ರಾಜ್ಯದಲ್ಲಿ ಲಾಕ್‌ಡೌನ್‌ ವಿಸ್ತರಣೆಯೋ? ಅಂತ್ಯವೋ? ಸಿಎಂ ನೇತೃತ್ವದ ಸಭೆಯಲ್ಲಿ ಶನಿವಾರ ತೀರ್ಮಾನ

ಹೈಲೈಟ್ಸ್‌:

  • ರಾಜ್ಯದಲ್ಲಿ ವಿಧಿಸಿರುವ ಲಾಕ್‌ಡೌನ್‌ ಸೋಮವಾರಕ್ಕೆ ಅಂತ್ಯ ಹಿನ್ನೆಲೆ
  • ಕರ್ಫ್ಯೂ ವಿಸ್ತರಣೆ ಸಂಬಂಧ ರಾಜ್ಯ ಸರಕಾರ ಶನಿವಾರ ತೀರ್ಮಾನ
  • ಸಿಎಂ ಬಿಎಸ್‌ವೈ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಬಳಿಕ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಬಿಗಿ ಕರ್ಫ್ಯೂ ವಿಸ್ತರಣೆ ಬಗ್ಗೆ ರಾಜ್ಯ ಸರಕಾರ ಶನಿವಾರ ತೀರ್ಮಾನ ಪ್ರಕಟಿಸುವ ನಿರೀಕ್ಷೆಯಿದೆ. ಕೋವಿಡ್‌ ಪ್ರಸರಣ ತಡೆಯುವ ನಿಟ್ಟಿನಲ್ಲಿ ಈ ತಿಂಗಳ ಅಂತ್ಯದವರೆಗೆ ಕರ್ಫ್ಯೂ ವಿಸ್ತರಿಸಲು ಸರಕಾರ ಈಗಾಗಲೇ ಮಾನಸಿಕವಾಗಿ ಸಿದ್ಧವಾಗಿದೆ. ಈ ಬಗ್ಗೆ ಅಧಿಕೃತ ನಿರ್ಧಾರ ಕೈಗೊಳ್ಳುವ ಸಂಬಂಧ ಸಿಎಂ ಬಿ.ಎಸ್‌.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗುತ್ತದೆ. ತಾಂತ್ರಿಕ ಸಲಹಾ ಸಮಿತಿ ಹಾಗೂ ತಜ್ಞರ ಸಮಿತಿಯ ಸದಸ್ಯರ ಸಲಹೆಯನ್ನೂ ಪಡೆಯಲಾಗುತ್ತದೆ. ಈ ಮಧ್ಯೆ ಜಿಲ್ಲೆಗಳಲ್ಲಿನ ಸ್ಥಿತಿಗತಿ ಬಗ್ಗೆ ಶುಕ್ರವಾರ ಸಂಜೆಯ ಒಳಗೆ ವರದಿ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಸೂಚಿಸಿದ್ದಾರೆ.

ಈ ವರದಿಯನ್ನೂ ಅವಲೋಕನ ಮಾಡಲಾಗುತ್ತದೆ. ಇದರ ಆಧಾರದಲ್ಲಿ ಪರಿಷ್ಕೃತ ಮಾರ್ಗಸೂಚಿಯ ಸ್ವರೂಪ ಹೇಗಿರಬೇಕು ಎಂಬ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಜಾರಿಯಲ್ಲಿರುವ ಕರ್ಫ್ಯೂ ಸೋಮವಾರ(ಮೇ 24) ಅಂತ್ಯಗೊಳ್ಳಲಿದೆ. ಹಾಗಾಗಿ ಶನಿವಾರದ ಸಭೆಯಲ್ಲಿ ಪರಿಷ್ಕೃತ ಮಾರ್ಗಸೂಚಿಗೆ ಅನುಮತಿ ನೀಡಿ ನಂತರ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *