ಬಿಎಸ್‌ವೈಯನ್ನು ಭೇಟಿ ಮಾಡಿದ ಎಚ್‌ಡಿಕೆ; ಕುತೂಹಲ ಕೆರಳಿಸಿದ ಮಾತುಕತೆ

ಹೈಲೈಟ್ಸ್‌:

  • ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ
  • ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸೋಮವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ
  • ಕುತೂಹಲಕ್ಕೆ ಕಾರಣವಾಗಿ ಎಚ್‌ಡಿಕೆ ಹಾಗೂ ಬಿಎಸ್‌ವೈ ನಡುವಿನ ಭೇಟಿ ಮಾತುಕತೆ

ಬೆಂಗಳೂರು: ಸಿಎಂ ಬಿಎಸ್‌ ಯಡಿಯೂರಪ್ಪ ಅವರನ್ನು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸೋಮವಾರ ಸಿಎಂ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ಎಚ್‌ಡಿಕೆ ಅವರು ಬಿಎಸ್‌ವೈ ಜೊತೆಗೆ ಕೆಲ ಹೊತ್ತು ಮಾತುಕತೆ ನಡೆಸಿದರು.

ಶಾಸಕರಾದ ಸಿ ಎಸ್ ಪುಟ್ಟರಾಜು, ಶ್ರೀನಿವಾಸ್ ಹಾಗೂ ಮಳವಳ್ಳಿ ಶಾಸಕ ಅನ್ನದಾನಿ ಜೊತೆಗೆ ಸಿಎಂ ಬಿಎಸ್‌ವೈ ಅವರನ್ನು ಭೇಟಿ ಮಾಡಿದ ಎಚ್‌ಡಿಕೆ ಕೆಲವು ಪ್ರಮುಖ ವಿಚಾರಗಳ ಕುರಿತಾಗಿ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಂಡ್ಯ ಮೈಶುಗರ್ ಖಾಸಗೀಕರಣ ಸಮಸ್ಯೆ ಬಗ್ಗೆ ಸಿಎಂ ಯಡಿಯೂರಪ್ಪ ಜೊತೆಗೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ ಹಾಗೂ ಮನ್ಮುಲ್ ಅಕ್ರಮ ಪ್ರಕರಣ, ಜಿಲ್ಲಾ ಪಂಚಾಯಿತಿ ತಾ.ಪಂ ಮೀಸಲಾತಿ ವಿಚಾರಗಳ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಮೈಶುಗರ್‌ ಕಾರ್ಖಾನೆ ಖಾಸಗೀಕರಣ ಹಾಗೂ ಮನ್ಮುಲ್ ಹಗರಣ ಸಾಕಷ್ಟು ಚರ್ಚೆಗೆ ಗ್ರಾಸವಾಗುತ್ತಿದೆ. ಮೈಶುಗರ್‌ ಕಾರ್ಖಾನೆ ಖಾಸಗೀಕರಣ ವಿರೋಧಿಸಿ ಹಾಗೂ ಮನ್ಮುಲ್ ಹಗರಣವನ್ನ CBIಗೆ ವಹಿಸುವಂತೆ ಒತ್ತಾಯಿಸಿ ಮಂಡ್ಯದಲ್ಲಿ ಪ್ರತಿಭಟನಾ ಧರಣಿ ನಡೆದಿದೆ.

ಈ ವಿಚಾರವಾಗಿ ಸಿಎಂ ಜೊತೆಗೆ ಎಚ್‌ಡಿಕೆ ಮಂಡ್ಯ ಶಾಸಕರೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಮಂಡ್ಯ ಜಿಲ್ಲೆಯ ಅಭಿವೃದ್ದಿ ವಿಚಾರವಾಗಿಯೂ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಜತೆಗೆ ಇತರೇ ಪ್ರಮುಖ ಪ್ರಸಕ್ತ ವಿಚಾರಗಳ ಚರ್ಚೆ ನಡೆದಿರುವ ಸಾಧ್ಯತೆ ಇದೆ.

ಸದ್ಯ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಚ್‌ ಡಿ ಕುಮಾರಸ್ವಾಮಿ ಹಾಗೂ ಸಿಎಂ ಬಿಎಸ್‌ ಯಡಿಯೂರಪ್ಪ ಅವರ ಭೇಟಿ ಸಹಜವಾಗಿ ಕುತೂಹಲಕ್ಕೆ ಕಾರಣವಾಗಿದೆ. ಆದರೆ ಯಾವುದೇ ರೀತಿಯ ರಾಜಕೀಯ ಚರ್ಚೆ ನಡೆದಿಲ್ಲ ಎನ್ನುತ್ತಿವೆ ಮೂಲಗಳು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *