ಅಪ್ರಾಪ್ತ ಬಾಲಕಿಯರ ಮೇಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪಾಪಿಗಳಿಗೆ ಗಲ್ಲಿಗೇರಿಸುವತ್ತೇ.ಹೊಡೆಬೀರನಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ವಿನೋದ್ ಓಂಕಾರ್ ಆಗ್ರಹ
ಹೌದು ಮೊನ್ನೆ ಅಷ್ಟೇ ವಿಜಯಪುರ ಜಿಲ್ಲೆಯಾ ಬಸವನ ಬಾಗೇವಾಡಿ ತಾಲೂಕಿನ ಕುದರಿ ಸಾಲೇವಾಡಿ ಗ್ರಾಮದ ಮಾದಿಗ ಸಮಾಜದ ಅಪ್ರಾಪ್ತ ಬಾಲಕಿಯರ ಮೇಲೆ ಪಾಪಿಗಳು ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ. ಇದಕ್ಕೆ ಕಲಬುರಗಿ ಜಿಲ್ಲೆ ಕಾಳಗಿ ತಾಲ್ಲೂಕಿನ ಹೊಡೆಬೀರನಳ್ಳಿ ಗ್ರಾಮ ಪಂಚಾಯತಿಯ ಅಧ್ಯಕ್ಷೆ ಸಂಗೀತ ವಿನೋದ್ ಓಂಕಾರ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು ಕೂಡಲೇ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು.
ಪದೇ ಪದೇ ಹೆಣ್ಣುಮಕ್ಕಳ್ಳ ಮೇಲೆ ಅತ್ಯಾಚಾರ ನಡೆವುತಿದ್ದರು ಸರಕಾರ ಏಕೆ ? ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಕೂಡಲೇ ಸರಕಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಹಾಗೂ ಬಾಲಕಿಯರ ಕುಟುಂಬಗಳಿಗೆ ಪರಿಹಾರ ನೀಡಬೇಕು. ಹಿಂತಾ ದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ನಡೆವುತಿರುವುದು ನಿಜಕ್ಕೂ ದುಃಖಕರ ಸಂಗತಿ. ಸರಕಾರ ಮುಂದೆ ಆದರು ದಿಟ್ಟ ನಿರ್ಧಾರ ತೆಗೆದುಕೊಂಡು ಹೆಣ್ಣುಮಕ್ಕಳನ್ನು ರಕ್ಷಿಸಲಿ ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.
ವರದಿ ಶಿವರಾಜ್ ಕಟ್ಟಿಮನಿ