Morning Digest: ರಾಜ್ಯದಲ್ಲಿ ಇಂದು SSLC ಪರೀಕ್ಷೆ, ಜು.21ರವರೆಗೆ ಮಳೆಯ ಅಬ್ಬರ; ಇಂದಿನ ಪ್ರಮುಖ ಸುದ್ದಿಗಳಿವು

1.Karnataka Weather Today: ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ; ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

Karnataka Rains Today July 19 ಬೆಂಗಳೂರು: ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಜುಲೈ 21ರವರೆಗೆ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ವಿವಿಧೆಡೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಇತರೆ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ರಾಜ್ಯದ ಕರಾವಳಿ ಭಾಗ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅದರಂತೆ, ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಜು.18ರಿಂದ ಜುಲೈ 23ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿಯೂ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಇನ್ನು, ಚಿತ್ರದುರ್ಗ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 19ರಂದು(ಇಂದು) ಹಳದಿ ಅಲರ್ಟ್​ ಘೋಷಿಸಲಾಗಿದೆ.

2.Petrol Price Today: ಭೂಪಾಲ್​ನಲ್ಲಿ 110 ರೂ. ದಾಟಿದ ಪೆಟ್ರೋಲ್ ಬೆಲೆ; ಬೆಂಗಳೂರಿನಲ್ಲಿ ಇಂದಿನ ರೇಟ್ ಎಷ್ಟು?

ಬೆಂಗಳೂರು(ಜು.19): ಪೆಟ್ರೋಲ್​-ಡೀಸೆಲ್​ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ರಸ್ತೆಗೆ ವಾಹನ ಇಳಿಸಲು ಯೋಚಿಸುವಂತಾಗಿದೆ. ಇಂದು ಬಹಳ ಅಪರೂಪ ಎನ್ನುವಂತೆ ಪೆಟ್ರೋಲ್-ಡೀಸೆಲ್​​​ ಬೆಲೆಯಲ್ಲಿ ಏರಿಕೆಯಾಗಿಲ್ಲ. ಪೆಟ್ರೋಲ್​ ಬೆಲೆ 101.84 ರೂ. ಇದ್ದರೆ ಡೀಸೆಲ್​ ಬೆಲೆ 89.87 ರೂ. ಇದೆ. ಮುಂಬೈನಲ್ಲಿ ಒಂದು ಲೀಟರ್​ ಪೆಟ್ರೋಲ್​ ಬೆಲೆ 107.83 ರೂ. ಆಗಿದ್ದರೆ, ಒಂದು ಲೀಟರ್​ ಡೀಸೆಲ್​ ಬೆಲೆ 97.45 ರೂ. ಆಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105 ರೂ ದಾಟಿದೆ. ಸದ್ಯ 105.25 ರೂಪಾಯಿಗೆ ಬಂದು ಮುಟ್ಟಿದೆ. ಇನ್ನು, ಡೀಸೆಲ್ ಬೆಲೆ ಇಲ್ಲಿ ಲೀಟರ್​ಗೆ 95.26 ರೂ ಇದೆ. ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್ ಬೆಲೆ 1.49 ರೂಪಾಯಿಯಷ್ಟು ಏರಿಕೆ ಕಂಡಿದೆ. ಇದೇ ಅವಧಿಯಲ್ಲಿ ಡೀಸೆಲ್ ಬೆಲೆಯಲ್ಲಿ 37 ಪೈಸೆಯಷ್ಟು ಹೆಚ್ಚಳವಾಗಿದೆ.

3.Mekedatu Project: ಮೇಕೆದಾಟು ಯೋಜನೆ ತಡೆಯುವಂತೆ ಇಂದು ರಾಷ್ಟ್ರಪತಿಗೆ ಮನವಿ ಮಾಡಲಿರುವ ಎಂ.ಕೆ. ಸ್ಟಾಲಿನ್

ನವದೆಹಲಿ(ಜು. 19): ಬೆಂಗಳೂರು ಮಹಾ ನಗರಕ್ಕೆ ನೀರುಣಿಸುವ ಸಲುವಾಗಿ ಮೇಕೆದಾಟು ಬಳಿ ಅಣೆಕಟ್ಟು ನಿರ್ಮಾಣ ಮಾಡಲು ಉದ್ದೇಶಿರುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಬಗ್ಗೆ ಆರಂಭದಿಂದಲೂ ವಿರೋಧ ಮಾಡುತ್ತಿರುವ ತಮಿಳುನಾಡು ಸರ್ಕಾರ ಈಗ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೂ ‘ಮೇಕೆದಾಟು ಯೋಜನೆ ತಡೆಯುವಂತೆ’ ಮನವಿ ಮಾಡಲಿದೆ. ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.‌ ಸ್ಟಾಲಿನ್ ಇಂದು ಮಧ್ಯಾಹ್ನ 12.15ಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿಯಾಗಿ ಮೇಕೆದಾಟು ಯೋಜನೆ ನಿಲ್ಲಿಸಲು ಸೂಚನೆ ನೀಡುವಂತೆ ಮನವಿ ಮಾಡಲಿದ್ದಾರೆ. ಎಂ.ಕೆ.‌ ಸ್ಟಾಲಿನ್ ತಮಿಳುನಾಡಿನ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಆಗುತ್ತಿದ್ದಾರೆ. ಮೊದಲ ಭೇಟಿಯಲ್ಲೇ ಮೇಕೆದಾಟು ಯೋಜನೆಯನ್ನು ವಿರೋಧಿಸುತ್ತಿದ್ದಾರೆ.‌

4.India vs Sri Lanka – ಶ್ರೀಲಂಕಾವನ್ನು 7 ವಿಕೆಟ್​ನಿಂದ ಸದೆಬಡಿದ ಭಾರತ; ಷಾ, ಇಶಾನ್, ಧವನ್ ಅಮೋಘ ಆಟಕೊಲಂಬೋ: ಆತಿಥೇಯ ಶ್ರೀಲಂಕಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾರತ ಶುಭಾರಂಭ ಮಾಡಿತು. ನಿನ್ನೆ ಮುಕ್ತಾಯಗೊಂಡ ಮೊದಲ ಏಕದಿನ ಕ್ರಿಕೆಟ್ ಪಂದ್ಯದಲ್ಲಿ ಭಾರತ 7 ವಿಕೆಟ್​ಗಳಿಂದ ಜಯಭೇರಿ ಭಾರಿಸಿತು. ಈ ಮೂಲಕ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1-0 ಮುನ್ನಡೆ ಪಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ನಿಗದಿತ 50 ಓವರ್​ನಲ್ಲಿ 9 ವಿಕೆಟ್ ನಷ್ಟಕ್ಕೆ 262 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಭಾರತ ತಂಡ ಕೇವಲ 37ನೇ ಓವರ್​ನಲ್ಲೇ ಗುರಿ ಮುಟ್ಟಿತು. ಇಂದು ಕ್ರೀಸ್​ಗೆ ಇಳಿದ ಎಲ್ಲಾ ಐದು ಭಾರತೀಯ ಬ್ಯಾಟುಗಾರರೂ ಗಮನಾರ್ಹ ಪ್ರದರ್ಶನ ನೀಡಿದರು. ಶಿಖರ್ ಧವನ್ ಮತ್ತು ಇಶಾನ್ ಕಿಶಾನ್ ಅಮೋಘ ಅರ್ಧ ಶತಕ ಭಾರಿಸಿದರು. ಅಜೇಯರಾಗಿ ಉಳಿದ ಧವನ್ ಕೇವಲ 14 ರನ್​ಗಳಿಂದ ಶತಕವಂಚಿತರಾದರು.

5.ರಾಜ್ಯದಲ್ಲಿ ಇಂದು ಎಸ್​ಎಸ್​ಎಲ್​ಸಿ ಪರೀಕ್ಷೆ

SSLC Exam: ಬೆಂಗಳೂರು: ರಾಜ್ಯಾದ್ಯಂತ ಇಂದು ಎಸ್ಸೆಸ್ಸೆಲ್ಸಿ ಮೊದಲ ಪರೀಕ್ಷೆ ಶುರುವಾಗಲಿದೆ. ಈವರೆಗೆ ಎಂದೂ ಕಾಣದ ವಿಶೇಷ ರೀತಿಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಈ ಬಾರಿ ನಡೆಯಲಿದೆ. ಆರು ವಿಷಯಗಳ ಪರೀಕ್ಷೆಯನ್ನು ಎರಡು ದಿನಗಳಿಗೆ ಇಳಿಸಿ ಪರೀಕ್ಷೆ ನಡೆಸಲಾಗುತ್ತಿದೆ. ಸೋಮವಾರ ಅಂದರೆ ಮೊದಲ ದಿನ ಕೋರ್ ವಿಷಯಗಳಾದ ಗಣಿತ, ವಿಜ್ಞಾನ , ಹಾಗೂ ಸಮಾಜ ವಿಜ್ಜಾನ ಪರೀಕ್ಷೆ ನಡೆಯಲಿದೆ. ಮೂರು ವಿಷಯಗಳಿಗೆ 120 ಅಂಕಗಳ ಪರೀಕ್ಷೆ ಇದಾಗಿದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ಈಗಾಗಲೇ ಅಣಕು ಪರೀಕ್ಷೆ ಪರಿಶೀಲನೆ ನಡೆಸಿ ಸಾಧಕ- ಬಾಧಕಗಳ ಕುರಿತು ಚರ್ಚಿಸಲಾಗಿದೆ. ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಂತಿಮ ಸಿದ್ಧತೆಗಳನ್ನು ಮಾಡಿಕೊಂಡಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬೆಳಗ್ಗೆ 10.30ರಿಂದ 1.30 ರವರೆಗೆ ಜರುಗಲಿದೆ. ಒಟ್ಟು 8 ಲಕ್ಷದ 76 ಸಾವಿರ 581 ವಿದ್ಯಾರ್ಥಿಗಳ ನೊಂದಣಿ ಮಾಡಿಕೊಂಡಿದ್ದು, ಇದರಲ್ಲಿ 4,72,643 ಬಾಲಕರು, 4,03,938 ಬಾಲಕಿಯರು ಇದ್ದಾರೆ. ಇದು ಬಹು ಆಯ್ಕೆ ಮಾದರಿಯ ಪರೀಕ್ಷೆ ಇದಾಗಿದೆ. ಒಎಂಆರ್ ಶೀಟ್ ನಲ್ಲಿ ವಿದ್ಯಾರ್ಥಿಗಳು ಪ್ರಶ್ನೆಗಳಿಗೆ ಉತ್ತರ ತುಂಬಬೇಕು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *