ರೆಡ್ ಕ್ರಾಸ್ ಸಂಸ್ಥೆಯಿಂದ ಆಮ್ಲಜನಕ ಸಾಂದ್ರಕ, ಆಕ್ಸಿಮೀಟರ್ ಡಿ.ಹೆಚ್.ಓಗೆ ಹಸ್ತಾಂತರ
ಕಲಬುರಗಿ,ಜೂ.14(ಕ.ವಾ)- ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ಸೋಮವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಲಬುರಗಿ ಜಿಲ್ಲಾ ಘಟಕದಿಂದ 3 ಆಮ್ಲಜನಕ ಸಾಂದ್ರಕ, 70 ಪಲ್ಸ್ ಆಕ್ಸಿಮೀಟರ್ ಹಾಗೂ ಮಾಸ್ಕ್‌ಗಳನ್ನು ಡಿ.ಹೆಚ್.ಓ ಡಾ.ಶರಣಬಸಪ್ಪ ಗಣಜಲಖೇಡ್ ಅವರಿಗೆ ಹಸ್ತಾಂತರಿಸಿದರು.
ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ರಕ್ತದಾನಿಗಳ ದಿನಾಚರಣೆ ಸಂದರ್ಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು ಹಸ್ತಾಂತರಿಸಿ ಮಾತನಾಡಿದ ಸಂಸ್ಥೆಯ ಉಪಸಭಾಪತಿ ಅರುಣಕುಮಾರ ಲೋಯಾ ಮುಂದಿನ ದಿನದಲ್ಲಿಯೂ ಇದೇ ರೀತಿಯ ನೆರವು ಆರೋಗ್ಯ ಇಲಾಖೆಗೆ ನಿಡಲಿದ್ದೇವೆ ಎಂದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ
ಕಾರ್ಯದರ್ಶಿ ರವೀಂದ್ರ ಶಾಬಾದಿ, ಖಜಾಂಚಿ ಭಾಗ್ಯಲಕ್ಷ್ಮಿ ಎಂ, ಜಿ.ಎಸ್. ಪದ್ಮಜಿ, ಶಿವರಾಜ ಅಂಡಗಿ ಇದ್ದರು.