ಪೂರ್ಣ ಪ್ರಮಾಣದ ಅನ್‌ಲಾಕ್‌ಗೆ ಸಿದ್ಧಗೊಂಡ ಬೆಂಗಳೂರು, ಸೋಮವಾರದಿಂದ ನಗರದ ಚಿತ್ರಣ ಬದಲು!

ಹೈಲೈಟ್ಸ್‌:

  • ಕೋವಿಡ್‌ ಆತಂಕದ ನಡುವೆಯೂ ಪೂರ್ಣ ಪ್ರಮಾಣದ ಅನ್‌ಲಾಕ್‌ಗೆ ಬೆಂಗಳೂರು ನಗರ ಸಿದ್ಧಗೊಂಡಿದೆ
  • ಸೋಮವಾರದಿಂದ ಬೆಂಗಳೂರು ನಗರದ ಚಿತ್ರಣ ಮತ್ತೆ ಬದಲಾಗಲಿದೆ
  • ಲಾಕ್‌ಡೌನ್‌ನಿಂದ ನಷ್ಟದಲ್ಲಿರುವ ವ್ಯಾಪಾರಿಗಳು ಒಂದಿಷ್ಟು ಚೇತರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದಾರೆ

ಬೆಂಗಳೂರು: ಪೂರ್ಣ ಪ್ರಮಾಣದ ಅನ್‌ಲಾಕ್‌ 3.0 ಗೆ ಬೆಂಗಳೂರು ಸಿದ್ಧಗೊಳ್ಳುತ್ತಿದೆ. ಎಂದಿನಂತೆ ವ್ಯಾಪಾರ ವಹಿವಾಟು ನಡೆಸಲು ವ್ಯಾಪಾರಸ್ಥರು ಸಿದ್ಧಗೊಳ್ಳುತ್ತಿದ್ದು ಶಾಪಿಂಗ್‌ ನಡೆಸಲು ಗ್ರಾಹಕರು ಸಜ್ಜಾಗುತ್ತಿದ್ದಾರೆ. ಕೋವಿಡ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಟ್ಟುನಿಟ್ಟಿನ ಲಾಕ್‌ಡೌನ್ ವಿಧಿಸಲಾಗಿತ್ತು. ಕೋವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಅನ್‌ಲಾಕ್‌ ಪ್ರಕ್ರಿಯೆ ಆರಂಭಗೊಂಡಿತ್ತು. ಆದರೂ ಪೂರ್ಣ ಪ್ರಮಾಣದಲ್ಲಿ ಅನ್‌ಲಾಕ್‌ ಜಾರಿಗೊಂಡಿರಲಿಲ್ಲ. ಉಳಿದ ದಿನಗಳಲ್ಲಿ ಸಂಜೆ 5 ಗಂಟೆಯ ವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆಡಿದಲು ಅವಕಾಶ ಇದ್ದರೂ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ ಇದೀಗ ಪೂರ್ಣ ಪ್ರಮಾಣದಲ್ಲಿ ಅನ್‌ಲಾಕ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅದರಂತೆ ಸರ್ಕಾರಿ/ಖಾಸಗಿ ಕಛೇರಿಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಚಟುವಟಿಕೆಗಳು ಶೇ. 100 ರಷ್ಟು ಸಿಬ್ಬಂದಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಮಾಲ್ಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಶೇ. 100 ರಷ್ಟು ಪ್ರಮಾಣಿಕರೊಂದಿಗೆ ಸಂಚರಿಸಲು ಅವಕಾಶ ಕಲ್ಪಿಸಲಾಗಿದೆ.

ಅಷ್ಟೇ ಅಲ್ಲದೆ, ಧಾರ್ಮಿಕ ಸ್ಥಳಗಳಲ್ಲಿ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮದುವೆ ಹಾಗೂ ಇನ್ನಿತರೆ ಕೌಟುಂಬಿಕ ಶುಭ ಸಮಾರಂಭಗಳಿಗೆ 100 ಜನರೊಂದಿಗೆ ಭಾಗವಹಿಸಲು ಅವಕಾಶ. ಈಜುಕೊಳಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶ ನೀಡಲಾಗಿದೆ. ಕ್ರೀಡಾ ಸಂಕೀರ್ಣಗಳಲ್ಲಿ ಕ್ರೀಡಾಪಟುಗಳಿಗೆ ಅಭ್ಯಾಸ ಮಾಡಲು ಅವಕಾಶವನ್ನು ಕಲ್ಪಿಸಿಕೊಡಲಾಗಿದೆ.

ಕೊರೋನಾ ಕರ್ಫ್ಯೂ (ನೈರ್ಟ್ ಕರ್ಫ್ಯೂ) ರಾತ್ರಿ 9.00 ರಿಂದ ಬೆಳಿಗ್ಗೆ 5.00 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅದರ ಹೊರತಾಗಿ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುವುದಿಲ್ಲ. ಪಬ್‌ಗಳಿಗೆ ತೆರೆಯಲು ಅವಕಾಶ ನೀಡದೆ ಇದ್ದರೂ ಬಾರ್‌ಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ವ್ಯಾಪಾರಕ್ಕೆ ಭರದ ಸಿದ್ಧತೆ

ಕೋವಿಡ್ ಕಾರಣದಿಂದಾಗಿ ಮಾಲ್‌ಗಳು ಮುಚ್ಚಲ್ಪಟ್ಟಿದ್ದವು. ಆದರೆ ಇದೀಗ ತೆರೆಯಲು ಸರ್ಕಾರ ಅವಕಾಶ ನೀಡಿದೆ. ಈ ನಿಟ್ಟಿನಲ್ಲಿ ಮಾಲ್‌ಗಲ್ಲಿ ಕ್ಲೀನಿಂಗ್ ಶುರುವಾಗಿದೆ.ನಗರದ ಎಲ್ಲ ಮಾಲ್‌ಗಳಲ್ಲಿ ಭಾನುವಾರ ಸಿಬ್ಬಂದಿಗಳು ಸ್ವಚ್ಛಗೊಳಿಸುತ್ತಿದ್ದಾರೆ. ಇನ್ನೇನು ಈದ್ ಹಬ್ಬ ಕೂಡಾ ಹತ್ತಿರ ಇರುವುದರಿಂದ ವ್ಯಾಪಾರ ವಹಿವಾಟು ಹೆಚ್ಚಾಗುವ ನಿರೀಕ್ಷೆಯೂ ಇದೆ.

ಇನ್ನು ಹೋಟೆಲ್ ರೆಸ್ಟೋರೆಂಟ್‌ಗಳಿಗೂ ಪೂರ್ಣ ಪ್ರಮಾಣದ ವ್ಯಾಪಾರಕ್ಕೆ ಅವಕಾಶ ನೀಡಿರುವುದರಿಂದ ಅಲ್ಲೂ ಗ್ರಾಹಕರಿಗೆ ಉತ್ತಮ ಸೇವೆ ನೀಡಲು ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಒಟ್ಟಿನಲ್ಲಿ ಅನ್‌ಲಾಕ್‌ಗೆ ಸಿಲಿಕಾನ್ ಸಿಟಿ ಸಜ್ಜಾಗುತ್ತಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *