#FlashNews ನಾಡಹಬ್ಬ ದಸರಾ ಉದ್ಘಾಟಕರಾಗಿ ಮಾಜಿ ಸಿಎಂ ಎಸ್. ಎಂ. ಕೃಷ್ಣ ಆಯ್ಕೆ
ಬೆಂಗಳೂರು: ಅಕ್ಟೋಬರ್ 7 ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ದಸರಾ ಸಿದ್ಧತೆ ಕುರಿತು ಸಭೆ ನಡೆಯಿತು. ಸಭೆಯಲ್ಲಿ ದಸರಾ ಉದ್ಘಾಟನೆಗೆ ಎಸ್. ಎಂ. ಕೃಷ್ಣ ಅವರಿಗೆ ಆಹ್ವಾನ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಕುರಿತು ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.