ಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟ್‌ಗಳ ನಿರ್ಮಾಣಕ್ಕೆ ಚಿಂತನೆ ನಡೆಸಲಾಗಿದೆ; ನಳಿನ್ ಕುಮಾರ್ ಕಟೀಲ್‌

ಹೈಲೈಟ್ಸ್‌:

  • ಮುಂಬರುವ ದಿನಗಳಲ್ಲಿ ಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟುಗಳ ನಿರ್ಮಾಣಕ್ಕೆ ಆದ್ಯತೆ
  • ಈ ಕುರಿತು ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ
  • ಮಂಗಳೂರಿನಲ್ಲಿ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿಕೆ

ಮಂಗಳೂರು: ಮುಂಬರುವ ದಿನಗಳಲ್ಲಿಎಲ್ಲ ಕಡೆಗಳಲ್ಲಿ ಮಾನವ ರಹಿತ ರೈಲ್ವೆ ಗೇಟುಗಳ ನಿರ್ಮಾಣಕ್ಕೆ ಕೇಂದ್ರ ಸರಕಾರ ಚಿಂತನೆ ನಡೆಸಿದ್ದು, ಈ ದಿಸೆಯಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ತಿಳಿಸಿದರು.

ಮಂಗಳೂರು ಜಂಕ್ಷನ್‌ ರೈಲು ನಿಲ್ದಾಣದಲ್ಲಿ ಭಾನುವಾರ ಯಶವಂತಪುರ-ಮಂಗಳೂರು ನಡುವೆ ಸಂಚರಿಸುವ ವಿಸ್ಟಾಡೋಮ್‌ ಕೋಚ್‌ ಅಳವಡಿಸಿದ ರೈಲಿಗೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ರೈಲ್ವೆ ಕ್ರಾಸ್‌ಗಳ ಗೇಟುಗಳಲ್ಲಿ ಮಾನವ ರಹಿತ ಗೇಟುಗಳ ಆರಂಭಕ್ಕೆ ಕೇಂದ್ರ ಸರಕಾರ ಯೋಚಿಸಿ, ಈಗಾಗಲೇ ಯೋಜನೆ ರೂಪಿಸಿದೆ. ಮುಂಬರುವ ದಿನಗಳಲ್ಲಿ ಅದು ಅನುಷ್ಠಾನಗೊಳ್ಳಲಿದೆ ಎಂದರು.

ರೈಲ್ವೆ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಗೆ ಸಾಕಷ್ಟು ಯೋಜನೆಗಳನ್ನು ನೀಡಿದೆ. 2014ರಿಂದ ಕೆಲವು ಯೋಜನೆಗಳು ಹೆಚ್ಚು ವೇಗ ಪಡೆದಿವೆ. ರೈಲು ಹಾಗೂ ನಿಲ್ದಾಣಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಲಾಗುತ್ತಿದೆ. ಮಂಗಳೂರು ಸೆಂಟ್ರಲ್‌ ನಿಲ್ದಾಣಕ್ಕೆ 13.5 ಕೋಟಿ ಹಾಗೂ ಮಂಗಳೂರು ಜಂಕ್ಷನ್‌ಗೆ 1.2 ಕೋಟಿ ರೂ. ಸೇರಿದಂತೆ ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿದೆ. ಅದರೊಂದಿಗೆ ಸ್ಮಾರ್ಟ್‌ ಸಿಟಿ ಯೋಜನೆಯಲ್ಲೂ ಕಾಮಗಾರಿ ಕೈಗೊಳ್ಳಲಾಗಿದೆ, ಶಾಸಕರಾದ ವೇದವ್ಯಾಸ ಕಾಮತ್‌ ಹಾಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ಅದಕ್ಕೆ ಒತ್ತಾಸೆಯಾಗಿದ್ದಾರೆ ಎಂದರು

ಕಾಪು: ರಸ್ತೆ ಮಧ್ಯೆ ಒಲೆ ಉರಿಸುವ ಮೂಲಕ ಬೆಲೆಯೇರಿಕೆ ವಿರುದ್ದ ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು-ವಿಜಯಪುರ ರೈಲು ಸಮಯದಲ್ಲಿ ಬದಲಾವಣೆ ಆಗಬೇಕು, ಅದು ಮಂಗಳೂರು ಸೆಂಟ್ರಲ್‌ನಿಂದ ಸಂಚರಿಸಬೇಕು ಹಾಗೂ ಹಗಲಿನಲ್ಲಿ ಸಂಚರಿಸುವ ಗೊಮ್ಮಟೇಶ್ವ ಎಕ್ಸ್‌ಪ್ರೆಸ್‌ ರೈಲು ಯಶವಂತಪುರದಿಂದ 8.15ರ ಬದಲಾಗಿ 9.30ಕ್ಕೆ ಹೊರಡಬೇಕು. ವಾರದ 7 ದಿನ ಸಂಚರಿಸಬೇಕು ಎನ್ನುವ ಬೇಡಿಕೆ ಪ್ರಯಾಣಿಕರದ್ದಾಗಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಹಾಗೂ ಸಚಿವರೊಂದಿಗೆ ಚರ್ಚಿಸಿ ಬೇಡಿಕೆಗಳನ್ನು ಈಡೇರಿಸಲಾಗುವುದು ಎಂದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *