ಎರಡನೇ ಅಲೆ ಮುಗಿದಿಲ್ಲ: ಎಚ್ಚರಿಕೆ ವಹಿಸಿ ರಾಜ್ಯಗಳಿಗೆ ಕೇಂದ್ರದ ಕಟ್ಟುನಿಟ್ಟಿನ ಸೂಚನೆ
ದೇಶದ ವಿವಿಧ ಭಾಗಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುತ್ತಿರುವ ಹಿನ್ನೆಲೆಯಲ್ಲಿ ಅದರ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿಯನ್ನು ಇಂದು ಬಿಡುಗಡೆ ಮಾಡಿದೆ.
ದೇಶದಲ್ಲಿ ಕಾಣಿಸಿಕೊಂಡಿರುವ ಎರಡನೆ ಅಲೆ ಇನ್ನು ಮುಗಿದಿಲ್ಲ. ಎಲ್ಲಾ ರಾಜ್ಯಗಳು ಕಟ್ಟುನಿಟ್ಟಿನ ನಿಯಮ ಪಾಲನೆ ಮಾಡಬೇಕು ಜೊತೆಗೆ ನಿಯಮ ಜನರು ಕೋವಿಡ್ ಸುಕ್ತ ವರ್ತನೆ ಪಾಲಿಸುವಂತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಲಾಗಿದೆ.
ಪ್ರವಾಸಿ ತಾಣಗಳು, ಮಾರುಕಟ್ಟೆಗಳು, ಜನಸಂದಣಿಯ ಪ್ರದೇಶಗಳು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಕಟ್ಟುನಿಟ್ಟಾಗಿ ಮಾರ್ಗಸೂಚಿಗಳನ್ನು ಪಾಲಿಸುವಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ ಅನಾಹುತ ಕಟ್ಟಿಟ್ಟ ಬುತ್ತಿ ಎನ್ನುವ ಎಚ್ಚರಿಕೆಯ ಸಂದೇಶವನ್ನು ಗೃಹ ಸಚಿವಾಲಯ ಕೇಂದ್ರಾಡಳಿತ ಪ್ರದೇಶ ಮತ್ತು ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.
ಸಿಎಸ್ ಗೆ ಸೂಚನೆ:
ಈ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕೇಂದ್ರ ಗೃಹಕಾರ್ಯದರ್ಶಿ ಅಜಯ್ ಬಲ್ಲ ಪತ್ರ ಬರೆದು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿದ್ದಾರೆ
ಕೋವಿಡ್ ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಿ ಎಂದು ಕೂಡ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಲಾಗಿದೆ.
ಹಲವು ರಾಜ್ಯಗಳಲ್ಲಿ ಪದೇಪದೇ ನಿಯಮಗಳನ್ನು ಜನರು ಉಲ್ಲಂಘಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ ಈ ರೀತಿ ಆಗದಂತೆ ನೋಡಿಕೊಳ್ಳಬೇಕು ಎಂದು ಸೂಚಿಸಿದ್ದಾರೆ.
ಎರಡನೇ ಅಲೆ ಇನ್ನೂ ಮುಗಿದಿಲ್ಲ:
ದೇಶದಲ್ಲಿ ಎರಡನೇ ಅಲೆಯ ಕೊರೊನಾ ಸೋಂಕು ಇನ್ನೂ ಮುಗಿದಿಲ್ಲ ಹೀಗಿರುವಾಗ. ಮಾರ್ಗಸೂಚಿಗಳನ್ನು ಉಲ್ಲಂಘಿಸುವುದು ಸರಿಯಲ್ಲ. ಹೀಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
ಮಾರ್ಗಸೂಚಿಗಳನ್ನು ಜನರು ಉಲ್ಲಂಘಿಸದಂತೆ ಎಚ್ಚರಿಕೆವಹಿಸಬೇಕು ಅದರಲ್ಲಿ ಪ್ರವಾಸಿ ತಾಣಗಳು ಮಾರುಕಟ್ಟೆಗಳು ಸೇರಿದಂತೆ ಜನಸಂದಣಿಯ ಪ್ರದೇಶದಲ್ಲಿ ಅತ್ಯಂತ ಮುತುವರ್ಜಿ ವಹಿಸಬೇಕು ಎಂದು ಸೂಚಿಸಲಾಗಿದೆ