ಅಕ್ರಮವಾಗಿ ಆಕ್ಸಿಜನ್ ಸಿಲಿಂಡರ್ ಮಾರಾಟ ಮಾಡುತ್ತಿದ್ದ ಇಬ್ಬರು ಅರೆಸ್ಟ್
ಬೆಂಗಳೂರು,ಮೇ.22-ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಅಮ್ಲಜನಕ ಸಿಲಿಂಡರ್‍ಗಳನ್ನು ದಾಸ್ತಾನು ಮಾಡಿಕೊಂಡು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶೇಷಾದ್ರಿಪುರದ ಶಿವಗಣೇಶ್ ಹಾಗೂ ಬ್ಯಾಟರಾಯನಪುರದ ಬೆಂಗಳೂರು ಗ್ಯಾಸ್ ಏಜನ್ಸಿಯ ಭರತ್ ಬಂಧಿತ ಆರೋಪಿಗಳು. ಕೊರೊನಾ ಸೋಂಕಿತರಿಗೆ ತುರ್ತು ಅಗತ್ಯವಿರುವ ಆಕ್ಸಿಜನ್ ಸಿಲಿಂಡರ್‍ಗಳನ್ನು ಆರೋಪಿಗಳು ದಾಸ್ತಾನು ಮಾಡಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂಬ ಬಗ್ಗೆ ಬಂದ ಮಾಹಿತಿಯನ್ನಾಧರಿಸಿ ಕಾರ್ಯಚರಣೆ ನಡೆಸಿ ಇಬ್ಬರನ್ನು ಬಂಧಿಸಿ ಅವರ ಬಳಿ ಇದ್ದ 4 ಸಿಲಿಂಡರ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಂಧಿತರ ವಿರುದ್ಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಜರುಗಿಸಲಾಗಿದೆ.