3 ನೇ ಅಲೆ : ಮುಂದಿನ 100 ದಿನ ಎಚ್ಚರಿಕೆ ಅಗತ್ಯ

ವಿಶ್ವದ ನಾನಾ ಭಾಗಗಳಲ್ಲಿ ಕೊರೊನಾ ಸೋಂಕಿನ ಮೂರನೆ ಅಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಮುಂದಿನ 100 ದಿನಗಳ ಕಾಲ ಅತ್ಯಂತ ಎಚ್ಚರಿಕೆಯ ಸಮಯ ಎಂದು ಕೇಂದ್ರ ಸರ್ಕಾರ ಹೇಳಿದೆ.

ಮೂರನೇ ಅಲೆ ಜಗತ್ತಿನಲ್ಲಿ ಆರಂಭದ ಹಂತದಲ್ಲಿ ಇದೆ. ಈ ಹಿನ್ನೆಲೆಯಲ್ಲಿ ದೇಶಗಳು ಕಟ್ಟೆಚ್ಚರವಹಿಸುವಂತೆ ವಿಶ್ವ ಆರೋಗ್ಯ ಸಂಸ್ಥೆ ಮುನ್ಸೂಚನೆ ನೀಡಿದೆ ಈ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನೀತಿ ಆಯೋಗದ ಸದಸ್ಯ ಡಾ.ವಿ.ಕೆ ಪಾಲ್ ಅವರು ಮುಂದಿನ 100 ದಿನಗಳ ಕಾಲ ಎಚ್ಚರಿಕೆ ವಹಿಸಿದರೆ ಸೋಂಕು ಬರದಂತೆ ತಡೆಯಬಹುದು ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ವಹಿಸುವಂತೆ ಎಲ್ಲಾ ರಾಜ್ಯಗಳಿಗೂ ಸೂಚನೆ ನೀಡಿದರೆ ಅದರಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಮೂರನೇ ಅಲೆ ಎದುರಿಸಲು ಸಿದ್ಧತೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ.

ಸ್ಪೇನ್ ನಲ್ಲಿ ವಾರದಲ್ಲಿ ಸರಾಸರಿ 64ರಷ್ಟು, ನೆದರ್ಲಂಡ್ ನಲ್ಲಿ ಶೇಕಡ 300ರಷ್ಟು ದಾಖಲೆಯ ಪ್ರಮಾಣದಲ್ಲಿ ಮೂರನೇ ಅಲೆಯ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಜಗತ್ತಿನ ವಿವಿಧ ದೇಶಗಳಿಗೆ ಹರಡದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳು ಎಚ್ಚರಿಕೆ ವಹಿಸುವ ಅನಿವಾರ್ಯತೆಯಿದೆ ಎಂದು ತಿಳಿಸಿದ್ದಾರೆ.

ದೇಶದ ಬಡಜನರಿಗೆ ಅದರಲ್ಲೂ ಗ್ರಾಮೀಣ ಪ್ರದೇಶದ ಜನರಲ್ಲಿ ಕನಿಷ್ಠ ಶೇಕಡ 50ರಷ್ಟು ಲಸಿಕೆ ಹಾಕುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಗಮನ ಹರಿಸಿದೆ ಎಂದು ಹೇಳಿದ ಅವರು ಮುಂದಿನ 100 ದಿನಗಳು ಅತ್ಯಂತ ಮಹತ್ವವಾದದ್ದು ಹೀಗಾಗಿಯೇ ಎಚ್ಚರಿಕೆ ವಹಿಸಬೇಕು ಎಂದು ಹೇಳಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ ವಾಲ್ ಮಾತನಾಡಿ, ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈಗಿನಿಂದಲೇ ಸಿದ್ಧತೆ ಆರಂಭಿಸಿದ್ದಾರೆ ತಡೆಗಟ್ಟಬಹುದು ಎಂದು ಅವರು ತಿಳಿಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *