Petrol-Diesel Prices : ವಾಹನ ಸವಾರರಿಗೆ ಬಿಗ್ ಶಾಕ್ : ಪೆಟ್ರೋಲ್- ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ!
ನವದೆಹಲಿ : ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಸಾಮಾನ್ಯ ಜನರ ಆದಾಯದ ಮೇಲೆ ಪರಿಣಾಮ ಬೀರುತ್ತಿದೆ. ಈ ಬೆಲೆ ಏರಿಕೆಯಿಂದ ಎಲ್ಲರೂ ತೊಂದರೆಗೊಳಗಾಗಿದ್ದಾರೆ. ದೇಶದ ಹಲವು ನಗರಗಳಲ್ಲಿ ಪೆಟ್ರೋಲ್ ಬೆಲೆ 100 ರೂ.ಗಿಂತ ಹೆಚ್ಚಾಗಿದೆ.
ತೈಲ ಮಾರುಕಟ್ಟೆ ಕಂಪನಿಗಳು ಸತತ ಆರನೇ ದಿನವಾದ ಇಂದು (ಭಾನುವಾರ) ಅಂದರೆ ಅಕ್ಟೋಬರ್ 10 ರಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ(Petrol-Diesel Prices)ಯನ್ನು ಹೆಚ್ಚಿಸಿವೆ. ಅಲ್ಲದೆ, ಡೀಸೆಲ್ ಬೆಲೆ 33 ಪೈಸೆಗಳಿಂದ 35 ಪೈಸೆಗಳಿಗೆ ಏರಿಕೆಯಾಗಿದೆ, ಪೆಟ್ರೋಲ್ ಬೆಲೆ 26 ರಿಂದ 30 ಪೈಸೆಗಳಷ್ಟು ಹೆಚ್ಚಾಗಿದೆ. ಮುಂಬೈನಲ್ಲಿ ಮೊದಲ ಬಾರಿಗೆ ಡೀಸೆಲ್ ಬೆಲೆ 100 ರ ಗಡಿ ದಾಟಿದೆ.
ದೆಹಲಿಯಲ್ಲಿ ಪೆಟ್ರೋಲ್ ಬೆಲೆ 104.14 ರೂ.ಗಳಾಗಿದ್ದರೆ ಡೀಸೆಲ್ ಬೆಲೆ(Diesel Prices) ಪ್ರತಿ ಲೀಟರ್ ಗೆ 92.82 ರೂ. ಮುಂಬೈನಲ್ಲಿ ಪೆಟ್ರೋಲ್ ಪ್ರತಿ ಲೀಟರ್ ಗೆ 110.12 ರೂ. ಮತ್ತು ಡೀಸೆಲ್ ಪ್ರತಿ ಲೀಟರ್ ಗೆ 100.66 ರೂ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 104.80 ರೂಪಾಯಿಗಳು ಮತ್ತು ಡೀಸೆಲ್ ಬೆಲೆ 95.93 ರೂಪಾಯಿಗಳು. ಅದೇ ಸಮಯದಲ್ಲಿ, ಚೆನ್ನೈನಲ್ಲಿ ಪೆಟ್ರೋಲ್ ಲೀಟರ್‌ಗೆ 101.53 ರೂ. ಮತ್ತು ಡೀಸೆಲ್ ಲೀಟರ್‌ಗೆ 97.26 ರೂ. ಆಗಿದೆ.
ದೇಶದ ಪ್ರಮುಖ ಮಹಾನಗರಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ
ದೆಹಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 92.82 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 104.14 ರೂ.
ಮುಂಬೈ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 100.66 ರೂ. ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 110.12 ರೂ.