Farmers Protest: ಹರಿಯಾಣ ಸಿಎಂ ಖಟ್ಟರ್​ ಕಾರ್ಯಕ್ರಮದಲ್ಲಿ ರೈತರ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಚ್, ಹಲವರಿಗೆ ಗಾಯ!

ಚಂಢೀಘಡ (ಮೇ 16); ಕೇಂದ್ರ ಸರ್ಕಾರದ ರೈತ ವಿರೋಧಿ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ಕಳೆದ 6 ತಿಂಗಳಿನಿಂದ ರೈತರು ಹೋರಾಟ ನಡೆಸುತ್ತಿದ್ದಾರೆ. ಪಂಜಾಬ್‌ನಲ್ಲಿ ಕಳೆದ ಸೆಪ್ಟಂಬರ್‌ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊ ಳ್ಳುತ್ತಿಲ್ಲ. ಇನ್ನೂ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಹ ಈ ಕಾನೂನುಗಳನ್ನು ಬೆಂಬಲಿಸುತ್ತಿದ್ದಾರೆ. ಹೀಗಾಗಿ ಕಳೆದ ಹಲವು ತಿಂಗಳುಗಳಿಂದ ರೈತರು ಸಿಎಂ ಮನೋಹರ್ ಲಾಲ್ ಖಟ್ಟರ್​ ಕಾರ್ಯಕ್ರಮದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದೂ ಸಹ ಅವರು ಹಿಸ್ಸಾರ್‌ ಜಿಲ್ಲೆಗೆ ಭೇಟಿ ನೀಡುವುದರ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಚ್‌ ಮಾಡಿದ್ದಾರೆ. ಇದರಲ್ಲಿ ಹಲವು ರೈತರು ಗಾಯಗೊಂಡಿದ್ದಾರೆ.

ಪೊಲೀಸರು ರೈತರ ವಿರುದ್ಧ ಲಾಠಿ ಚಾರ್ಚ್​ ಮಾಡಿದ್ದಾರೆ, ಅಶ್ರುವಾಯು ಪ್ರಯೋಗದ ಜೊತೆಗೆ ಪ್ಲಾಸ್ಟಿಕ್ ಗುಂಡುಗಳನ್ನು ಹಾರಿಸಿದ್ದಾರೆ ಮತ್ತು ಹಲವಾರು ಪ್ರತಿಭಟನಾ ಕಾರರನ್ನು ಬಂಧಿಸಿದ್ದಾರೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ. ಬ್ಯಾರಿಕೇಡ್‌ಗಳನ್ನು ತೆಗೆದ ರೈತರನ್ನು ಚದುರಿಸಲು ಪೊಲೀಸರು ಅಶ್ರುವಾಯು ಬಳಸಿದ್ದಾರೆ.ಹಲವು ರೈತರನ್ನು ಬಂಧಿಸಲಾಗಿದೆ.

ಹರಿಯಾಣದ ಹಿಸ್ಸಾರ್‌ನಲ್ಲಿ ಪೊಲೀಸರು ಮತ್ತು ರೈತರ ನಡುವೆ ನಡೆದ ಜಟಾಪಟಿ ವೇಳೆ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿ, ಅಶ್ರುವಾಯು ಸಿಡಿಸಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.ಘಟನೆಯ ನಂತರ ಸುಮಾರು ಎರಡು ಗಂಟೆಗಳ ಕಾಲ ರಾಷ್ಟ್ರೀಯ ಹೆದ್ದಾರಿ 9 ಯನ್ನು ರೈತರು ತಡೆದಿದ್ದರು. ಹಿಸಾರ್‌ಗೆ ಆಗಮಿಸಿದ ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ, ಬಂಧಿಸಿರುವ ಎಲ್ಲ ರೈತರನ್ನು ಬಿಡುಗಡೆ ಮಾಡದಿದ್ದರೆ, ಪ್ರತಿಭಟನಾಕಾರರು ಹರಿಯಾಣದ ಎಲ್ಲಾ ಪೊಲೀಸ್ ಠಾಣೆಗಳನ್ನು ಘೇರಾವ್ ಹಾಕಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹರಿಯಾಣದ ಹಿಸ್ಸಾರ್‌ನಲ್ಲಿ 500 ಬೆಡ್‌ಗಳ ಕೊರೊನಾ ಸೆಂಟರ್‌ ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್‌ ಜಿಲ್ಲೆಗೆ ಆಗಮಿಸಿದ್ದರು. ಕಳೆದ ಆರು ತಿಂಗಳಿನಿಂದ ನಡೆಯುತ್ತಿರುವ ರೈತ ಹೋರಾಟವನ್ನು ವಿರೋಧಿಸುತ್ತಲೇ ಬಂದಿರುವ ಖಟ್ಟರ್‌ ಅವರನ್ನು ಈವರೆಗೂ ಜಿಲ್ಲೆಗೆ ಬರಲು ರೈತರು ಅವಕಾಶ ನೀಡಿಲ್ಲ.

“ಅವರು ಉದ್ದೇಶಪೂರ್ವಕವಾಗಿ ಜಿಲ್ಲೆಗೆ ಬರುತ್ತಿ‌ದ್ದಾರೆ. ಅವರು ಕೊರೊನಾ ಹರಡುತ್ತಿದ್ದಾರೆ ಮತ್ತು ಅದಕ್ಕಾಗಿ ನಮ್ಮನ್ನು ದೂಷಿಸುತ್ತಿದ್ದಾರೆ” ಎಂದು ಭಾರತೀಯ ಕಿಸಾನ್ ಯೂನಿಯನ್ ಮುಖಂಡ ಗುರ್ನಮ್ ಸಿಂಗ್ ಚಾರುಣಿ ಹಿಸಾರ್‌ಗೆ ಬರುವ ಮೊದಲು ವಿಡಿಯೋ ಸಂದೇಶದಲ್ಲಿ ಹೇಳಿದ್ದರು.

ಹರಿಯಾಣದಲ್ಲಿ ಕಳೆದ ಎರಡು ವಾರಗಳಿಂದ ಲಾಕ್‌ಡೌನ್ ಜಾರಿಯಲ್ಲಿದೆ. ಜೊತೆಗೆ ಸಾಂಕ್ರಾಮಿಕ ರೋಗದಿಂದಾಗಿ ಮೇ 24 ರವರೆಗೆ ಅದನ್ನು ಇನ್ನೊಂದು ವಾರ ವಿಸ್ತರಿಸಿದೆ. ಇವುಗಳ ನಡುವೆ ಕೊರೊನಾ ಆರೈಕೆ ಕೇಂದ್ರವನ್ನು ಉದ್ಘಾಟಿಸಲು ಮುಖ್ಯಮಂತ್ರಿ ಖಟ್ಟರ್ ಭಾನುವಾರ ಹಿಸ್ಸಾರ್‌ಗೆ ಬಂದಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *