Karnataka Weather Today: ಮುಂದಿನ ಎರಡು ದಿನ ರಾಜ್ಯದಲ್ಲಿ ಧಾರಾಕಾರ ಮಳೆ ಸಾಧ್ಯತೆ- ಇಂದಿನ ಹವಾಮಾನ ವರದಿ ಹೀಗಿದೆ..

Rainfall: ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ  ಸಹ ಇಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ 2 ದಿನ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ  ಚಿಕ್ಕಮಗಳೂರು ಮತ್ತು ಕೊಡಗಿಗೆ ಅ. 4 ಮತ್ತು 5 ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.

Karnataka Rains Today ಬೆಂಗಳೂರು(ಅ.03):ಈಗಾಗಲೇ ರಾಜ್ಯದಲ್ಲಿ ಶಾಹೀನ್ ಚಂಡಮಾರುತ(Cyclone Shaheen) ಪ್ರಭಾವ ಬೀರಿದ್ದು ಉತ್ತರ ಒಳನಾಡು ಮತ್ತು ಕರಾವಳಿ9Coastal Districts) ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಈ ಮಧ್ಯೆ ಅಕ್ಟೋಬರ್ 5 ರಿಂದ ಎರಡು ದಿನ ಬೆಂಗಳೂರು  ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್(Yellow Alert) ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.

ಇನ್ನು ಇಂದು  ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರದಲ್ಲಿ ಭಾರಿ ಮಳೆಯ ನಿರೀಕ್ಷೆ ಇದೆ. ಅಲ್ಲದೇ . ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರಿನಲ್ಲೂ ಮಳೆಯಾಗಲಿದ್ದು ಎಲ್ಲ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್(Orange Alert) ಘೋಷಣೆ ಮಾಡಲಾಗಿದೆ.

ಇಂದು ಬಿಜಾಪುರ, ಗದಗ, ಕಲಬುರ್ಗಿ, ವಿಜಯಪುರ, ರಾಯಚೂರು,ಧಾರವಾಡ, ಗದಗ, ಕೊಪ್ಪಳ ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ  ಅಧಿಕ ಮಳೆಯ ಸೂಚನೆ ಇದ್ದು, ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.  ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಿನ್ನೆ ಬೆಂಗಳೂರು ನಗರದಲ್ಲಿ ಸಹ ಕೆಲ ಹೊತ್ತು ಮಳೆ ಸುರಿದಿದೆ.

 ಎಲ್ಲೆಲ್ಲಿ ಭಾರೀ ಮಳೆಯ ನಿರೀಕ್ಷೆ? 

ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ  ಸಹ ಇಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ 2 ದಿನ ಭಾರೀ ಮಳೆಯ ನಿರೀಕ್ಷೆ ಇರುವುದರಿಂದ  ಚಿಕ್ಕಮಗಳೂರು ಮತ್ತು ಕೊಡಗಿಗೆ ಅ. 4 ಮತ್ತು 5 ರಂದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಇಲಾಖೆ ಹೇಳಿದೆ.

ಮುಂದಿನ 24 ಗಂಟೆಗಳಲ್ಲಿ, ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು, ಪೂರ್ವ ಉತ್ತರ ಪ್ರದೇಶ, ಬಿಹಾರ, ಉಪ ಹಿಮಾಲಯ ಪಶ್ಚಿಮ ಬಂಗಾಳ, ಸಿಕ್ಕಿಂ, ಈಶಾನ್ಯ ಭಾರತದ  ಕೆಲ ರಾಜ್ಯಗಳು , ವಿದರ್ಭ, ಮರಾಠವಾಡ, ಮಧ್ಯ ಕರ್ನಾಟಕ ಮತ್ತು ತಮಿಳುನಾಡಿನ ಹೆಚ್ಚು ಮುನ್ನೆಚ್ಚರಿಕೆ ಅಗತ್ಯವಿದೆ ಎಂದು ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲಿ ಅ. 4 ಮತ್ತು 5 ರಂದು ಭಾರಿ ಮಳೆ ಸುರಿಯುವ ನಿರೀಕ್ಷೆ ಇರುವ ಕಾರಣ  ಆರೆಂಜ್ ಅಲರ್ಟ್‌ ಅನ್ನು  ಹವಾಮಾನ ಇಲಾಖೆ ಘೋಷಣೆ ಮಾಡಿದೆ. . ದಕ್ಷಿಣ ಒಳನಾಡಿನ ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರಕ್ಕೆ 5 ರಂದು ಯೆಲ್ಲೋ ಅಲರ್ಟ್‌  ಹಾಕಿದೆ.

ಈಶಾನ್ಯ ಭಾರತ, ಗಂಗಾ ಪಶ್ಚಿಮ ಬಂಗಾಳ, ಜಾರ್ಖಂಡ್, ಮಧ್ಯಪ್ರದೇಶದ ಕೆಲವು ಭಾಗಗಳು, ರಾಜಸ್ಥಾನ, ಪಂಜಾಬ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶದ ಕೆಲವು ಭಾಗಗಳು ಮತ್ತು ಒಡಿಶಾ ಮತ್ತು ಅಂಡಮಾನ್‌ನ ಸಾಧಾರಣ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಸೆಪ್ಟೆಂಬರ್ 26ರಂದು ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ‘ಗುಲಾಬ್’ ಚಂಡಮಾರುತ ಆಂಧ್ರ ಪ್ರದೇಶ, ಒಡಿಶಾ, ತೆಲಂಗಾಣ, ಪಶ್ಚಿಮ ಬಂಗಾಳ, ಮಹಾರಾಷ್ಟ್ರದ ಮೇಲೆ ಹೆಚ್ಚು ಪರಿಣಾಮ ಬೀರಿದ ಪ್ರಭಾವ ಆ ರಾಜ್ಯಗಳಲ್ಲಿ ಅಧಿಕ ಮಳೆಯಾಗಿತ್ತು, ಆದರೆ,  ಬುಧವಾರದಿಂದ ಗುಲಾಬ್ ಚಂಡಮಾರುತ ದುರ್ಬಲಗೊಂಡು ಅರಬ್ಬೀ ಸಮುದ್ರದಲ್ಲಿ ಶಾಹೀನ್ ಚಂಡಮಾರುತವಾಗಿ ಬದಲಾಗಿದ್ದು, ಇನ್ನು ಹಲವು ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.

ಇವೆಲ್ಲದರ ನಡುವೆ ರಾಜ್ಯದಲ್ಲಿ ಇಷ್ಟು ದಿನಗಳ ಕಾಲ ಬಿರುಸಿನ ಮಳೆ ಸುರಿದರೂ ಸಹ  ಈ ಬಾರಿ ರಾಜ್ಯದಲ್ಲಿ ಒಟ್ಟಾರೆಯಾಗಿ 8% ಮಳೆ ಕೊರತೆಯೊಂದಿಗೆ ಮುಂಗಾರು ಅವಧಿ ಅಧೀಕೃತವಾಗಿ ಅಂತ್ಯವಾಗುತ್ತಿದೆ ಎಂಬ ಅಚ್ಚರಿಯ ವಿಚಾರ ಬೆಳಕಿಗೆ ಬಂದಿದೆ.  ಆಗಸ್ಟ್‌ ತಿಂಗಳಿನಲ್ಲಿ 47% ಮಳೆ ಕೊರತೆ ಉಂಟಾಗಿತ್ತು. ಸೆಪ್ಟೆಂಬರ್ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ರಾಜ್ಯದಲ್ಲಿ ಒಟ್ಟಾರೆ 8% ಮಳೆ ಕೊರತೆಯಾಗಿದೆ ಎಂದು ಹೇಳಲಾಗುತ್ತಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *