ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರ ಕಟ್ಟಡ ಉದ್ಘಾಟನೆ
ಕಲಬುರಗಿ,ಜೂ.22 : 2020-21ನೇ ಸಾಲಿನ ಎನ್.ಎಚ್.ಎಮ್. ಯೋಜನೆಯಡಿ ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರ ಕಟ್ಟಡದ ಉದ್ಘಾಟನಾ ಸಮಾರಂಭವು ಮಂಗಳವಾರ ಜೂನ್ 22 ರಂದು ಮಧ್ಯಾಹ್ನ 1 ಗಂಟೆಗೆ ಕಲಬುರಗಿ ನಗರದ ಡಿ.ಹೆಚ್.ಓ. ಕಚೇರಿ ಆವರಣದಲ್ಲಿ ಜರುಗಲಿದೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ. ಸುಧಾಕರ ಅವರ ಘನ ಉಪಸ್ಥಿತಿಯಲ್ಲಿ ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ಆರ್.ನಿರಾಣಿ ಅವರು ಜಿಲ್ಲಾ ಲಸಿಕಾ ಉಗ್ರಾಣ ಕೇಂದ್ರ ಕಟ್ಟಡವನ್ನು ಉದ್ಘಾಟಿಸುವರು. ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಹಾಗೂ ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷ ದತ್ತಾತ್ರೇಯ ಸಿ. ಪಾಟೀಲ ರೇವೂರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರಾದ ಬಿ.ಜಿ. ಪಾಟೀಲ, ಡಾ. ಚಂದ್ರಶೇಖರ ಬಿ. ಪಾಟೀಲ, ಸುನೀಲ ವಲ್ಲ್ಯಾಪೂರೆ, ಶಶೀಲ ನಮೋಶಿ ಹಾಗೂ ಡಾ. ಸಾಯಿಬಣ್ಣ ತಳವಾರ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.