ಅಗಷ್ಟ್ 10 ಸೋಮವಾರವೇ SSLC ಫಲಿತಾಂಶ ಪ್ರಕಟ.
ಮಹಾಮಾರಿ ಕೊರೋನಾ ಆತಂಕದ ನಡುವೆಯೇ ಪರೀಕ್ಷೆ ಬರೆದಿದ್ದ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಆಗಸ್ಟ್ 10ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಎಸ್ಎಸ್ಎಲ್ಸಿ ರಿಸಲ್ಟ್ ಹೊರ ಬೀಳಲಿದೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ karresults.nic.inನಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಅಲ್ಲದೇ ವಿದ್ಯಾರ್ಥಿಗಳಿಗೆ ಎಸ್ಎಂಎಸ್ ಮೂಲಕವೂ ಪರೀಕ್ಷೆಯ ಫಲಿತಾಂಶ ದೊರೆಯಲಿದೆ ಎಂಬುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. 8 ಲಕ್ಷದ 48 ಸಾವಿರದ 203 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು..