ಆತ್ಮ ವಿಶ್ವಾಸದಿಂದ ಪರೀಕ್ಷೆ ಎದುರಿಸಿ: ವಿದ್ಯಾರ್ಥಿಗಳಿಗೆ ಸಿಎಂ ಕಿವಿಮಾತು
ಶಾಂತಚಿತ್ತರಾಗಿ, ಏಕಾಗ್ರತೆಯಿಂದ ಮತ್ತು ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದ್ದಾರೆ.
ನಾಳೆ ಮತ್ತು ಜು. 22 ರಂದು ಪ್ರಸಕ್ತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದಾರೆ.
ಭಯಬೇಡ: ಭರವಸೆ
ಈ ಸಂಬಂದ ಟ್ವೀಟ್ ಮಾಡಿರುವ ಯಡಿಯೂರಪ್ಪ ಅವರು, ಪರೀಕ್ಷೆಗಳನ್ನು ಸುರಕ್ಷಿತವಾಗಿ ಮತ್ತು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಯಾವುದೇ ಕಾರಣಕ್ಕೂ ಪೋಷಕರು ಭಯ ಪಡಬೇಡಿ ಎಂದು ಅವರು ಭರವಸೆ ನೀಡಿದ್ದಾರೆ.
ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ಮಕ್ಕಳಿಗೆ ಅವರು ಶುಭ ಹಾರೈಸಿದ್ದಾರೆ.
8,76,581 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೆಗೆದುಕೊಂಡಿದ್ದಾರೆ.73,066 ಪರೀಕ್ಷಾ ಕೊಠಡಿಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳ ಒಂದಿಗೆ ಪರೀಕ್ಷೆ ನಡೆಯುತ್ತಿದೆ.