾಜ್ಯ, ರಾಷ್ಟ್ರವನ್ನು ಸುದೀರ್ಘವಾಗಿ ಆಡಳಿತ ಮಾಡಿ ಇಂದು ವೆಂಟಿಲೇಟರ್ ಇಲ್ಲ ಸೌಲಭ್ಯ ಇಲ್ಲ ಅಂತಾರೆ. ಇಂದಿನ ಈ ಸ್ಥಿತಿಗೆ ಅವರೇ ಕಾರಣ. ನಿಮ್ಮ ಕಾಲದಲ್ಲಿ ಎಷ್ಟು ವೆಂಟಿಲೇಟರ್ ಬಂದವು ಎಲ್ಲಿ ಹೋದವು. ನಿಮ್ಮ ಆಡಳಿತದ ಕಾಲದಲ್ಲಿ ಡೆಂಗ್ಯೂ, ಹಾವು ಕಡಿತ, ಹುಚ್ಚು ನಾಯಿ ಕಡಿತಕ್ಕೆ ಔಷಧಿಯೇ ಬಂದಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು. ಇಂದಿರಾ ಕ್ಯಾಂಟೀನ್‍ನಲ್ಲಿ ಏನೆಲ್ಲಾ ಮೋಸ ಆಗಿದೆ ಲೆಕ್ಕ ಕೊಡಿ. ನಿಮ್ಮ ಕಾಲದಲ್ಲಿ ವಸತಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲವೆ ಎಂದು ಆರೋಪಿಸಿದರು.