Siddalingaiah: ಸಿದ್ದಲಿಂಗಯ್ಯ ನಿಧನಕ್ಕೆ ಪ್ರಧಾನಿ ಸಂತಾಪ; ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು (ಜೂ. 12): ಕೋವಿಡ್​ ಸೋಂಕಿನಿಂದ ಮೃತಪಟ್ಟ ಕವಿ, ಸಾಹಿತಿ ಡಾ ಸಿದ್ದಲಿಂಗಯ್ಯ ಅವರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ಸಿದ್ದಲಿಂಗಯ್ಯ ಅವರು ತಮ್ಮ ಬರವಣಿಗೆ ಮತ್ತು ಕಾವ್ಯಗಳ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ನೀಡಿದ ಕೊಡುಗೆಗಳು ಸದಾ ಸ್ಮರಣೀಯ. ಅವರ ಕುಂಟುಂಬ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದಿದ್ದಾರೆ. ಸಿದ್ದಲಿಂಗಯ್ಯ ಅವರ ಸಾವಿಗೆ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ, ವಿಪಕ್ಷ ನಾಯಕ ಸೇರಿದಂತೆ ಅನೇಕ ರಾಜಕೀಯ ನಾಯಕರು ಸಾಹಿತ್ಯವರ್ಗ, ಅವರ ಅಭಿಮಾನಿಗಳು ಕೂಡ ಸಂತಾಪ ಸೂಚಿಸಿದ್ದಾರೆ.

ಕೋವಿಡ್​ ಹಿನ್ನಲೆ ಆಸ್ಪತ್ರೆಗೆ ದಾಖಲಾಗಿದ್ದ ಸಿದ್ದಲಿಂಗಯ್ಯ  ಅವರು, ಚಿಕಿತ್ಸೆ ಫಲಿಸದೇ  ಮಣಿಪಾಲ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಮರಣೋತ್ತರ ಪರೀಕ್ಷೆಯಲ್ಲಿ  ಕೋವಿಡ್​ ವರದಿ ನೆಗೆಟಿವ್​ ಬಂದಿದೆ. ಈ ಹಿನ್ನಲೆ ಮೃತದೇಹವನ್ನು ಅವರ ಕುಟುಂಬಕ್ಕೆ ಒಪ್ಪಿಸಲಾಗಿದೆ. ಆರ್​ಆರ್​ನಗರದ ಅವರ ನಿವಾಸಕ್ಕೆ ಮೃತ ದೇಹ ರವಾನೆಗೆ ಸಿದ್ಧತೆ ನಡೆಸಲಾಗಿದೆ.

ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಕಲಾಗ್ರಾಮದಲ್ಲಿ ಅಂತ್ಯಕ್ರಿಯೆ

ಸಿದ್ದಲಿಂಗಯ್ಯ ಅವರ ಅಂತ್ಯಕ್ರಿಯೆಯನ್ನು ಜ್ಞಾನಭಾರತಿ ಆವರಣದ ಕಲಾಗ್ರಾಮದಲ್ಲಿ ನಡೆಸಲು ಸಿದ್ಧತೆ ನಡೆಸಲಾಗಿದೆ. ಸಿದ್ದಲಿಂಗಯ್ಯ ಅವರ ಗುರುಗಳಾಗಿದ್ದ ರಾಷ್ಟ್ರಕವಿ ಜಿಎಸ್ ಶಿವರುದ್ರಪ್ಪ ಅವರ ಸಮಾಧಿ ಸಮೀಪದಲ್ಲೇ  ಅವರ ಅಂತ್ಯಕ್ರಿಯೆಗೆ ನಿರ್ಧರಿಸಲಾಗಿದೆ. ಗುರುವಿನ ಪಕ್ಕವೇ ಶಿಷ್ಯನ ಅಂತ್ಯಕ್ರಿಯೆಗೆ ಸರ್ಕಾರ, ಸಿದ್ದಲಿಂಗಯ್ಯ ಕುಟುಂಬ ತೀರ್ಮಾನ ನಡೆಸಿದ್ದು,  . ಅಂತ್ಯಕ್ರಿಯೆಗೂ ಮುನ್ನ ನಾಗರಬಾವಿಯಲ್ಲಿನ ಅಂಬೇಡ್ಕರ್ ಕಾಲೇಜಿನಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು.

ಸಿದ್ದಲಿಂಗಯ್ಯ ಅವರ ನಿವಾಸದ ಬಳಿ ಅಂತಿಮ ದರ್ಶನಕ್ಕೆ ಅವರ ಆರ್ ಆರ್ ನಗರದ ನಿವಾಸದ ಬಳಿ ಪೆಂಡಾಲ್ ಹಾಕಿ ವ್ಯವಸ್ಥೆ ಮಾಡಲಾಗಿದೆ.  ಸಿದ್ದಲಿಂಗಯ್ಯ ಅವರು, ಅಪಾರ ಶಿಷ್ಯ ವೃಂದ, ಆಪ್ತರು, ಹಿತೈಷಿಗಳನ್ನ ಅಗಲಿದ್ದು, ಅವರ ಅಂತಿಮ ದರ್ಶನಕ್ಕೆ ಬಿಬಿಎಂಪಿ ವ್ಯವಸ್ಥೆ ಮಾಡಿದೆ.  ಸುಮಾರು 30 ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದೆ.

ಕನ್ನಡ ಸಾರಸ್ವತ ಲೋಕಕ್ಕೆ ಗಣನೀಯ ಸೇವೆ ಸಲ್ಲಿಸಿ, ದಲಿತ ಸಮುದಾಯದ ಧ್ವನಿಯಾಗಿ ಕಾವ್ಯಗಳ ಮೂಲಕ ಸಿದ್ದಲಿಂಗಯ್ಯ ಅವರು ಗುರುತಿಸಿಕೊಂಡಿದ್ದಾರೆ. ಈ ಹಿನ್ನಲೆ ಅವರ ಗೌರವಾರ್ಥವಾಗಿ ಜ್ಞಾನಭಾರತಿಯ ಬಳಿ ಸ್ಮಾರಕ ಸ್ಥಾಪಿಸಬೇಕು. ಈ ಮೂಲಕ ಅವರ ಸೇವೆಯನ್ನು ಗೌರವಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *