ಮಹಾರಾಷ್ಟ್ರದಲ್ಲಿ ಭಾರೀ ಮಳೆ; ಹಿಪ್ಪರಗಿ ಜಲಾಶಯದಿಂದ 72 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ

ಬಾಗಲಕೋಟೆ: ಮಹಾರಾಷ್ಟ್ರದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.

ಬಾಗಲಕೋಟೆ ಜಿಲ್ಲೆಯ ಹಿಪ್ಪರಗಿ ಜಲಾಶಯಕ್ಕೆ ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಹರಿದು ಬರುತ್ತಿರೋ ಹಿನ್ನೆಲೆ, ಹಿಪ್ಪರಗಿ ಜಲಾಶಯದಿಂದ ಕೃಷ್ಣಾ ನದಿಗೆ 72 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದ ಕೃಷ್ಣಾ ನದಿ ತೀರದ ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. ಈ ಸಂಬಂಧ ನೀರು ಬಿಡುಗಡೆ ಬಗ್ಗೆ ಹಿಪ್ಪರಗಿ ಜಲಾಶಯದ ಕಾಯ೯ಕಾರಿ ಅಭಿಯಂತರ ಕೆ.ಕೆ.ಜಾಲಿಬೇರಿ ಮಾಹಿತಿ ನೀಡಿದ್ದಾರೆ.

ಹಿಪ್ಪರಗಿ ಜಲಾಶಯದ ಕಾಯ೯ಕಾರಿ ಅಭಿಯಂತರ ಕೆ.ಕೆ.ಜಾಲಿಬೇರಿ ಅವರು ಕೃಷ್ಣಾ ನದಿ ಪಾತ್ರದ ಜನರು ಸುರಕ್ಷಿತ ತಾಣಗಳಿಗೆ ತೆರಳುವಂತೆ ಸೂಚನೆ ನೀಡಿದ್ದಾರೆ. ಇತ್ತ ಘಟಪ್ರಭಾ ನದಿಗೆ 26 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಬಿಡುಗಡೆ ಮಾಡಲಾಗಿದ್ದು, ಮುಧೋಳ ತಾಲೂಕಿನ ನದಿ ತೀರದ ಗ್ರಾಮಗಳಿಗೂ ಪ್ರವಾಹ ಭೀತಿ ಎದುರಾಗಿದೆ. ಇನ್ನು ಕೆಲವೆಡೆ ಸೇತುವೆಗಳು ಜಲಾವೃತವಾಗಿದೆ.

ಇನ್ನು ಮಿಜಿ೯- ಅಕ್ಕಿಮರಡಿ, ಮಹಾಲಿಂಗಪೂರ-ಯಾದವಾಡ, ನಂದಗಾಂವ- ಮಹಾಲಿಂಗಪೂರ ಸೇತುವೆಗಳು ಮುಳುಗಡೆಯಾಗಿದ್ದು, ಕೃಷ್ಣಾ ಮತ್ತು ಘಟಪ್ರಭಾ ನದಿಗೆ ಹೆಚ್ಚುವರಿ ನೀರು ಬಿಡುಗಡೆಯಾದ ಬೆನ್ನಲ್ಲೆ ಆಲಮಟ್ಟಿಯಲ್ಲಿ ಹಿನ್ನೀರು ಪ್ರಮಾಣ ಹೆಚ್ಚುತ್ತಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *