ಸಿಎಂ ಬದಲಾವಣೆ ಚರ್ಚೆ ಊಹಾಪೋಹ: ಸಂಸದ ಎಸ್‌. ಮುನಿಸ್ವಾಮಿ

ಹೈಲೈಟ್ಸ್‌:

  • ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗೆ ಸಂಸದ ಮುನಿಸ್ವಾಮಿ ಪ್ರತಿಕ್ರಿಯೆ
  • ಸಿಎಂ ಬದಲಾವಣೆ ಊಹಾಪೋಹ, ನನ್ನ ಗಮನಕ್ಕೆ ಅಂತಹ ವಿಚಾರ ಬಂದಿಲ್ಲ
  • ಯಡಿಯೂರಪ್ಪ ಸಿಎಂ ಆಗಿ ಮುಂದುವರಿಯಲು ಯಾರದ್ದೂ ಆಕ್ಷೇಪವಿಲ್ಲ

ಕೋಲಾರ: ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಊಹಾಪೋಹಗಳ ಚರ್ಚೆಗಳಾಗುತ್ತಿವೆ. ಆದರೆ, ನಮ್ಮ ಮಟ್ಟದವರೆಗೂ ಆ ರೀತಿಯ ಯಾವುದೇ ವಿಚಾರಗಳು ಗಮನಕ್ಕೆ ಬಂದಿಲ್ಲ. ಹೈಕಮಾಂಡ್‌ ಯಾವ ತೀರ್ಮಾನ ಕೈಗೊಂಡರೂ ನಾವು ಬದ್ಧರಾಗಿರುತ್ತೇವೆ ಎಂದು ಸಂಸದ ಎಸ್‌ ಮುನಿಸ್ವಾಮಿ ಹೇಳಿದರು.

ನಗರ ಹೊರವಲಯದ ತೋಟಗಾರಿಕೆ ಮಹಾವಿದ್ಯಾಲಯದ ಆವರಣದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರು ಕೊರೊನಾ ಸೇರಿದಂತೆ ಎಲ್ಲ ಸಮಯದಲ್ಲಿಯೂ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ವಿರೋಧ ಪಕ್ಷದವರಂತೆ ಅನೇಕರು ನಾನಾ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸದ್ಯಕ್ಕೆ ಬದಲಾವಣೆ ವಿಚಾರವಿಲ್ಲ. ಹೈಕಮಾಂಡ್‌ ಯಾವ ರೀತಿ ತೀರ್ಮಾನ ತೆಗೆದುಕೊಳ್ಳುತ್ತದೆ ಎನ್ನುವುದನ್ನು ಕಾದುನೋಡಬೇಕಿದೆ ಎಂದು ಯಡಿಯೂರಪ್ಪ ಪರ ಬ್ಯಾಟ್ ಬೀಸಿದರು.

ಬಿ.ಎಸ್‌.ಯಡಿಯೂರಪ್ಪ ಅವರು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿರುವುದಕ್ಕೆ ನಾನು ಸೇರಿದಂತೆ ಯಾರದೂ ಅಭ್ಯಂತರವಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೋಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದರು, ಅವೆಲ್ಲವೂ ಸತ್ಯಕ್ಕೆ ದೂರವಾದ ವಿಚಾರ. ಈಗ ಸಿಎಂ ಬದಲಾವಣೆ ಎಂದು 5-6 ಮಂದಿ ಹೆಸರುಗಳು ಹುಟ್ಟಿಕೊಂಡಿರುವಂತೆಯೇ ಆಡಿಯೋ ಸಹ ಸುಳ್ಳಿನ ವಿಚಾರವಾಗಿದೆ ಎಂದು ತಿಳಿಸಿದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *