ಕೋವಿಡ್ ತುರ್ತು ಪರಿಸ್ಥಿತಿ ಎದುರಿಸಲು ರಾಜ್ಯಗಳಿಗೆ 23,123 ಕೋಟಿ ಪ್ಯಾಕೇಜ್ ಪ್ರಕಟ
ನವದೆಹಲಿ :ದೇಶದಲ್ಲಿ ಕಾಣಿಸಿಕೊಂಡಿರುವ ಎರಡನೇ ಹಂತದ ಕೊರೊನಾ ಸೋಂಕು ಪರಿಸ್ಥಿತಿ ಎದುರಿಸುವ ಜೊತೆಗೆ ಭವಿಷ್ಯದ ಸವಾಲಿಗೆ ಸಿದ್ದರಾಗಲು 23,123 ಕೋಟಿ ರೂಪಾಯಿ ಕೋವಿಡ್ ಪರಿಹಾರ ಪ್ಯಾಕೇಜ್ ಅನ್ನು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳಿಗೆ ಪ್ರಕಟಿಸಿದೆ.
ಪ್ರದಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನ್ ಸುಖ್ ಮಾಂಡವೀಯ ಈ ವಿಷಯ ತಿಳಿಸಿದ್ದಾರೆ
ಕೊರೊನಾ ಸೋಂಕು ಎದುರಿಸಲು ಬೇಕಾದ ಅಗತ್ಯ ವೈದ್ಯಕೀಯ ಮೂಲ ಸೌಲಭ್ಯ, ಆಮ್ಲಜನಕ, ಹಾಸಿಗೆ ಸೇರಿದಂತೆ ಇನ್ನಿತರೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಈ ಪರಿಹಾರ ಪ್ಯಾಕೇಜ್ ನೀಡಲು ಉದ್ದೇಶಿಸಲಾಗಿದೆ ಎಂದರು.
ದೇಶದಲ್ಲಿ ಕೊರೊನಾ ಸಮಸ್ಯೆಯನ್ನು ಎದುರಿಸಲು ಅನುಕೂಲವಾಗುವಂತೆ ಆರೋಗ್ಯ ಮೂಲಸೌಕರ್ಯವನ್ನು ವೃದ್ದಿ ಮಾಡಲು ಕೇಂದ್ರ ಸರ್ಕಾರ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ ಈ ನಿಟ್ಟಿನಲ್ಲಿ ಕೇಂದ್ರ ಸರಕಾರ ಪರಿಹಾರ ಪ್ಯಾಕೇಜ್ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
2020 ರ ಏಪ್ರಿಲ್ ನಲ್ಲಿ ಪ್ರಕಟಿಸಲಾಗಿದ್ದ ಪರಿಹಾರ ಪ್ಯಾಕೇಜ್ ನ ಭಾಗವಾಗಿ 15 ಸಾವಿರ ಕೋಟಿ ರೂಪಾಯಿ ಫ್ಯಾಕ್ಟರಿಗೆ ಕೇಂದ್ರ ಸಚಿವ ಸಂಪುಟ ಅನುಮತಿ ನೀಡಿದೆ ಇದರ ಜೊತೆಗೆ ಹೆಚ್ಚುವರಿಯಾಗಿ 23,123 ಕೋಟಿ ನೀಡಲು ಉದ್ದೇಶಿಸಿದ್ದು ಇದರಿಂದ ರಾಜ್ಯಗಳಲ್ಲಿ ಆರೋಗ್ಯ ಮೂಲಸೌಕರ್ಯ ಕಲ್ಪಿಸಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ನೀಡುವ ಒಟ್ಟಾರೆ ಕೋವಿಡ್ ತುರ್ತು ನಿಧಿಯಲ್ಲಿ ಕೇಂದ್ರ ಸರ್ಕಾರದ ಪಾಲು .15000 ಕೊಟಿ ಮತ್ತು ರಾಜ್ಯ ಸರ್ಕಾರದ ತಾಲೂಕು 8000 ಕೋಟಿ ರೂಪಾಯಿ ಇರಲಿದೆ ಎಂದು ಅವರು ಹೇಳಿದ್ದಾರೆ.
ಎರಡನೇ ಅಲೆಯ ಸೋಂಕು ಸಮಸ್ಯೆಯನ್ನು ಎದುರಿಸುವ ಜೊತೆಗೆ ಭವಿಷ್ಯದಲ್ಲಿ ಕಾಣಿಸಿಕೊಳ್ಳುವವರ ಕೊರೊನಾ ಸಮಸ್ಯೆಯನ್ನು ಎದುರಿಸಲು ಈಗಿನಿಂದಲೇ ಸಜ್ಜಾಗುವಂತೆ ರಾಜ್ಯಗಳಿಗೆ ಸೂಚಿಸಲಾಗಿದೆ.
ಅದಕ್ಕೆ ಪೂರಕವಾಗಿ ಅಗತ್ಯ ಮೂಲಸೌಕರ್ಯ ಹೆಚ್ಚು ಮಾಡಿಕೊಳ್ಳಲು ಹಣಕಾಸು ನೆರವು ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸಂಭಾವ್ಯ ಮೂರನೇ ಅಲೆಯನ್ನು ಎದುರಿಸಲು ಮತ್ತು ಅಗತ್ಯ ವೈದ್ಯಕೀಯ ಸೌಲಭ್ಯವನ್ನು ಅನುಕೂಲವಾಗುವಂತೆ ರಾಜ್ಯಗಳಿಗೆ ನಿಧಿಯನ್ನು ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.