‘ಕರ್ನಾಟಕವನ್ನು ಬಿಹಾರಕ್ಕೆ ಹೋಲಿಸಬೇಡಿ, ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ’; ಡಾ.ಸುಧಾಕರ್‌ ಸ್ಪಷ್ಟನೆ

ಹೈಲೈಟ್ಸ್‌:

  • ರಾಜ್ಯದಲ್ಲಿ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ, ರಾಜ್ಯವನ್ನು ಬಿಹಾರಕ್ಕೆ ಹೋಲಿಸಬೇಡಿ.
  • ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ. ಯಾವುದೇ ಮಾಹಿತಿ ಮುಚ್ಚಿಟ್ಟಿಲ್ಲ.
  • ಕನಿಷ್ಠ ಶೇ 70 ಡೋಸ್‌ ಕಂಪ್ಲೀಟ್‌ ಆದ ಮೇಲೆ ನಾವು ಮೊದಲಿನಂತೆ ಆರಾಮವಾಗಿ ಇರಬಹುದು
  • ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಸದಾಶಿವನಗರದ ನಿವಾಸದಲ್ಲಿ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಾವಿನ ಸಂಖ್ಯೆ ಮುಚ್ಚಿಟ್ಟಿಲ್ಲ, ರಾಜ್ಯವನ್ನು ಬಿಹಾರಕ್ಕೆ ಹೋಲಿಸಬೇಡಿ. ಕರ್ನಾಟಕಕ್ಕೂ ಬಿಹಾರಕ್ಕೂ ಹೋಲಿಕೆ ಮಾಡುವುದು ಸರಿಯಲ್ಲ. ಯಾವುದೇ ಮಾಹಿತಿಯನ್ನು ಮುಚ್ಚಿಟ್ಟಿಲ್ಲ, ಅಂತಹ ಅವಕಾಶವೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ ಸ್ಪಷ್ಟಪಡಿಸಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅನ್‌ಲಾಕ್‌ ಮಾಡಿದರೂ ಜನರು ಎಚ್ಚರಿಕೆಯಿಂದ ಇರಬೇಕು, ಎರಡು ಡೋಸ್‌ ಲಸಿಕೆ ಪಡೆಯೋವರೆಗೂ ಜನ ಎಚ್ಚರವಾಗಿ ಇರಬೇಕು. ರಾಜ್ಯದಲ್ಲಿ ಕನಿಷ್ಠ ಶೇ 70 ಡೋಸ್‌ ಕಂಪ್ಲೀಟ್‌ ಆದ ಮೇಲೆ ನಾವು ಮೊದಲಿನಂತೆ ಆರಾಮವಾಗಿ ಇರಬಹುದು. ಲಸಿಕೆ ಹಾಕಿಸಿಕೊಳ್ಳೋವರೆಗೂ ಯಾರು ಮೈ ಮರೆಯಬೇಡಿ ಎಂದು ಎಚ್ಚರಿಕೆ ನೀಡಿದರು.

ರಾಜ್ಯದಲ್ಲಿ ಆರ್ಥಿಕ ನಷ್ಟವಾಗಿದೆ, ಹೀಗಾಗಿ ಕೆಲ ವಿನಾಯಿತಿ ಕೊಡಲಾಗಿದೆ. ಅಳೆದು ತೂಗಿ ನಿರ್ಧಾರ ಮಾಡಿದ್ದೇವೆ. ಒಂದು ವೇಳೆ ರಿಯಾಯಿತಿಯಿಂದ ಸೋಂಕು ಹೆಚ್ಚಳವಾದರೆ ಮತ್ತೆ ಕಠಿಣ ಕ್ರಮ ಗ್ಯಾರಂಟಿ ತೆಗೆದುಕೊಳ್ಳುತ್ತೇವೆ. ಶೇ 10ಕ್ಕೂ ಹೆಚ್ಚು ಸೋಂಕು ಇರುವ ಜಿಲ್ಲೆಗಳು ಗಂಭೀರವಾಗಿ ಪರಿಗಣಿಸಬೇಕು. ಶೇ 5ರ ಒಳಗೆ ಸೋಂಕು ಇರುವ ಜಿಲ್ಲೆಗಳು ಎಚ್ಚರ ತಪ್ಪಬಾರದು. ಹೆಚ್ಚು ಹೆಚ್ಚು ಟೆಸ್ಟ್‌ಗಳನ್ನು ಮಾಡಲು ಕ್ರಮ ವಹಿಸುತ್ತೇವೆ ಎಂದು ತಿಳಿಸಿದರು.

ಅಂತರರಾಜ್ಯ, ಹೊರ ದೇಶಗಳಿಂದ ಬರುವವರಿಗೆ ಕಡ್ಡಾಯವಾಗಿ ಚೆಕ್‌ ಪಾಯಿಂಟ್‌ಗಳಲ್ಲಿ ಪರೀಕ್ಷೆ ಮಾಡುತ್ತೇವೆ. ಒಂದು ಗ್ರಾಮದಲ್ಲಿ ಐವರು ಸೋಂಕಿತರು ಕಂಡು ಬಂದರೆ ಆ ಗ್ರಾಮವನ್ನೇ ಸೀಲ್‌ಡೌನ್‌ ಮಾಡಲಾಗುವುದು. ಗ್ರಾಮೀಣ ಭಾಗದಲ್ಲಿ ಸೋಂಕು ಬಂದ ವ್ಯಕ್ತಿಯನ್ನು ಕೂಡಲೇ ಕೋವಿಡ್‌ ಆರೈಕೆ ಕೇಂದ್ರಕ್ಕೆ ಸೇರಿಸಬೇಕು ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *