ಲಾಕ್‌ಡೌನ್‌ ಮುಗಿಯುವವರೆಗೂ ಜನರು ಮನೆಯಲ್ಲೇ ಇದ್ದು ಸಹಕರಿಸಿ: ಬೊಮ್ಮಾಯಿ

ಹೈಲೈಟ್ಸ್‌:

  • ಲಾಕ್‌ಡೌನ್‌ ಇದೇ ಜೂ. 14 ರ ನಂತರ ಲಾಕ್‌ಡೌನ್‌ ಸಡಿಲಗೊಳ್ಳುತ್ತದೆ.
  • ಲಾಕ್‌ಡೌನ್‌ ಸಡಿಲಿಕೆ ಆಗೋವರೆಗೂ ಜನ ಮನೆಯಲ್ಲಿದ್ದೇ ಸಹಕರಿಸಬೇಕು
  • ಪೊಲೀಸರು ಜನರು ಹೊರಬರುವುದನ್ನು ತಡೆಯುತ್ತಿಲ್ಲ ಎಂದು ನಿರ್ಲಕ್ಷ್ಯ ಮಾಡಬೇಡಿ.
  • ಬೆಂಗಳೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ

ಬೆಂಗಳೂರು: ಲಾಕ್‌ಡೌನ್‌ ಇದೇ ಜೂ. 14 ರ ನಂತರ ಲಾಕ್‌ಡೌನ್‌ ಸಡಿಲಗೊಳ್ಳುತ್ತದೆ. ಅಲ್ಲಿಯವರೆಗೂ ಜನರು ಮನೆಯಲ್ಲೇ ಇದ್ದು ಸಹಕರಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೊರೊನಾ ತಡೆಗೆ ಸ್ವಯಂ ನಿಯಂತ್ರಣ ಮಾಡಿಕೊಳ್ಳಬೇಕು. ಪೊಲೀಸರು ಕಾನೂನನ್ನು ಕೈಗೆತ್ತಿಕೊಳ್ಳುವ ಅವಕಾಶ ಬರಬಾರದು, ಪೊಲೀಸರು ಜನರು ಹೊರಬರುವುದನ್ನು ತಡೆಯುತ್ತಿಲ್ಲ ಎಂದು ನಿರ್ಲಕ್ಷ್ಯ ಮಾಡಬೇಡಿ. ರಸ್ತೆಯಲ್ಲಿ ಪೊಲೀಸರು ತಡೆಯದಿದ್ದರೂ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗುವುದರಿಂದ ಪ್ರಕರಣ ದಾಖಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಉಲ್ಲಂಘನೆ: ಲಾಕ್‌ಡೌನ್‌ ಇರುವಾಗಲೂ ಮನೆಯಿಂದ ಹೊರಬಂದು ಕಾಂಗ್ರೆಸ್‌ ಪ್ರತಿಭಟನೆ ನಡೆಸುವ ಮೂಲಕ ನಿಯಮವನ್ನು ಉಲ್ಲಂಘಿಸಿದೆ ಎಂದು ಬಸವರಾಜ ಬೊಮ್ಮಾಯಿ ಟೀಕಿಸಿದರು. ಅತ್ಯಂತ ಸೂಕ್ಷ್ಮ ಸಂದರ್ಭದಲ್ಲಿ ಬೆಲೆ ಏರಿಕೆ ವಿಚಾರದಲ್ಲಿ ಹೋರಾಟ ಮಾಡುವ ಜತೆಗೆ. ಇದು ಕಾಂಗ್ರೆಸ್‌ ಪಕ್ಷದ ನಕಾರಾತ್ಮಕ ರಾಜಕಾರಣಕ್ಕೆ ಸಾಕ್ಷಿ ಎಂದು ಅವರು ಹೇಳಿದರು.

ಮೊದಲು ಲಸಿಕೆ ಹಾಕಿಸಿಕೊಳ್ಳಿ ಎಂದರೆ, ಯಾಕೆ ಹಾಕಿಸಿಕೊಳ್ಳಬೇಕು ಎಂದು ಕಾಂಗ್ರೆಸ್‌ ನಾಯಕರು ಪ್ರಶ್ನಿಸುತ್ತಿದ್ದರು. ಮೊದಲು ಮೋದಿ ಲಸಿಕೆ ಹಾಕಿಸಿಕೊಳ್ಳಲಿ ಎಂದಿದ್ದರು. ಇದೀಗ ಅವರ ವರಸೆಯೇ ಬದಲಾಗಿದೆ. ಲಸಿಕೆ ಏಕೆ ಕೊಡುತ್ತಿಲ್ಲ ಎಂದು ಪ್ರಶ್ನಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *