ದೇಶದಲ್ಲೇ ಕರ್ನಾಟಕವನ್ನು ಪ್ರವಾಸೋದ್ಯಮದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವಳು ಹೊಸ ನೀತಿ ಜಾರಿ

ಬೆಂಗಳೂರು,ಆ.7-  ಸ್ಥಳೀಯರಿಗೆ ಆದ್ಯತೆ, ಸುರಕ್ಷತೆ, ವಿಶ್ವಾಸಾರ್ಹತೆ ನೈರ್ಮಲ್ಯತೆ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ, ದೇಶದಲ್ಲೇ ಕರ್ನಾಟಕವನ್ನು ಪ್ರವಾಸೋದ್ಯಮದಲ್ಲಿ ಮೊದಲ ಸ್ಥಾನಕ್ಕೆ ಕೊಂಡೊಯ್ಯುವ ದೂರದೃಷ್ಟಿಯುಳ್ಳ 2020-25ನೇ ಸಾಲಿನ ಪ್ರವಾಸೋದ್ಯಮ ನೀತಿ ಜಾರಿಗೆ ಬರಲಿದೆ. ದೇಶ ಮತ್ತು ವಿದೇಶಗಳಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿ ಪ್ರವಾಸೋದ್ಯಮದಲ್ಲಿ 3ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಮೊದಲ ಸ್ಥಾನಕ್ಕೆ ತರುವ ಹೆಗ್ಗುರಿಯೊಂದಿಗೆ ನೂತನ ನೀತಿಯನ್ನು ಸಿದ್ದಪಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕøತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಬಹುನಿರೀಕ್ಷಿತ 2020-25_ನೇ ಸಾಲಿನ ಪ್ರವಾಸೋದ್ಯಮ ಇಲಾಖೆಯ ಕರಡು ನೀತಿಯನ್ನು ಅಂಗೀಕರಿಸಲಾಗಿದೆ. ಮೂಲಗಳ ಪ್ರಕಾರ ಇಲಾಖೆ ತಂದಿರುವ ನೂತನ ಕರಡು
ನೀತಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪನವರು ಸೆಪ್ಟೆಂಬರ್ ತಿಂಗಳಿನಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.

ನೂತನ ಪ್ರವಾಸೋದ್ಯಮ ಕರಡು ನೀತಿಯು, ಪ್ರಮುಖವಾಗಿ ಪರಂಪರೆ, ವನ್ಯಜೀವಿ, ಆಧ್ಯಾತ್ಮಿಕತೆ, ಸಂಸ್ಕøತಿ, ಸಾಹಸ ಕಾರ್ಯ, ಕರಾವಳಿ, ಪ್ರಕೃತಿ, ಆರೋಗ್ಯ, ಕೃಷಿ, ಪ್ರವಾಸಿ ತಾಣಗಳ ಅಭಿವೃದ್ಧಿ, ಮೂಲಭೂತ ಸೌಕರ್ಯಗಳಿಗೆ ಒತ್ತು, ಬಂಡವಾಳ ಹೂಡಿಕೆಗೆ ಆದ್ಯತೆ ಸೇರಿದಂತೆ ಹತ್ತು ಹಲವು ಅಂಶಗಳನ್ನೊಳಗೊಂಡಿದೆ.
ಒಂದೇ ರಾಜ್ಯ ಹಲವು ಜಗತ್ತು ಎಂಬ ಪರಿಕಲ್ಪನೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರವು ಇಲಾಖೆ ಒಳಗೊಂಡಿರುವ ವಿಫುಲ ಅವಕಾಶವನ್ನು ಪ್ರಚುರಪಡಿಸುವ ಉದ್ದೇಶವನ್ನು ಒಳಗೊಂಡಿದೆ.

ದೇಶಿಯ ಮತ್ತು ಅಂತಾರಾಷ್ಟ್ರೀಯ ಪ್ರವಾಸಿಗರು ರಾಜ್ಯಕ್ಕೆ ಮೊದಲ ಭೇಟಿ ಕೊಡುವುದು, ಉದ್ಯೋಗ ಸೃಷ್ಟಿ, ಆರ್ಥಿಕ ಅಭಿವೃದ್ಧಿ, ಪ್ರವಾಸೋದ್ಯಮ ತಾಣಗಳಲ್ಲಿ ಸುರಕ್ಷತೆ, ನೈರ್ಮಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಪ್ರವಾಸಿ ತಾಣಗಳಿಗೆ ಆಗಮಿಸುವ ಪ್ರವಾಸಿಗರಲ್ಲಿ ಕರ್ನಾಟಕದ ಬಗ್ಗೆ ಹೆಚ್ಚು ವಿಶ್ವಾಸ ಮೂಡಿಸುವುದು ಹಾಗೂ ಅವರ ರಕ್ಷಣೆಗೆ ಆದ್ಯತೆ ಕೊಡುವುದು, ಮಾರುಕಟ್ಟೆ ಸಂಪರ್ಕಗಳ ಮೂಲಕ ದೇಶಿಯ ಮತ್ತು ಅಂತಾರಾಷ್ಟ್ರೀಯ ಮಾರುಕಟ್ಟೆಯನ್ನು ಉತ್ತೇಜಿಸುವ ಅಂಶಗಳೂ ಸೇರಿವೆ.

ಕರ್ನಾಟಕವನ್ನು ಸರ್ವಋತು ಪ್ರವಾಸಿ ತಾಣವನ್ನಾಗಿ ಮಾಡುವ ನಿಟ್ಟಿನಲ್ಲಿ ಮೂಲಸೌಕರ್ಯ ಮತ್ತು ಮೂಲಭೂತ ಅವಶ್ಯಕತೆಗಳನ್ನು ಆದ್ಯತೆ ಮೇರೆಗೆ ಒದಗಿಸುವುದು, ಪ್ರವಾಸಿಗರ ಆಕರ್ಷಣೆಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಪ್ರಸ್ತಾವನೆಯೂ ಸೇರಿದೆ. ಪ್ರವಾಸೋದ್ಯಮ ವಲಯದಲ್ಲಿ ಉದ್ಯಮಶೀಲತೆ, ನಾವಿನ್ಯತೆಗೆ ಪೆÇ್ರೀ ಸ್ಥಳೀಯರಿಗೆ ಉದ್ಯೋಗ, ಸಮುದಾಯಗಳ ಪಾಲ್ಗೊಳ್ಳುವಿಕೆ, ಮಾನವ ಸಂಪನ್ಮೂಲ ಸದ್ಬಳಕೆ ಮಾಡಿಕೊಳ್ಳುವ ಗುರಿಯನ್ನು ಹೊಂದಿದೆ.

ಈ ಬಾರಿ ಕೋವಿಡ್ 19 ಬಂದ ಪರಿಣಾಮ ಪ್ರವಾಸೋದ್ಯಮ ಕ್ಷೇತ್ರಕ್ಕೆ ಆರ್ಥಿಕ ಹಿನ್ನಡೆ ಉಂಟಾಗಿದ್ದು, ಪ್ರವಾಸಿಗರನ್ನು ಆಕರ್ಷಿಸಲು ಸೋಂಕು ಹರಡದಂತೆ ಸರ್ಕಾರ ಇದನ್ನು ನಿಯಂತ್ರಿಸಲು ತೆಗೆದುಕೊಂಡಿರುವ ತುರ್ತು ಕ್ರಮಗಳು, ಆಧುನಿಕ ತಂತ್ರಜ್ಞಾನವನ್ನು ಅಳವಡಿಕೆಯನ್ನು ಸೇರ್ಪಡೆ ಮಾಡಲಾಗಿದೆ.

2006ರಲ್ಲಿ ಕರ್ನಾಟಕಕ್ಕೆ 36.7ರಷ್ಟು ಮಿಲಿಯನ್ ದೇಶಿ ಪ್ರವಾಸಿಗರು ಆಗಮಿಸಿದ್ದರೆ, 2018ರಲ್ಲಿ 215.03 ಮಿಲಿಯನ್‍ನಷ್ಟು ಏರಿಕೆಯಾಗಿದೆ. ದೇಶದಲ್ಲೇ 3ನೇ ಸ್ಥಾನದಲ್ಲಿರುವ ಕರ್ನಾಟಕವನ್ನು ಮೊದಲನೇ ಸ್ಥಾನಕ್ಕೆ ತರುವ ಗುರಿಯನ್ನು ಇಟ್ಟುಕೊಳ್ಳಲಾಗಿದೆ.

ಪ್ರವಾಸಿ ತಾಣಗಳಲ್ಲಿರುವ ಆಹ್ಲಾದಕರವಾದ ಹವಾಮಾನ, ಕಾಸ್ಮೋಪಾಲಿಟಿನ್ ಸಂಸ್ಕøತಿ, ಅತ್ಯುನ್ನತ್ತ ಆಡಳಿತ ಪ್ರಕ್ರಿಯೆ, ಆಕರ್ಷಕ ಪೆÇ್ರೀ ಹೂಡಿಕೆಗಿರುವ ವಿಫುಲ ಅವಕಾಶ, ಉದ್ಯೋಗ ಸೃಷ್ಟಿ ಸೇರಿದಂತೆ ಹತ್ತು ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಉದ್ದೇಶಗಳನ್ನು ಇಟ್ಟುಕೊಳ್ಳಲಾಗಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *