ಗೃಹ ಕಚೇರಿ ಕೃಷ್ಣಾ ಮತ್ತು ಕಾವೇರಿ ನಿವಾಸದಲ್ಲಿ ಕೊರೋನಾ ಹಾವಳಿ: ಸಿಎಂ ಸೇರಿದಂತೆ 11 ಮಂದಿಗೆ ಪಾಸಿಟಿವ್
ಗೃಹ ಕಚೇರಿ ಕೃಷ್ಣಾ ಮತ್ತು ಸಿಎಂ ಅಧಿಕೃತ ನಿವಾಸಕ್ಕೆ ಹೊರಗಡೆಯಿಂದ ಪ್ರವೇಶ ನಿರ್ಬಂಧಿಸಲಾಗಿದೆ. ರಜೆ ಮೇಲೆ ಊರಿಗೆ ತೆರಳಿದ್ದ ಸಿಬ್ಬಂದಿ ಮತ್ತು ಸಿಎಂ ಕುಟುಂಬ ಸದಸ್ಯರನ್ನು ಕೋವಿಡ್-19 ಟೆಸ್ಟ್ಗೆ ಒಳಪಡಿಸಲಾಗಿದೆ. ಜತೆಗೆ ಆಂಟಿಜನ್ ಟೆಸ್ಟ್ ಮಾಡಲಾಗುತ್ತಿದೆ
ಬೆಂಗಳೂರು(ಆ.03): ರಾಜ್ಯದಲ್ಲಿ ಕೊರೋನಾ ವೈರಸ್ ತಡೆಗೆ ಹಗಲು ರಾತ್ರಿಯೆನ್ನದೇ ಶ್ರಮಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೂ ಸೋಂಕು ತಗುಲಿದೆ. ಹೀಗಾಗಿಯೇ ಯಡಿಯೂರಪ್ಪರನ್ನು ಭೇಟಿ ಮಾಡಿದ್ದ ಎಲ್ಲರೂ ಈಗ ಹೋಮ್ ಕ್ವಾರಂಟೈನ್ ಆಗಿದ್ದಾರೆ. ಜತೆಗೆ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ಮತ್ತು ಕಚೇರಿಯನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಿಸಿ ಕುಟುಂಬ ಸದಸ್ಯರು ಯಾರಿಗೆ ಪ್ರವೇಶಕ್ಕೆ ಅವಕಾಶ ನೀಡದೇ ನಿರ್ಬಂಧಿಸಿದ್ದಾರೆ.
ಇನ್ನು, ಸಿಎಂ ನಿವಾಸದಲ್ಲಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗಳಿಗೆ ಕೋವಿಡ್-19 ಪರೀಕ್ಷೆ ಮಾಡಲಾಗುತ್ತಿದೆ. ಸಿಎಂಗೆ ಕೊರೋನಾ ಕಾಣಿಸಿಕೊಂಡ ಬೆನ್ನಲ್ಲೇ ಇಂದು ಬೆಳಗ್ಗೆ ಆಗಮಿಸಿದ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿ, ಗೃಹ ಕಚೇರಿ ಕೃಷ್ಣಾ ಮತ್ತು ಅಧಿಕೃತ ನಿವಾಸ ಕಾವೇರಿ ಆವರಣವನ್ನು ಸ್ಯಾನಿಟೈಸ್ ಮಾಡಿದ್ದಾರೆ.
ಗೃಹ ಕಚೇರಿ ಕೃಷ್ಣಾ ಮತ್ತು ಸಿಎಂ ಅಧಿಕೃತ ನಿವಾಸಕ್ಕೆ ಹೊರಗಡೆಯಿಂದ ಪ್ರವೇಶ ನಿರ್ಬಂಧಿಸಲಾಗಿದೆ. ರಜೆ ಮೇಲೆ ಊರಿಗೆ ತೆರಳಿದ್ದ ಸಿಬ್ಬಂದಿ ಮತ್ತು ಸಿಎಂ ಕುಟುಂಬ ಸದಸ್ಯರನ್ನು ಕೋವಿಡ್-19 ಟೆಸ್ಟ್ಗೆ ಒಳಪಡಿಸಲಾಗಿದೆ. ಜತೆಗೆ ಆಂಟಿಜನ್ ಟೆಸ್ಟ್ ಮಾಡಲಾಗುತ್ತಿದೆ.
ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿದ್ದ ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ವಸತಿ ಸಚಿವ ವಿ ಸೋಮಣ್ಣಗೆ ಕೋವಿಡ್ ಟೆಸ್ಟ್ ಮಾಡಿದ್ದು, ರಿಸಲ್ಟ್ ನೆಗೆಟಿವ್ ಬಂದಿದೆ. ಹಾಗೆಯೇ ಸಿಎಂ ನಿವಾಸದ ಅಡುಗೆ ಸಿಬ್ಬಂದಿ ಮತ್ತು ಕಾರ್ ಚಾಲಕ ಸೇರಿದಂತೆ ಒಂಬತ್ತು ಮಂದಿಗೆ ಕೊರೋನಾ ತಗುಲಿದೆ.
ಕೊರೋನಾ ಕಾಣಿಸಿಕೊಂಡರೂ ಈ 9 ಮಂದಿಗೆ ಯಾವುದೇ ರೋಗಲಕ್ಷಣಗಳು ಇಲ್ಲ. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಎಲ್ಲರನ್ನೂ ಕೋವಿಡ್ ಕೇರ್ ಸೆಂಟರ್ಗೆ ಕಳುಹಿಸಿಕೊಡಲಾಗಿದೆ. ಉಳಿದವರಿಗೆ ಕೊರೋನಾ ಪರೀಕ್ಷೆ ಮಾಡಲಾಗುತ್ತಿದೆ.