ಭಾರತದಲ್ಲಿ ದೂರಾಗುತ್ತಿರುವ ಕೊರೋನಾ 3ನೇ ಅಲೆ ಆತಂಕ: ದೇಶದಲ್ಲಿಂದು 13,058 ಹೊಸ ಕೇಸ್ ಪತ್ತೆ, 164 ಮಂದಿ ಸಾವು

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ 3ನೇ ಅಲೆ ಆತಂಕ ದೂರಾಗುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದ್ದು, ದೇಶದಲ್ಲಿ ಮಂಗಳವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 13,058 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 164 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,40,94,373ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,52,454ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,83,118 ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 19,470 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,34,58,801ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 11,81,314 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 59,31,06,188 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಟ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್’ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 98,67,69,411 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *