ಸಾಮೂಹಿಕ ಅತ್ಯಾಚಾರಕ್ಕೊಳಗಾದ ಯುವತಿಯನ್ನು ಕೇರಳದಿಂದ ಬೆಂಗಳೂರಿಗೆ ಕರೆತಂದ ಪೊಲೀಸರು, ಮುಂದಿನ ನಡೆ ಏನು?

ಹೈಲೈಟ್ಸ್‌:

  • ಬೆಂಗಳೂರು ಅತ್ಯಾಚಾರ ಪ್ರಕರಣದಲ್ಲಿ ಮೇಜರ್‌ ಡೆವಲಪ್‌ಮೆಂಟ್‌
  • ಸಂತ್ರಸ್ತ ಯುವತಿಯನ್ನು ಬೆಂಗಳೂರಿಗೆ ಕರೆ ತಂದ ಪೊಲೀಸರು
  • ಕೋರ್ಟ್‌ ಸಮ್ಮತಿ ಪಡೆದಿದ್ದು ಇಂದು ಯುವತಿಯ ವಿಚಾರಣೆ

ಬೆಂಗಳೂರು: ಸಾಮೂಹಿಕ ಅತ್ಯಾಚಾರಕ್ಕೊಳಗಾಗಿದ್ದ ಯುವತಿಯನ್ನು ಕೇರಳದ ಕಲ್ಲಿಕೋಟೆಯಿಂದ ನಗರಕ್ಕೆ ಕರೆ ತಂದಿರುವ ಪೊಲೀಸರು, ಆಕೆಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೂರ್ವ ವಿಭಾಗದ ಪೊಲೀಸರು, ಸೆಕ್ಷನ್‌ 164ರನ್ವಯ ಹೇಳಿಕೆ ದಾಖಲಿಸಲು ಯುವತಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಯುವತಿಯನ್ನು ಶುಕ್ರವಾರ ರಾತ್ರಿಯೇ ಕೇರಳದಿಂದ ನಗರಕ್ಕೆ ಕರೆತರಲಾಗಿದೆ. ಅಜ್ಞಾತ ಸ್ಥಳದಿಂದ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹೇಳಿಕೆ ಪಡೆಯಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ನೇಹಿತರಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಂಗ್ಲಾಯುವತಿಯನ್ನು ತೀವ್ರ ವಿಚಾರಣೆಗೊಳಪಡಿಸಿರುವ ಪೂರ್ವ ವಿಭಾಗದ ಪೊಲೀಸರು, ಹಲವು ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಕೃತ್ಯ ನಡೆದಾಗ ಯಾರಾರ‍ಯರಿದ್ದರು, ಯಾವ ಕಾರಣಕ್ಕಾಗಿ ಈ ರೀತಿಯ ಹಲ್ಲೆ, ದೌರ್ಜನ್ಯವೆಸಗಲಾಗಿದೆ. ಬೆಂಗಳೂರು ನಗರಕ್ಕೆ ಬಂದು ಎಷ್ಟು ವರ್ಷಗಳಾಗಿವೆ. ಇದಕ್ಕೆ ಮೊದಲು ಎಲ್ಲಿದ್ದರು ಎಂಬ ಪ್ರಶ್ನೆಗಳನ್ನು ಪೊಲೀಸರು ಮುಂದಿಟ್ಟು ಯುವತಿಯಿಂದ ಉತ್ತರ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

ಆರೋಪಿಗಳ ಮೇಲೆ ಫೈರಿಂಗ್‌!
ಯುವತಿ ಮೇಲೆ ಗ್ಯಾಂಗ್‌ರೇಪ್ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ರಿದಾಯ್ ಬಾಬು, ಸಾಗರ್‌ ಕಾಲಿಗೆ ಗುಂಡುಹಾರಿಸಿ ವಶಕ್ಕೆ ಪಡೆದಿದ್ದಾರೆ. ಬೆಳಗ್ಗೆ ಸ್ಥಳ ಮಹಜರಿಗೆ ಕೆ.ಚನ್ನಸಂದ್ರಕ್ಕೆ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಆರೋಪಿಗಳು ಯತ್ನಿಸಿದ್ದಾರೆ.

ಈ ವೇಳೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿ ಶಾರಣಾಗುವಂತೆ ಕೇಳಿಕೊಂಡಿದ್ದಾರೆ. ಆದರೆ ಮಾತು ಕೇಳದೆ ಹಲ್ಲೆಗೆ ಮುಂದಾಗಿದ್ದು ಈ ವೇಳೆ ಆರೋಪಿಗಳಾದ ರಿದಾಯ್ ಬಾಬು ಬಲಗಾಲಿಗೆ, ಸಾಗರ್ ಎಡಗಾಲಿಗೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *