Petrol Price – ಪೆಟ್ರೋಲ್ ಬೆಲೆ ಮತ್ತೆ ಹೆಚ್ಚಳ; ಬೆಂಗಳೂರು ಸೇರಿ ವಿವಿಧೆಡೆ ಪೆಟ್ರೋಲ್, ಡೀಸಲ್ ದರ ಪಟ್ಟಿ

ಬೆಂಗಳೂರು (ಜುಲೈ 17): ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ನಿನ್ನೆ ತಟಸ್ಥವಾಗಿದ್ದ ಪೆಟ್ರೋಲ್ ಬೆಲೆ ಇವತ್ತು ಮತ್ತೆ ಏರಿಕೆಯಾಗಿದೆ. ಇಂದು ಪೆಟ್ರೋಲ್ ಬೆಲೆ ಸುಮಾರು 30 ಪೈಸೆಯಷ್ಟು ದುಬಾರಿಯಾಗಿದೆ. ಇದೊಂದು ಜುಲೈ ತಿಂಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಳವಾಗುತ್ತಿರುವುದು ಇದು ಹತ್ತನೇ ಬಾರಿ. ಆದರೆ, ಇವತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ ಎಂಬುದು ಸಮಾಧಾನದ ವಿಚಾರ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105 ರೂ ದಾಟಿದೆ. ನಿನ್ನೆ ಇಲ್ಲಿ 104.94 ರೂ ಇದ್ದ ಪೆಟ್ರೋಲ್ ಇಂದು 105.25 ರೂಪಾಯಿಗೆ ಬಂದು ಮುಟ್ಟಿದೆ. ಇನ್ನು, ಡೀಸೆಲ್ ಬೆಲೆ ಇಲ್ಲಿ ಲೀಟರ್​ಗೆ 95.26 ರೂ ಇದೆ. ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್ ಬೆಲೆ 1.49 ರೂಪಾಯಿಯಷ್ಟು ಏರಿಕೆ ಕಂಡಿದೆ. ಇದೇ ಅವಧಿಯಲ್ಲಿ ಡೀಸೆಲ್ ಬೆಲೆಯಲ್ಲಿ 37 ಪೈಸೆಯಷ್ಟು ಹೆಚ್ಚಳವಾಗಿದೆ.

ದೇಶದ 20 ರಾಜ್ಯಗಳಲ್ಲಿ ಇದೀಗ ಪೆಟ್ರೋಲ್ ಬೆಲೆ ನೂರು ರೂ ಗಡಿ ದಾಟಿದೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್​ನಲ್ಲಿ ಪೆಟ್ರೋಲ್ ಬೆಲೆ 110 ರೂ ಮುಟ್ಟಿದೆ. ಇನ್ನು, ರಾಜಸ್ಥಾನದಲ್ಲಿ ಪಾಕಿಸ್ತಾನದ ಗಡಿ ಸಮೀಪವೇ ಇರುವ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 113.21 ರೂ ಇದೆ. ಇದು ದೇಶದಲ್ಲೇ ಅತಿ ದುಬಾರಿ ಪೆಟ್ರೋಲ್ ಇರುವ ಜಿಲ್ಲೆ ಎನಿಸಿದೆ. ಈ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಕೂಡ ಕೆಲ ದಿನಗಳ ಹಿಂದೆಯೇ ಶತಕ ಭಾರಿಸಿದೆ. ಇಲ್ಲಿ ಡೀಸೆಲ್ ಬೆಲೆ ಲೀಟರ್​ಗೆ 103.15 ರೂ ಇದೆ. ರಾಜಸ್ಥಾನ, ಒಡಿಶಾ ಮತ್ತು ಮಧ್ಯ ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಶತಕ ದಾಟಿ ಮುಂದೆ ಹೋಗಿದೆ.

ವಿವಿಧೆಡೆ ಇರುವ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ:

ಪೆಟ್ರೋಲ್ ಬೆಲೆ:  
ಬೆಂಗಳೂರು: 105.25 ರೂ
ಚೆನ್ನೈ: 102.49
ಮುಂಬೈ: 107.83ನವದೆಹಲಿ: 101.84 ರೂ
ಕೋಲ್ಕತಾ: 102.08
ಹೈದರಾಬಾದ್: 105.83
ಚಂದೀಗಡ್: 97.93
ಭುಬನೇಶ್ವರ್: 102.65 ರೂ

ಡೀಸೆಲ್ ಬೆಲೆ:
ಬೆಂಗಳೂರು: 95.26 ರೂ
ಚೆನ್ನೈ: 94.39
ಮುಂಬೈ: 97.45
ನವದೆಹಲಿ: 89.87 ರೂ
ಕೋಲ್ಕತಾ: 93.02
ಹೈದರಾಬಾದ್: 97.96
ಚಂದೀಗಡ್: 89.50
ಭುಬನೇಶ್ವರ್: 97.94 ರೂ

ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಮಾರುಕಟ್ಟೆ ನಿಯಂತ್ರಿತವಾಗಿವೆ ಎಂದು ಸರ್ಕಾರ ಹೇಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆಯಲ್ಲಾಗುವ ಬದಲಾವಣೆಯು ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಜೊತೆಗೆ ಇಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ತೆರಿಗೆ ಹಾಕುತ್ತವೆ. ಪೆಟ್ರೋಲ್ ಬೆಲೆಯಲ್ಲಿ ಶೇ. 60 ರಷ್ಟು ಭಾಗ ತೆರಿಗೆಯೇ ಆಗಿರುತ್ತದೆ ಎಂಬುದು ಗಮನಾರ್ಹ. ಕೇಂದ್ರ ಸರ್ಕಾರ ಪ್ರತೀ ಲೀಟರ್ ಪೆಟ್ರೋಲ್​ಗೆ ವಿಧಿಸುವ ಅಬಕಾರಿ ಸುಂಕದ ಮೊತ್ತ 32.90 ರೂ ಇರುತ್ತದೆ. ಹಾಗೆಯೇ, ಡೀಸೆಲ್ ಬೆಲೆಯಲ್ಲಿ ಶೇ. 54ರಷ್ಟು ತೆರಿಗೆ ಇದೆ. ಇದರಲ್ಲಿ ಅಬಕಾರಿ ಸುಂಕದ ಮೊತ್ತ 31.80 ರೂ ಇದೆ.

ಇನ್ನು, ರಾಜ್ಯ ಸರ್ಕಾರಗಳೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಮ್ಮದೇ ವ್ಯಾಟ್ (ಮೌಲ್ಯ ವರ್ಧಿತ ತೆರಿಗೆ) ತೆರಿಗೆ ವಿಧಿಸುತ್ತವೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ವ್ಯಾಟ್ ತೆರಿಗೆ ಇರುವುದರಿಂದ ವಿವಿಧ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ. ರಾಜಸ್ಥಾನ, ಮಧ್ಯ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಅತಿ ಹೆಚ್ಚು ವ್ಯಾಟ್ ತೆರಿಗೆ ಇದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *