ಕೊರೊನಾ ಮೂರನೇ ಅಲೆ ಎದುರಿಸಲು ಪೂರ್ವ ಸಿದ್ದತೆ..! ಬೆಂಗಳೂರಿನಲ್ಲಿ ಮಕ್ಕಳ ಐಸಿಯು ಆಸ್ಪತ್ರೆ ಉದ್ಘಾಟನೆ!
ಕೊರೋನಾ 3ನೇ ಅಲೆಯಲ್ಲಿ ಮಕ್ಕಳಲ್ಲೇ ಹೆಚ್ಚು ಕಾಣಿಸಿಕೊಳ್ಳುತ್ತೆ ಎಂದು ತಜ್ಞರು ಸರ್ಕಾರಕ್ಕೆ ಮಾಹಿತಿ ನೀಡಿದ್ರು. ತಜ್ಞರ ಮಾಹಿತಿಯಂತೆ ಹಲವಾರು ಮುನ್ನೆಚ್ಚರಿಕೆ ಕ್ರಮವಾಗಿ ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಳ್ಳುತ್ತಿದೆ. ಇದೇ ಹಿನ್ನೆಲೆಯಲ್ಲಿ ಇಂದಿರಾ ಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆ (IGICH)ನಲ್ಲಿ ಕಾಗ್ನಿಜೆಂಟ್ ಫೌಂಡೇಶನ್ ನೆರವಿನಿಂದ ಸ್ಥಾಪನೆ ಮಾಡಲಾಗಿರುವ 100 ಹಾಸಿಗೆಗಳ ಮಕ್ಕಳ ತೀವ್ರ ನಿಗಾ ಘಟಕವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವಥ್ ನಾರಾಯಣ ಉದ್ಘಾಟನೆ ಮಾಡಿದ್ದಾರೆ.
ಕೋವಿಡ್ 19 ಸೋಂಕಿಗೆ ತುತ್ತಾಗುವ ಶಿಶುಗಳಿಗೆ ಮತ್ತು ಮಕ್ಕಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುವ ಸಲುವಾಗಿ’ ಆಸ್ಪತ್ರೆಯಲ್ಲಿ ಐಸಿಯು ಹಾಸಿಗೆಗಳ ಸಂಖ್ಯೆಯನ್ನು ಇದೀಗ 30ರಿಂದ 100ಕ್ಕೆ ಹೆಚ್ಚಿಸಲಾಗಿದೆ.ಮಕ್ಕಳಿಗೆ ಅಗತ್ಯವಾದ ಪಿಪಿಇ ಕಿಟ್ಗಳು, ಆಕ್ಸಿಜನ್ ಬೆಡ್ಗಳು, ವೆಂಟಿಲೇಟರ್ಗಳು, ಮಲ್ಟಿ ಪ್ಯಾರಾಮಾನಿಟರ್ಗಳು ಸೇರಿ ಎಲ್ಲ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಲಾಗಿದೆ” ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ ಅವರು ಮಾಹಿತಿ ಕೊಟ್ಟಿದ್ದಾರೆ.